ಬೆಂಗಳೂರು, ಏಪ್ರಿಲ್ 23: ವಿದೇಶದಿಂದ ಅಕ್ರಮವಾಗಿ 10 ಹಳದಿ ಬಣ್ಣದ ಅನಕೊಂಡ ಹಾವುಗಳನ್ನು (Anaconda Snake) ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್ಗಳನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೂಡಲೇ ಅಧಿಕಾರಿಗಳು ಪ್ರಯಾಣಿಕನನ್ನ ವಶಕ್ಕೆ ಪಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ರಕ್ಷಿಸಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ವನ್ಯಜೀವಿಗಳ ಕಳ್ಳಸಾಗಣೆ ಮಾಡಿದ ಆರೋಪದಡಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ ಪ್ರಯಾಣಿಕರ ಸಂಖ್ಯೆ ಶೇ. 35ರಷ್ಟು ಏರಿಕೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್ನನ್ನು ಪೊಲೀಸರು ಬಂಧಿಸಿದ್ದರು.
ವಿಕಾಸ ಗೌಡ ರನ್ ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್ಗೌಡನನ್ನು ಬಂಧಿಸಿದ್ದರು.
ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದನು. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:04 am, Tue, 23 April 24