ಬೇಸಿಗೆ ಎಫೆಕ್ಟ್: ನಮ್ಮ ಮೆಟ್ರೋದಲ್ಲಿ ಒಂದೇ ದಿನ 7, ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ

ನಮ್ಮ ಮೆಟ್ರೋ ಮತ್ತು ಬಿಎಂಟಿಸಿ ಬೆಂಗಳೂರಿನಲ್ಲಿ ಅತಿ ದೊಡ್ಡ ಸಂಪರ್ಕ ಸಾರಿಗೆ. ಈ ಎರಡೂ ಸಂಪರ್ಕ ಸಾರಿಗೆಯಲ್ಲಿ ದಿನಕ್ಕೆ ಲಕ್ಷಾಂತರ ಜನರು ಸಂಚರಿಸುತ್ತಾರೆ. ಇದೀಗ ಬೇಸಿಗೆಯಲ್ಲಿ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಕಾರಣ ಬೇಸಿಗೆ ರಜೆ ಮತ್ತು ಸುಡುವ ರಣ ಬಿಸಿಲು. ಹಾಗಿದ್ದರೆ ಎಷ್ಟು ಹೆಚ್ಚಾಗಿದೆ ಈ ಸ್ಟೋರಿ ಓದಿ..

ಬೇಸಿಗೆ ಎಫೆಕ್ಟ್: ನಮ್ಮ ಮೆಟ್ರೋದಲ್ಲಿ ಒಂದೇ ದಿನ 7, ಬಿಎಂಟಿಸಿಯಲ್ಲಿ 40 ಲಕ್ಷ ಜನ ಪ್ರಯಾಣ
ನಮ್ಮ ಮೆಟ್ರೋ, ಬಿಎಂಟಿಸಿ
Follow us
Kiran Surya
| Updated By: ವಿವೇಕ ಬಿರಾದಾರ

Updated on: Apr 20, 2024 | 8:09 AM

ಬೆಂಗಳೂರು, ಏಪ್ರಿಲ್​ 20: ಬೆಂಗಳೂರು ಮಹಾನಗರ ಸಾರಿಗೆ (BMTC) ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ರಾಜಧಾನಿಯ ಎರಡು ಕಣ್ಣುಗಳು ಇದ್ದಂತೆ. ಸಿಲಿಕಾನ್ ಸಿಟಿಯ ಜನರ ಪಾಲಿಗೆ ಪ್ರಮುಖ ಸಂಪರ್ಕ ಸಾರಿಗೆಗಳು. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರಿಂದ ಜನರು ತಂಪನೆಯ ವಾತಾವರಣ ಬಯಸುತ್ತಿದ್ದಾರೆ. ರಣ ಬಿಸಿಲಿನಲ್ಲಿ ಟ್ರಾಫಿಕ್​ನಲ್ಲಿ ಬೈಕ್ ಮತ್ತು ಕಾರಿನಲ್ಲಿ ಸಂಚಾರ ಜನರನ್ನು ಹೈರಾಣಾಗಿಸಿದೆ. ಹೀಗಾಗಿ ಜನರು ಕಾರು, ಬೈಕು ಬಿಟ್ಟು ನಮ್ಮ ಮೆಟ್ರೋ ಮತ್ತು ಬಿಎಂಟಿಸಿಯಲ್ಲಿ ಸಂಚಿರಿಸುತ್ತಿದ್ದಾರೆ.

ಬಿಸಿಲ ಹೊಡೆತಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಏಕಾಏಕಿ ಏರಿಕೆಯಾಗಿದೆ. ಒಂದೇ ದಿನ ನಮ್ಮ ಮೆಟ್ರೋದಲ್ಲಿ ದಾಖಲೆಯ 7.9 ಲಕ್ಷ ಜನ ಪ್ರಯಾಣ ಮಾಡಿದ್ದಾರೆ. ಮೆಟ್ರೋದಲ್ಲಿ ಎಸಿ ಇರುತ್ತೆ ಜೊತೆಗೆ ಟ್ರಾಫಿಕ್ ಕಿರಿಕಿರಿಯಿಲ್ಲದೆ ಹೋಗಬಹುದು ಅಂತ ಪ್ರಯಾಣಿಕರು ಮೆಟ್ರೋ ಮೊರೆ ಹೋಗುತ್ತಿದ್ದಾರೆ.

ಇನ್ನು ಈ ಬಿಸಿಲ ಹೊಡೆತ ಮುಂದುವರಿದರೆ, ಕೆಲ ದಿನಗಳಲ್ಲಿಯೇ ಪ್ರಯಾಣಿಕರ ಸಂಖ್ಯೆ 8 ಲಕ್ಷ ದಾಟುವ ನಿರೀಕ್ಷೆಯೂ ಇದೆ ಎಂದು ನಮ್ಮ ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ. ಇನ್ನು ಬಿಎಂಟಿಸಿಯಲ್ಲೂ ಏಕಾಏಕಿ ಒಂದೇ ದಿನಕ್ಕೆ 10 ಲಕ್ಷ ಜನ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಬಿಎಂಟಿಎಸಿ ಎಸಿ‌ ಬಸ್​ಗಳಿಗಂತು ಡಿಮ್ಯಾಂಡ್ ಹೆಚ್ಚಾಗಿದೆ. ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಆಗಿದೆ ಈ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆಯಿಂದ ಬಹುತೇಕರು ಬೆಂಗಳೂರಿಗೆ ಪ್ರವಾಸ ಬರುತ್ತಿದ್ದಾರೆ. ಇದರಿಂದ ಬಿಎಂಟಿಸಿ, ನಮ್ಮ ಮೆಟ್ರೋ ಏರಿ ಬೆಂಗಳೂರಿನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಸಿಗುತ್ತಿಲ್ಲ ಚಾಲಕರು, ಸಂಬಳ ಸರಿಯಾಗಿ ಕೊಡದಿರುವುದೇ ಕಾರಣ

ಈ ಹಿಂದೆ ನಮ್ಮ ಮೆಟ್ರೋದಲ್ಲಿ 5 ರಿಂದ 6 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರೆ, ಬಿಎಂಟಿಸಿಯಲ್ಲಿ 30 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೇಸಿಗೆಗೆ ಬರೋಬ್ಬರಿ 40 ಲಕ್ಷ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದಾರೆ.

ನಮ್ಮ ಮಕ್ಕಳ ಶಾಲೆ ರಜೆ ಇದೆ. ಹೀಗಾಗಿ ಬಿಎಂಟಿಸಿ ಎಸಿ ಬಸ್​ನಲ್ಲಿ ಮಕ್ಕಳನ್ನು ಕರೆದುಕೊಂಡು ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್​ಗೆ ಹೋಗುತ್ತಿದ್ದೇವೆ ಎಂದು ಪೋಷಕಿ ದಿವ್ಯಾ ಹೇಳಿದ್ದಾರೆ.

ಒಟ್ಟಿನಲ್ಲಿ ಬೇಸಿಗೆಯ ಸುಡು ಬಿಸಿಲಿಗೆ ಬೈಕ್, ಆಟೋ ಅಂತ ಪ್ರಯಾಣ ಮಾಡುತ್ತಿದ್ದವರೆಲ್ಲ ಮೆಟ್ರೋ ಮತ್ತು ಬಿಎಂಟಿಸಿ ಬಸ್​ಗಳ ಮೊರೆ ಹೋಗುತ್ತಿದ್ದಾರೆ. ಹೀಗಾಗಿಯೇ ಎರಡರಲ್ಲೂ ಪ್ರಯಾಣಿಕರ ಸಂಖ್ಯೆ ವಿಪರೀತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ