ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್! ಸುರೇಶ್​ ಕುಮಾರ್​ ಆಕ್ರೋಶ

| Updated By: ವಿವೇಕ ಬಿರಾದಾರ

Updated on: May 27, 2024 | 12:36 PM

ರಾಜ್ಯ ಶಿಕ್ಷಣ ಇಲಾಖೆ ಸಾಲು ಸಾಲು ಎಡವಟ್ಟು ಮಾಡಿಕೊಳ್ಳುತ್ತಿದೆ. ಇದೀಗ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ ವಿಚಾರವಾಗಿ ರಾಜ್ಯ ಸರ್ಕಾರ ನಗೆಪಾಟಲಿಗೆ ಈಡಾಗಿದೆ. ಶಿಕ್ಷಕರ ನೇಮಕಾತಿ ಹೊರಗುತ್ತಿಗೆಯನ್ನು ಸೆಕ್ಯೂರಿಟಿ ಸಂಸ್ಥೆಗೆ ನೀಡಿದೆ.

ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್! ಸುರೇಶ್​ ಕುಮಾರ್​ ಆಕ್ರೋಶ
ಬಿಬಿಎಂಪಿ
Follow us on

ಬೆಂಗಳೂರು, ಮೇ 27: ಇತ್ತೀಚಿಗೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಔಟ್​ ಆಫ್​ ಸಿಲೆಬಸ್​​ ಪ್ರಶ್ನೆಗಳನ್ನು ಕೇಳುವ ಮೂಲಕ ಸರ್ಕಾರ ಮುಜುಗರಕ್ಕೆ ಒಳಗಾಗಿತ್ತು. ಈ ಬೆನ್ನಲ್ಲೇಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ ವಿಚಾರವಾಗಿ ರಾಜ್ಯ ಸರ್ಕಾರ (Karnataka Government) ನಗೆಪಾಟಲಿಗೆ ಈಡಾಗಿದೆ. ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ (Teachers appointment) ಹೊರಗತ್ತಿಯನ್ನು ಬಿಬಿಎಂಪಿ ಸೆಕ್ಯೂರಿಟಿ ಸಂಸ್ಥೆಗೆ ಟೆಂಡರ್ ನೀಡಿದೆ.

ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ 700 ಶಿಕ್ಷಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಶಿಕ್ಷಕರ ನೇಮಕಾತಿ ಹೊರಗುತ್ತಿಗೆಯನ್ನು ಪಾಲಿಕೆ ಸೆಕ್ಯೂರಿಟಿ ಸಂಸ್ಥೆಗೆ ನೀಡಿದೆ. ಇದರಿಂದ ರಾಜ್ಯ ಸರ್ಕಾರ ನಗೆಪಾಟಲಿಗೆ ಈಡಾಗಿದೆ. ಅಲ್ಲದೆ ಪೋಷಕರ ಆಕ್ರೋಶಕ್ಕೂ ಕಾರಣವಾಗಿದೆ. ಸೆಕ್ಯೂರಿಟಿ ಕಂಪನಿಯಿಂದ ಶಿಕ್ಷಕರು ನೇಮಕವಾದರೆ ಗುಣಮಟ್ಟದ ಶಿಕ್ಷಣ ಸಿಗುತ್ತಾ? ಎಂಬ ಪ್ರಶ್ನೆ ಉದ್ಭವಿಸಿದೆ.

ಶಾಸಕ ಸುರೇಶ್​ ಕುಮಾರ್ ಆಕ್ರೋಶ

ಶಿಕ್ಷಕರ ಮತ್ತು ಸೇವಾ ಪೂರೈಕೆ ಮಾಡಲು ಸೆಕ್ಯೂರಿಟಿ ಏಜೆನ್ಸಿಗೆ ಗುತ್ತಿಗೆ ನೀಡಲಾಗಿದೆ. ನಮ್ಮ ವ್ಯವಸ್ಥೆ ಎಂತಹ ಸ್ಥಿತಿ ತಲುಪಿತು. ಬಿಬಿಎಂಪಿ ಕೈಗೊಂಡಿರುವ ನಿರ್ಧಾರ ವಿಚಿತ್ರ ವೈಖರಿ ಎಂದು ಶಿಕ್ಷಕರ ಸಾಮಾಜಿಕ ಜಾಲತಾಣದ ಮೂಲಕ ಮಾಜಿ ಸಚಿವ ಸುರೇಶ್​ ಕುಮಾರ್​ ಆಕ್ರೋಶ ಹೊರಹಾಕಿದ್ದಾರೆ.

ಶಿಕ್ಷಣ ಇಲಾಖೆ ಸಾಲು ಸಾಲು ಎಡವಟ್ಟು

ಇತ್ತೀಚಿಗೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ 20 ಕೃಪಾಂಕ ನೀಡಿತ್ತು. ಇದು ಸಹಜವಾಗಿಯೇ ಆಕ್ರೋಶಕ್ಕೆ ಕಾರಣವಾಗಿತ್ತು. ಕೃಪಾಂಕ ನೀಡುವುದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹೊಡೆತ ಬೀಳುತ್ತದೆ ಎಂಬುವುದು ವಾದವಾಗಿದೆ. ಕೃಪಾಂಕ ವಿಚಾರವಾಗಿ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೃಪಾಂಕ ರದ್ದು ಪಡಿಸಲು ನಿರ್ಧರಿಸಿದೆ.

ಇದನ್ನೂ ಓದಿ: ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸದ ಶಿಕ್ಷಣ ಇಲಾಖೆ! ವಿದ್ಯಾರ್ಥಿ, ಪೋಷಕರ ಜೊತೆ ಚೆಲ್ಲಾಟ

ಇನ್ನು ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯಾದ್ಯಂತ ನಡೆದ ವಿವಿಧ ವೃತ್ತಿಪರ ಕೋರ್ಸಗಳ ಸಾಮಾನ್ಯ ಪ್ರವೇಶ ಪರೀಕ್ಷೆ ಯಲ್ಲಿ ಕೈಬಿಟ್ಟಿರುವ ಪಠ್ಯಕ್ರಮ ಹಾಗೂ ವಿಷಯಗಳ ಪ್ರಶ್ನೆಗಳನ್ನು ಕೇಳಲಾಗಿದೆ. ಇದರಿಂದ ವೃತ್ತಿಪರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ ಎಂಬ ಆಕ್ರೋಶದ ಜೊತೆಗೆ ಕೃಪಾಂಕ ನೀಡುವಂತೆ ಆಗ್ರಹ ಕೇಳಿ ಬಂದಿತ್ತು.

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಕೆಲ ದಿನಗಳಷ್ಟೇ ಬಾಕಿ ಇದೆ. ಇಷ್ಟಾದರೂ ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಿಸುತ್ತಿಲ್ಲ. ಕಳೆದ ತಿಂಗಳು ಅಂದರೆ ಏಪ್ರಿಲ್ 12 ರಂದು ಶಾಲಾ ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳ ಪಟ್ಟಿಯ ವರದಿ ನೀಡುವಂತೆ ರಾಜ್ಯದ ಎಲ್ಲ ಬಿಇಎ ಹಾಗೂ ಡಿಡಿಪಿಐಗೆ ಸೂಚಿಸಿತ್ತು. ಅಲ್ಲದೆ ಏಪ್ರಿಲ್ 12 ರಿಂದ 19 ರವರೆಗೆ ಎಲ್ಲ ಆಕ್ಷೇಪಣೆ ಪರಶೀಲನೆ ನಡೆಸಿ ಎಪ್ರಿಲ್ 24 ರಂದು ಅಧಿಕೃತವಾಗಿ ಅನಧಿಕೃತ ಶಾಲೆಗಳ ಪಟ್ಟಿ ಪ್ರಕಟಸುವಂತೆ ಸೂಚಿಸಿತ್ತು. ಆದರೆ ಇಲ್ಲಿಯವರೆಗೂ ಅನಧಿಕೃತ ಶಾಲೆಗಳ ಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:35 pm, Mon, 27 May 24