ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ

ಬೆಂಗಳೂರಿನ ದೇವನಗಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್​ವೇನಲ್ಲಿ ಭದ್ರತಾ ದೃಷ್ಟಿಯಿಂದ ವಿಡಿಯೋ ಚಿತ್ರೀಕರಣವನ್ನು ನಿರ್ಭಂದಿಸಲಾಗಿದೆ. ಈ ನಿಯಮವನ್ನು ಮೀರಿ ಯಲಹಂಕದ ಓರ್ವ ಯೂಟ್ಯೂಬರ್ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದ ರನ್ ​ವೇನಲ್ಲಿ ವಿಡಿಯೋ ಚಿತ್ರೀಕರಿಸಿದ್ದ ಯೂಟ್ಯೂಬರ್​ ಬಂಧನ
ಬಂಧಿತ ವಿಕಾಸ್​ ಗೌಡ
Follow us
Shivaprasad
| Updated By: ವಿವೇಕ ಬಿರಾದಾರ

Updated on:Apr 23, 2024 | 9:32 AM

ಬೆಂಗಳೂರು, ಏಪ್ರಿಲ್​ 19: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ರನ್​ ವೇನಲ್ಲಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯೂಟ್ಯೂಬರ್​ನನ್ನು (Youtuber) ಪೊಲೀಸರು ​ಬಂಧಿಸಿದ್ದಾರೆ. ಯಲಹಂಕ ಮೂಲದ ವಿಕಾಸ್ ಗೌಡ ಬಂಧಿತ ಯೂಟ್ಯೂಬರ್.

ವಿಕಾಸ ಗೌಡ ರನ್ ​ವೇನಲ್ಲಿ ವಿಡಿಯೋ ಮಾಡಿ ತನ್ನ ಯೂಟ್ಯೂಬ್​ನಲ್ಲಿ ಅಪ್ಲೋಡ್​ ಮಾಡಿದ್ದನು. ವಿಡಿಯೋದಲ್ಲಿ “ಟಿಕೆಟ್ ಇಲ್ಲದೆ ಒಳಗಡೆ ಬಂದಿದ್ದೇನೆ, 24 ಗಂಟೆ ರನ್ ವೇ ಬಳಿಯೇ ಇದ್ದೆ. ಎಲ್ಲ ಅಧಿಕಾರಿಗಳ, ಸಿಬ್ಬಂದಿ ಕಣ್ಣುತಪ್ಪಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶ ಮಾಡಿ, ವಿಡಿಯೋ ಮಾಡಿದ್ದೇನೆ” ಎಂದು ಹೇಳಿದ್ದನು. ಈ ವಿಡಿಯೋವನ್ನು ನೋಡಿದ ಸಿಐಎಸ್ಎಫ್ ಅಧಿಕಾರಿಗಳು ವಿಕಾಸಗೌಡ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಿಕಾಸ್​ಗೌಡನನ್ನು ಬಂಧಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಇದನ್ನೂ ಓದಿ: ದೇಶದ 58 ವಿಮಾನ ನಿಲ್ದಾಣಗಳ ಪೈಕಿ ಚೋಟಾ ಮುಂಬೈ ಹುಬ್ಬಳ್ಳಿ ಏರ್​ಪೋರ್ಟ್​ಗೆ ಟಾಪ್​ 5 ಗರಿ

ನಂತರ ಪೊಲೀಸರು ವಿಚಾರಣೆ ನಡೆಸಿದಾಗ ” ವಿಮಾನದಲ್ಲಿ ಪ್ರಯಾಣಿಸಲು ಟಿಕೆಟ್ ಪಡೆದಿದ್ದೇನೆ. ಆದರೆ ಪ್ರಯಾಣಿಸದೆ ರನ್ ​ವೇನಲ್ಲೆ ಉಳಿದುಕೊಂಡೆ. ಸುಮಾರು 4-5 ಗಂಟೆಗಳ ಕಾಲ ಅಲ್ಲಿಯೇ ಇದ್ದು, ವಿಡಿಯೋ ಮಾಡಿಕೊಂಡು ಬಂದೆ ಎಂದು ಹೇಳಿದ್ದಾನೆ. ಸದ್ಯ ಈ ಬಗ್ಗೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:19 am, Wed, 17 April 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ