ಬೆಂಗಳೂರು: ವಾಂತಿ ಭೇದಿಯಿಂದ ಆಸ್ಪತ್ರೆ ಸೇರಿದ್ದ ಜ್ಯೂನಿಯರ್​ ಡ್ಯಾನ್ಸರ್, ಸಹಕಲಾವಿದೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ

ಎಸ್​ಎಸ್​ಎಲ್​ಸಿ ಓದಿದ್ದ ಸಿಂಚನಾ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಜೊತೆಗೆ ಕೆಲವು ಸಿನಿಮಾಗಳಲ್ಲಿ ಜ್ಯೂನಿಯರ್​ ಡ್ಯಾನ್ಸರ್, ಸಹಕಲಾವಿದೆ ಆಗಿ ಕೆಲಸ ಮಾಡಿದ್ದಳು.

ಬೆಂಗಳೂರು: ವಾಂತಿ ಭೇದಿಯಿಂದ ಆಸ್ಪತ್ರೆ ಸೇರಿದ್ದ ಜ್ಯೂನಿಯರ್​ ಡ್ಯಾನ್ಸರ್, ಸಹಕಲಾವಿದೆ ಸಾವು; ವೈದ್ಯರ ವಿರುದ್ಧ ಕುಟುಂಬಸ್ಥರ ಗಂಭೀರ ಆರೋಪ
ಸಿಂಚನಾ
Edited By:

Updated on: Feb 04, 2023 | 7:30 AM

ಬೆಂಗಳೂರು: ವಾಂತಿ ಭೇದಿಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಿಂಚನಾ(15) ಎಂಬ ಬಾಲಕಿ ಬೆಂಗಳೂರಿನ ಎಸ್​.ಕೆ.ಹೆಲ್ತ್​ಕೇರ್​ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಎಸ್​.ಕೆ.ಹೆಲ್ತ್​ಕೇರ್​ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಸಿಂಚನಾ ಕುಟುಂಬಸ್ಥರು ಆರೋಪಿಸಿದ್ದಾರೆ.

ಎಸ್​ಎಸ್​ಎಲ್​ಸಿ ಓದಿದ್ದ ಸಿಂಚನಾ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಜೊತೆಗೆ ಕೆಲವು ಸಿನಿಮಾಗಳಲ್ಲಿ ಜ್ಯೂನಿಯರ್​ ಡ್ಯಾನ್ಸರ್, ಸಹಕಲಾವಿದೆ ಆಗಿ ಕೆಲಸ ಮಾಡಿದ್ದಳು. ಶೂಟಿಂಗ್​ ಇದ್ದಾಗ ದಿನದ ಲೆಕ್ಕದಲ್ಲಿ ಜ್ಯೂನಿಯರ್​ ಡ್ಯಾನ್ಸರ್ ಆಗಿ ಕೆಲಸ ಮಾಡುತ್ತಿದ್ದಳು. ಆದ್ರೆ ವಾಂತಿ, ಭೇದಿಯಿಂದ ಬಳಲುತ್ತಿದ್ದ ಸಿಂಚನಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಈಗ ಸಿಂಚನಾ ಮೃತಪಟ್ಟಿದ್ದು ವೈದ್ಯರೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಇತ್ತ ಮತ್ತೊಂದೆಡೆ ಸಿಂಚನಾ ಆಸ್ಪತ್ರೆಗೆ ದಾಖಲಾಗುವಾಗಲೇ ಮೃತಪಟ್ಟಿದ್ದಾರೆ ಎಂದು ಎಸ್​.ಕೆ.ಹೆಲ್ತ್​ಕೇರ್​ ಆಸ್ಪತ್ರೆ ವೈದ್ಯರು ಹೇಳಿಕೆ ನೀಡಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಕೊಡತಿ ಪ್ರದೇಶದಲ್ಲಿ ಮನೆಗಳ್ಳತನಕ್ಕೆ ಯತ್ನ

ಬೆಂಗಳೂರಿನ ಕೊಡತಿ ಪ್ರದೇಶದಲ್ಲಿ ಮನೆಗಳ್ಳತನಕ್ಕೆ ಯತ್ನಿಸಿ ಖದೀಮ ವಿಫಲನಾಗಿದ್ದಾನೆ. ಕಳ್ಳತನಕ್ಕೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಕಳ್ಳ ಫ್ರಾನ್ಸಿಸ್​ ಎಂಬುವರ ಮನೆಯಲ್ಲಿ ಕಳ್ಳತನಕ್ಕೆ ಪ್ರಯತ್ನ ಮಾಡಿದ್ದಾನೆ. ಆದ್ರೆ ಕಳ್ಳತನದ ಪ್ರಯತ್ನ ವಿಫಲವಾಗಿದ್ದು ವಾಪಸ್ ಹೋಗಿದ್ದಾನೆ. ಮನೆಗಳ್ಳನ ಚಲನವಲನ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಸಾಮಿಲ್​ನಲ್ಲಿ ಆಕಸ್ಮಿಕ ಬೆಂಕಿ

ಇನ್ನು ಮತ್ತೊಂದೆಡೆ ಮೈಸೂರು ಜಿಲ್ಲೆ ಹುಣಸೂರಿನ ಬೋಟಿ ಬಜಾರ್​ನಲ್ಲಿ ಸಾಮಿಲ್​ನಲ್ಲಿದ್ದ ಮರಗಳು, ಯಂತ್ರೋಪಕರಣ ಬೆಂಕಿಗಾಹುತಿ ಆಗಿದೆ. ಮುಷರ್ ಅಹ್ಮದ್​ ಎಂಬುವರಿಗೆ ಸೇರಿದ ಸಾಮಿಲ್​ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ವಸ್ತುಗಳೆಲ್ಲ ಸುಟ್ಟು​ ಭಸ್ಮವಾಗಿದೆ. ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಕೆನ್ನಾಲಗೆ ವ್ಯಾಪಿಸದಂತೆ ನಿಯಂತ್ರಿಸಿದ್ದಾರೆ. ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:23 am, Sat, 4 February 23