Bengaluru News: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ.

Bengaluru News: ಕೆಎಸ್​ಆರ್​ಟಿಸಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ
ಮಹಿಳೆಯ ಬೈಕ್​, ಕೆಎಸ್​ಆರ್​ಟಿಸಿ ಬಸ್
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 04, 2023 | 5:07 PM

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ (KSRTC bus) ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೆಜೆಸ್ಟಿಕ್​ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ. ಲತಾ ಮೃತ ಮಹಿಳೆ. ಕೆಎಸ್​ಆರ್​ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್​ನಲ್ಲಿ ಬಟ್ಟೆ ಅಂಗಡಿಗೆ ಶಾಪಿಂಗ್​ಗಾಗಿ ತೆರಳುತ್ತಿದ್ದರು. ಮತ್ತೊಂದು ಬೈಕ್​ನಲ್ಲಿ ಪುತ್ರಿ ಕೂಡ ತೆರಳುತ್ತಿದ್ದರು. ಈ ವೇಳೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಸ್ ಬಂದಿದ್ದು, ಬಸ್​​ ಹಿಂಬದಿ ದ್ವಿಚಕ್ರ ವಾಹನಕ್ಕೆ ಟಚ್ ಆಗಿ ಇಬ್ಬರು ರಸ್ತೆಗೆ ಬಿದ್ದಿದ್ದಾರೆ.

ಈ ವೇಳೆ ಮಹಿಳೆ ಮೇಲೆ ಬಸ್​​ ಹರಿದಿದೆ. ಸದ್ಯ ಲತಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಾಡಿಗೆ ಮನೆಯಲ್ಲಿ ನೇಣುಬಿಗಿದುಕೊಂಡು ಅಕ್ಕ ತಂಗಿ ಆತ್ಮಹತ್ಯೆ

ಧಾರವಾಡ: ಕಲಘಟಗಿಯ ಬೆಂಡಿಗೇರಿ ಓಣಿಯ ಬಾಡಿಗೆ ಮನೆಯಲ್ಲಿ ಸೀರೆಯಿಂದ ನೇಣುಬಿಗಿದುಕೊಂಡು ಅಕ್ಕ ಮತ್ತು ತಂಗಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಭೂಮಿಕಾ ಹಡಪದ(19), ತಂಗಿ ಕಾವೇರಿ ಹಡಪದ(17) ಮೃತ ಸಹೋದರಿಯರು. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಒಂಟಿ ವೃದ್ಧೆಯ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಸಹಾಯ ಮಾಡಿದ ‘ಕಿಂಗ್ ಕೊಹ್ಲಿ’

ಆರ್ಕೆಸ್ಟ್ರಾ ಹಾಡಿಗಾಗಿ ಮರ್ಡರ್​​: 7 ಆರೋಪಿಗಳ ಬಂಧನ

ಚಿಕ್ಕಮಗಳೂರು: ಶಾಸಕರ ಅಭಿನಂದನಾ ಸಮಾರಂಭದಲ್ಲಿ ವ್ಯಕ್ತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ತರೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ತರೀಕೆರೆ ನಿವಾಸಿಗಳಾದ ಮೂರ್ತಿ, ಮಂಜು, ನವೀನ್​​, ಧನು, ಈಶ್ವರ್​, ಪರಮೇಶ್ವರ್​, ನಿತಿನ್​ನನ್ನು ಬಂಧಿತರು. ಘಟನೆ ಸಂಬಂಧ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ವರುಣ್​ಗೆ ಚಾಕು ಇರಿದು ಕಬಾಬ್ ಮೂರ್ತಿ ಎಂಬಾತ ಪರಾರಿಯಾಗಿದ್ದ. ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಘಟನೆ ನಡೆದಿತ್ತು.

ಇದನ್ನೂ ಓದಿ: ಬೆಸ್ಕಾಂಗೆ ನಕಲಿ ನೇಮಕಾತಿ ಮಾಡಿದ್ದ ಅರೋಪಿಗಳು ಅರೆಸ್ಟ್

ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು

ರಾಯಚೂರು: ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಕೇರಾ ತಾಲ್ಲೂಕಿನ ಆಲದಮರದ ತಾಂಡದಲ್ಲಿ ನಡೆದಿದೆ. ವಿರೂಪಾಕ್ಷ(28) ಮೃತ ರ್ದುದೈವಿ. ವಿರೂಪಾಕ್ಷ ಅರಕೇರಾ ಜುಟಮರಡಿ ಕೆಇಬಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಇಂದು(ಜೂ.4) ವಿದ್ಯುತ್ ಪೂರೈಕೆಯ ಸಮಸ್ಯೆಯನ್ನು ಪರಿಹರಿಸಲು ಕಂಬ ಹತ್ತಿದ್ದನು. ಈ ವೇಳೆ ವಿದ್ಯುತ್ ಶಾಕ್ ಹೊಡೆದಿದ್ದು, ವಿದ್ಯುತ್ ಕಂಬದ ಮೇಲೆಯೇ ಕೊನೆಯುಸಿರೆಳದಿದ್ದಾನೆ. ಈ ಕುರಿತು ದೇವದುರ್ಗ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:51 pm, Sun, 4 June 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ