Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ

ಶನಿವಾರದಿಂದ ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ದ್ವಿಚಕ್ರವಾಹನ, ಆಟೋರಿಕ್ಷಾ ಮತ್ತು ಕಾರುಗಳಂತಹ ಲಘು ಮೋಟಾರು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು BBMP ಅಧಿಕಾರಿಗಳು ತಿಳಿಸಿದ್ದಾರೆ.

Bengaluru News: ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯಲ್ಲಿ ಶನಿವಾರದಿಂದ ಲಘು ವಾಹನಗಳಿಗೆ ಸಂಚಾರ ಮುಕ್ತ
ಯಮಲೂರು-ಬೆಳ್ಳಂದೂರು ಕೆರೆ ರಸ್ತೆ
Follow us
TV9 Web
| Updated By: ಆಯೇಷಾ ಬಾನು

Updated on: Jun 03, 2023 | 3:24 PM

ಬೆಂಗಳೂರು: ದುರಸ್ತಿ ಕಾರ್ಯ ಹಿನ್ನೆಲೆ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಯಮಲೂರು-ಬೆಳ್ಳಂದೂರು ಕೆರೆ ರಸ್ತೆಯನ್ನು(Yemalur-Bellandur Lake Road) ಶನಿವಾರ ದ್ವಿಚಕ್ರವಾಹನ, ಆಟೋರಿಕ್ಷಾ ಮತ್ತು ಕಾರುಗಳಂತಹ ಲಘು ಮೋಟಾರು ವಾಹನಗಳ ಸಂಚಾರಕ್ಕೆ ತೆರೆಯಲಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ತಿಳಿಸಿದ್ದಾರೆ. ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಮುಖ್ಯ ಇಂಜಿನಿಯರ್ ಬಸವರಾಜ ಕಬಾಡೆ ಮಾತನಾಡಿ, ಸೇತುವೆ ಮರುನಿರ್ಮಾಣದಿಂದಾಗಿ ಯಮಲೂರು-ಬೆಳ್ಳಂದೂರು ಕೆರೆ ಕೋಡಿ ರಸ್ತೆ ಬಂದ್ ಆಗಿತ್ತು. ಹೆವಿ ವಾಹನಗಳ ಸಂಚಾರಕ್ಕೆ ಸದ್ಯ ಅನುಮತಿ ಇಲ್ಲ. ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಹಳೆಯ ಸೇತುವೆ ಕೇವಲ 12 ಮೀಟರ್ ಅಗಲವಿದ್ದು, ಮರುನಿರ್ಮಾಣ ಮಾಡಲಾಗಿದೆ ಎಂದು ಇಂಜಿನಿಯರ್ ಬಸವರಾಜ ಕಬಾಡೆ ಮಾಹಿತಿ ನೀಡಿದರು. “ತೆರಪಿನ ಅಗಲವು ಕೇವಲ 15-16 ಮೀಟರ್ ಆಗಿತ್ತು. ಈಗ ನೀರು ಹರಿಯುವಂತೆ ಸಂಪರ್ಗ ಗಾತ್ರವನ್ನು 24 ಮೀಟರ್‌ಗೆ ಮತ್ತು ರಸ್ತೆಯ ಅಗಲವನ್ನು 30 ಮೀಟರ್‌ಗೆ ಹೆಚ್ಚಿಸುತ್ತಿದ್ದೇವೆ. ರಸ್ತೆ ಮಟ್ಟಕ್ಕಿಂತ ಸುಮಾರು ಎರಡು ಅಡಿ ಎತ್ತರವಿದ್ದು, ಬೆಳ್ಳಂದೂರು ಕೆರೆಯಿಂದ ನೀರು ಸರಾಗವಾಗಿ ಹರಿಯುತ್ತದೆ ಎಂದರು.

ಶುಕ್ರವಾರ ರಸ್ತೆ ಬಂದ್‌ ಮಾಡಿದ್ದರಿಂದ ಬೆಂಗಳೂರು ನಿವಾಸಿಗಳು ದಿನನಿತ್ಯದ ಸಂಚಾರಕ್ಕೆ ತೊಂದರೆ ಅನುಭವಿಸಿದರು. ಹಲವು ಸ್ಥಳೀಯರು ವಾಹನ ಸಂಚಾರದ ವೇಳೆ ತಾವು ಎದುರಿಸಿದ ಕೆಟ್ಟ ಪರಿಸ್ಥಿತಿಯ ಬಗ್ಗೆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ

ಫುಡ್ ಬ್ಲಾಗರ್ ಹೇಮಂತ್ ಕಾಮತ್ ಎಂಬುವವರು ಟ್ವೀಟ್ ಮಾಡಿ, ಬೆಳ್ಳಂದೂರು ಕೆರೆ ರಸ್ತೆ ದುರಸ್ತಿ ಕಾರ್ಯ ಹಿನ್ನೆಲೆ ಬಂದ್ ಆಗಿದ್ದು, ನೀವು ಮಾರತ್ತಹಳ್ಳಿ ರಸ್ತೆ ಮೂಲಕ ಸಂಚರಿಸಬಹುದು. ಹಾಗೂ ಕೋರಮಂಗಲದಿಂದ ಬರಬಹುದು ಆದರೆ ಟ್ರಾಫಿಕ್ ಹೆಚ್ಚಿರುತ್ತೆ ಎಂದು ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ