AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಕಾರ್ಯಕ್ರಮದ ಮೇಲೆ ಜೇಬುಗಳ್ಳರ ಕಣ್ಣು, ಎಚ್ಚರ.. ಎಷ್ಟು ಪ್ರಕರಣ ನಡೆಯಿತು ಗೊತ್ತಾ?

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ಜೇಬುಗಳ್ಳರಿಗೆ ಪಿಕ್ ಪ್ಯಾಕೆಟ್ ಮಾಡಲು ಸಾಕಷ್ಟು ಅವಕಾಶಗಳನ್ನು ನೀಡ್ತಿವೆ, ಹೇಗೆಂದರೆ ರಾಜಕೀಯ ಕಾರ್ಯಕ್ರಮಗಳು ಮತ್ತು ಸಚಿವರ ನಿವಾಸಗಳ ಬಳಿ ಧರಣಿ ನಡೆಸುತ್ತಿರುವಾಗ ಈ ಖದೀಮರು ಜೇಬು ಕತ್ತರಿಸುತ್ತಿದ್ದಾರೆ.

ರಾಜಕೀಯ ಕಾರ್ಯಕ್ರಮದ ಮೇಲೆ ಜೇಬುಗಳ್ಳರ ಕಣ್ಣು, ಎಚ್ಚರ.. ಎಷ್ಟು ಪ್ರಕರಣ ನಡೆಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 04, 2023 | 1:57 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಜೇಬುಗಳ್ಳರ(Pickpockets) ಹಾವಳಿ ಹೆಚ್ಚಾಗಿದೆ. ಜೇಬುಗಳ್ಳರು ಸಾಮಾನ್ಯವಾಗಿ ಮಾರುಕಟ್ಟೆಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ಇತರೆ ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಕ್ಷಣ ಮಾತ್ರದಲ್ಲೆ ಪರ್ಸು, ಹಣ ಎಗರಿಸಿ ತಮ್ಮ ಕೈಚಳಕ ತೋರಿಸುತ್ತಾರೆ. ಆದ್ರೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಈ ಜೇಬುಗಳ್ಳರಿಗೆ ಪಿಕ್ ಪ್ಯಾಕೆಟ್ ಮಾಡಲು ಸಾಕಷ್ಟು ಅವಕಾಶಗಳನ್ನು ನೀಡ್ತಿವೆ, ಹೇಗೆಂದರೆ ರಾಜಕೀಯ ಕಾರ್ಯಕ್ರಮಗಳು ಮತ್ತು ಸಚಿವರ ನಿವಾಸಗಳ ಬಳಿ ಧರಣಿ ನಡೆಸುತ್ತಿರುವಾಗ ಈ ಖದೀಮರು ಜೇಬು ಕತ್ತರಿಸುತ್ತಿದ್ದಾರೆ.

ಇತ್ತೀಚೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿ ಜೇಬುಗಳ್ಳರು ವ್ಯಕ್ತಿಯೊಬ್ಬರ 40,000 ರೂಪಾಯಿ ಎಗರಿಸಿದ್ದರು. ಈ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಜೇಬುಗಳ್ಳರ ಪತ್ತೆಗೆ ಬಲೆ ಬೀಸಲಾಗಿದೆ. ಕಳೆದ ಎರಡು ವಾರಗಳಲ್ಲಿ ಡಿಕೆ ಶಿವಕುಮಾರ್ ಅವರ ನಿವಾಸದ ಮುಂದೆ ನಡೆದ ಜೇಬುಗಳ್ಳತನದ ಎರಡನೇ ಘಟನೆ ಇದು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಹೆಲಿಕಾಪ್ಟರ್​ನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಕೈ ಚಳಕ ತೋರಿಸಲು ಯತ್ನಿಸಿದ ಜೇಬುಗಳ್ಳ

ಮೇ 20 ರಂದು ಸದಾಶಿವನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಹನುಮಂತ ಅವರು ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಕೋರಲು ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತನಿಂದ 2,000 ರೂ.ಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ ಚೆನ್ನೈ ಮೂಲದ 52 ವರ್ಷದ ಭಾಸ್ಕರ್ ಆರ್ ಎಂಬಾತನನ್ನು ಬಂಧಿಸಿದ್ದರು. ಬಳಿಕ ಭಾಸ್ಕರ್, ತಾನು ಶಿವಕುಮಾರ್ ಅವರ ಅಭಿಮಾನಿ ಅವರಿಗೆ ಶುಭಾಶಯಗಳನ್ನು ತಿಳಿಸಲು ಭೇಟಿ ನೀಡಿದ್ದಾಗಿ ತಿಳಿಸಿದ್ದ.

ಗುರುವಾರ ಜೆ.ಪಿ.ನಗರದ ನಿವಾಸಿ 39 ವರ್ಷದ ಕಿರಣ್ ಎಚ್.ವಿ, ಡಿಕೆ ಶಿವಕುಮಾರ್ ಅವರಿಗೆ ಶುಭಾಶಯ ಕೋರಲು ಬಂದಿದ್ದರು. ಸಚಿವರನ್ನು ಭೇಟಿಯಾಗಲು ಸಾಕಷ್ಟು ಮಂದಿ ಕಾದು ಕುಳಿತಿದ್ದರಿಂದ ಕಿರಣ್ ಅವರು ಗೃಹ ಕಚೇರಿಯ ಹೊರಗೆ ಕಾದು ಕುಳಿತಿದ್ದರು. ಮಧ್ಯಾಹ್ನ 1.15ರ ಸುಮಾರಿಗೆ ಜನಜಂಗುಳಿಯ ನಡುವೆ ನಿಂತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಕಿರಣ್ ಅವರ ಪ್ಯಾಂಟ್ ಜೇಬಿನಲ್ಲಿದ್ದ 40 ಸಾವಿರ ರೂ. ಕದ್ದಿದ್ದ. 15 ನಿಮಿಷಗಳ ನಂತರ ಕಳ್ಳತನ ನಡೆದಿರುವುದು ಬಯಲಾಗಿತ್ತು.

ಇನ್ನು ಮೇ 20ರಂದು ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವೇಳೆ ಕಂಠೀರವ ಕ್ರೀಡಾಂಗಣವನ್ನು ಟಾರ್ಗೆಟ್ ಮಾಡಿದ ಕಳ್ಳರು, ಚಿನ್ನದ ಸರ ಮತ್ತು ಪರ್ಸ್​ಗಳನ್ನು ಕದ್ದೊಯ್ದಿದ್ದರು. ಉಳ್ಳಾಲ ಮುಖ್ಯರಸ್ತೆ ನಿವಾಸಿ ನಿಂಗಪ್ಪ ಎಂಬುವರು ಕಾರ್ಯಕ್ರಮ ಮುಗಿಸಿ ಕ್ರೀಡಾಂಗಣದಿಂದ ಹೊರ ಹೋಗುತ್ತಿದ್ದ ವೇಳೆ 27 ಗ್ರಾಂ ತೂಕದ ಚಿನ್ನದ ಸರ ಕಳವಾಗಿದ್ದು ಅದೇ ರೀತಿ ಹೇರೋಹಳ್ಳಿ ನಿವಾಸಿ 48 ವರ್ಷದ ತಿಮ್ಮಯ್ಯ ಎಂ ಎಂಬುವವರ 33 ಗ್ರಾಂ ಚಿನ್ನದ ಸರವನ್ನು ದುಷ್ಕರ್ಮಿಗಳು ದೋಚಿದ್ದ ತಿಳಿದುಬಂದಿತ್ತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್