Sign In

By signing in or creating an account, you agree with Associated Broadcasting Company's Terms & Conditions and Privacy Policy.

Bellandur Lake: ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಈಶ್ವರ್ ಖಂಡ್ರೆ

ಕರ್ನಾಟಕದ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಕೆರೆಯ ಸಧ್ಯದ ಮಾಲಿನ್ಯದ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು.

Bellandur Lake: ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Follow us
ಆಯೇಷಾ ಬಾನು
|

Updated on: May 31, 2023 | 3:40 PM

ಬೆಂಗಳೂರು: ಕರ್ನಾಟಕದ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಇಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆ ಬೆಳ್ಳಂದೂರು ಕೆರೆಗೆ ಭೇಟಿ ನೀಡಿ ಕೆರೆಯ ಸಧ್ಯದ ಮಾಲಿನ್ಯದ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದರು. ನೇರವಾಗಿ ಕೆರೆಗೆ ಸಂಸ್ಕರಿಸದ ನೀರು ಹರಿಯುವುದನ್ನು ತಡೆಯಲು ಕ್ರಮವಹಿಸುವಂತೆ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ನಿರ್ದೇಶನದಂತೆ ಕೆರೆ ಸ್ವಚ್ಛಗೊಳಿಸುವ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕು ಜೊತೆಗೆ ಸಂಸ್ಕರಿಸದ ತ್ಯಾಜ್ಯ ನೀರನ್ನು ಕೆರೆಗೆ ಹರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

2015 ಮತ್ತು 2017ರಲ್ಲಿ ಬೆಂಕಿಗೆ ಆಹುತಿಯಾದ ನಂತರ ಬೆಳ್ಳಂದೂರು ಕೆರೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಸದ್ಯ ಈಗ ನೂತನ ಸಚಿವ ಈಶ್ವರ್ ಖಂಡ್ರೆ ಕೆರೆಗೆ ಭೇಟಿ ನೀಡಿ ಕೆರೆಯ ಸಧ್ಯದ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

“ಕೆರೆ ಮಾಲಿನ್ಯದಿಂದ ಸುದ್ದಿಯಾಗಿದೆ. ಅದು ಬದಲಾಗಬೇಕು. ಕೆರೆಯನ್ನು ಸ್ವಚ್ಛಗೊಳಿಸಲು ಮತ್ತು ಹೂಳು ತೆಗೆಯಲು ಎನ್‌ಜಿಟಿ ಸ್ಪಷ್ಟ ಆದೇಶ ಹೊರಡಿಸಿದೆ ಆದರೆ ಅರ್ಧದಷ್ಟು ಕೆಲಸ ಮಾತ್ರ ಪೂರ್ಣಗೊಂಡಿದೆ. ಇದು ಕೊಳಚೆನೀರಿನಿಂದ ತುಂಬಿ ಹೋಗಿದೆ. ಈ ಕೆರೆಗೆ ತ್ಯಾಜ್ಯ ನೀರು ಒಳಹರಿವು ತಡೆಯಲು ಅಗತ್ಯವಿರುವ ಶುದ್ಧೀಕರಣ ಘಟಕಗಳು (ಎಸ್‌ಟಿಪಿ) 2024 ರಲ್ಲಿ ಪೂರ್ಣಗೊಳ್ಳಲಿದೆ. ಕೆರೆಯ ಮರುಸ್ಥಾಪನೆಯಲ್ಲಿ ಯಾವುದೇ ವಿಳಂಬವನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ನೀರಿನ ಗುಣಮಟ್ಟದ ಕುರಿತು ದಿನದ ವರದಿ ನೀಡಲು ಅಧಿಕಾರಿಗಳು ವಿಫಲರಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಖಂಡ್ರೆ, ಈ ಬಗ್ಗೆ ವಿವರವಾದ ವರದಿಯನ್ನು ಕೇಳಿದರು. ಬೆಳ್ಳಂದೂರು ಕೆರೆಯ ಸುತ್ತಲಿನ ಪ್ರದೇಶದಲ್ಲಿರುವ 490 ಕೈಗಾರಿಕೆಗಳ ಪೈಕಿ ಹಲವೆಡೆ ಶುದ್ಧೀಕರಣ ಘಟಕಗಳನ್ನು ಅಳವಡಿಸಿಲ್ಲ, ಅಧಿಕಾರಿಗಳು ಕೋಟ್ಯಂತರ ರೂಪಾಯಿ ದಂಡ ವಿಧಿಸುತ್ತಿದ್ದು ಅದನ್ನು ಮುಂದುವರಿಸುತ್ತಾರೆ, ನಿಯಮ ಉಲ್ಲಂಘಿಸಿದಲ್ಲಿ ಪ್ರಕರಣ ದಾಖಲಿಸಬೇಕಾಗುತ್ತೆ. ಕ್ರಮಕೈಗೊಳ್ಳಲು ವಿಫಲರಾದ ಅಧಿಕಾರಿಗಳು ಕೂಡ ಕ್ರಮ ಎದುರಿಸಬೇಕಾಗುತ್ತೆ” ಎಂದು ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ ನೀಡಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಕಿಕ್ ಮಾಡಿ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!