ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು

ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಬಾಣಂತಿ, ಹಸುಗೂಸು ದಾರುಣ ಸಾವು
ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ
Follow us
| Updated By: ಆಯೇಷಾ ಬಾನು

Updated on:Nov 19, 2023 | 10:48 AM

ಬೆಂಗಳೂರು, ನ.19: ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಬೆಸ್ಕಾಂ ಸಿಬ್ಬಂದಿ (BESCOM) ನಿರ್ಲಕ್ಷ್ಯಕ್ಕೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ (Death). ಬೆಂಗಳೂರಿನ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್​ ತಂತಿ ತುಳಿದು ಬಾಣಂತಿ ಹಾಗೂ 9 ತಿಂಗಳ ಹಸುಗೂಸು ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ತಾಯಿ ಸೌಂದರ್ಯ(23), 9 ತಿಂಗಳ ಮಗು ಲೀಲಾ ಮೃತಪಟ್ಟ ತಾಯಿ-ಮಗು. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮೃತ ಸೌಂದರ್ಯ ತಮ್ಮ ಮಗುವಿನ ಜೊತೆಗೆ ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ವಾಪಸ್ ಆಗುತ್ತಿದ್ದರು. ಮುಂಜಾನೆ 5 ಗಂಟೆಗೆ ಮನೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಮುಂಜಾನೆ 5 ಗಂಟೆ ವೇಳೆ ಕತ್ತಲಿದ್ದ ಕಾರಣ ರಸ್ತೆ ಬದಿ ಕಟ್ ಆಗಿ ನೆಲದಲ್ಲಿ ಬಿದ್ದಿದ್ದ ವಿದ್ಯುತ್​​ ವೈಯರ್​​​ ಕಾಣಿಸದೇ ತುಳಿದಿದ್ದಾರೆ. ಈ ವೇಳೆ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 304ಎ ಅಡಿ ಪ್ರಕರಣ ದಾಖಲಾಗಿದೆ. ಎಇ ಚೇತನ್‌, ಜೆಇ ರಾಜಣ್ಣ, ಬೆಸ್ಕಾಂ ಸ್ಟೇಷನ್ ಆಪರೇಟರ್ ಮಂಜು ಸೇರಿ ಮೂವರು ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಬಿಸಿಯೂಟದ ಸಾಂಬಾರ್​ಗೆ​ ಬಿದ್ದು ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಸಾವು, ಇಬ್ಬರು ಅಮಾನತು

ಇನ್ನು ಮೃತ ಸೌಂದರ್ಯ ಕಾಡುಗೋಡಿಯ ಎ.ಕೆ.ಗೋಪಾಲ್ ಕಾಲೋನಿಯ ನಿವಾಸಿ. ಬೆಂಗಳೂರಿನ ಸೌಂದರ್ಯರನ್ನು ಚೆನ್ನೈಗೆ ಮದುವೆ ಮಾಡಿಕೊಡಲಾಗಿತ್ತು. ದೀಪಾವಳಿ ಹಬ್ಬ ಆಚರಿಸಲು ಗಂಡ, ಹೆಂಡತಿ, ಮಗು ಊರಿಗೆ ಹೋಗಿದ್ದರು. ಇಂದು ಮುಂಜಾನೆ ಊರಿನಿಂದ ಹಸುಗೂಸು ಜೊತೆ ದಂಪತಿ ಬೆಂಗಳೂರಿಗೆ ಬಂದಿದ್ದಾರೆ. ಬಸ್ ಇಳಿದು ಮನೆಗೆ ನಡೆದು ಹೋಗುವಾಗ ರಸ್ತೆಯಲ್ಲಿ ತಂತಿ ತುಂಡಾಗಿ ಬಿದ್ದಿದ್ದನ್ನು ನೋಡದೆ ತಂತಿ ಮೇಲೆ ಸೌಂದರ್ಯ ಕಾಲಿಟ್ಟಿದ್ದಾರೆ. ಇದರಿಂದ ವಿದ್ಯುತ್ ಶಾಕ್ ಹೊಡೆದು ಬೆಂಕಿ ಹತ್ತಿಕೊಂಡಿದ್ದು ಪತಿ ಎದುರೇ ಪತ್ನಿ ಹಾಗೂ 9 ತಿಂಗಳ ಹಸುಗೂಸು ಸಜೀವದಹನವಾಗಿದ್ದಾರೆ. ಬೆಸ್ಕಾಂಗೆ ಕರೆ ಮಾಡಿ ಒಂದು ಗಂಟೆಯಾದ್ರೂ ಸ್ಥಳಕ್ಕೆ ಯಾರೂ ಬಂದಿಲ್ಲ. ಸೂಕ್ತ ಸಮಯಕ್ಕೆ ಸ್ಥಳೀಯ ನಿವಾಸಿಗಳೂ ಸಹಾಯಕ್ಕೆ ಬಂದಿಲ್ಲ. ಇದರಿಂದ ಕಣ್ಣ ಮುಂದೆ ಹೆಂಡತಿ, ಮಗು ಪ್ರಾಣಬಿಟ್ಟರೂ ಏನು ಮಾಡಲಾಗದ ಸ್ಥಿತಿಯಲ್ಲಿ ಸಂತೋಷ್ ಇದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:31 am, Sun, 19 November 23

ತಾಜಾ ಸುದ್ದಿ
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು