ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಗುರುವಾರ ಮುಂಜಾನೆ 234 ರೌಡಿಶೀಟರ್​ ಮನೆಗಳ ಮೇಲೆ ದಾಳಿ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ರೌಡಿಶೀಟರ್​​ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ 234 ರೌಡಿಶೀಟರ್‌ ಮನೆಗಳ ಮೇಲೆ ಪೊಲೀಸರ ದಾಳಿ
ವಿವಿ ಪುರಂ ಪೊಲೀಸ್​ ಠಾಣೆ
Follow us
TV9 Web
| Updated By: ವಿವೇಕ ಬಿರಾದಾರ

Updated on: Mar 22, 2024 | 8:26 AM

ಬೆಂಗಳೂರು, ಮಾರ್ಚ್​ 22: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ದಕ್ಷಿಣ (Bengaluru South) ವಿಭಾಗದ ಮೂರು ಉಪವಿಭಾಗಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳ (Police Station) ಅಧಿಕಾರಿಗಳು ರೌಡಿಶೀಟರ್‌ಗಳ ಮನೆಗಳ ಗುರುವಾರ ಮುಂಜಾನೆ ಹಠಾತ್​ನೆ ದಾಳಿ ಮಾಡಿದರು. 234 ಮನೆಗಳಲ್ಲಿ ತಪಾಸಣೆ ನಡೆಸಲಾಗಿದ್ದು, 177 ರೌಡಿಗಳು ಮನೆಯಲ್ಲಿರಲಿಲ್ಲ. ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಎಂಟು ರೌಡಿಗಳ ಮನೆಗಳಲ್ಲೂ ತಪಾಸಣೆ ನಡೆಸಲಾಗಿದೆ.

ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮ‌ನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಸುಬ್ರಹ್ಮಣ್ಯಪುರ ಉಪವಿಭಾಗದ ವ್ಯಾಪ್ತಿಯಲ್ಲಿ 125, ವಿವಿ ಪುರಂ ವ್ಯಾಪ್ತಿಯಲ್ಲಿ 76, ಜಯನಗರ ವ್ಯಾಪ್ತಿಯಲ್ಲಿ 33 ಮನೆಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸನಾತನ ಧರ್ಮಕ್ಕಾಗಿ ಒಗ್ಗೂಡುವ ಸಮಯ ಬಂದಿದೆ; ದ್ವೇಷದ ಪೋಸ್ಟ್ ಹಾಕಿದ್ದಕ್ಕೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ರೌಡಿಶೀಟರ್‌ಗಳ ಮನೆಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟಿರುವುದನ್ನು ಖಚಿತಪಡಿಸಿಕೊಳ್ಳಲು ತಪಾಸಣೆ ನಡೆಸಲಾಯಿತು. ಆದರೆ, ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ‌ ನಿಟ್ಟಿನಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ 102 ಕಡೆ ನಾಕಾಬಂದಿ

ಬೆಂಗಳೂರಿನ ಎಂಟು ವಿಭಾಗದಲ್ಲಿ 102 ಕಡೆ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಕೇಂದ್ರ ವಿಭಾಗದಲ್ಲಿ 16 ಕಡೆ, ಪೂರ್ವ ವಿಭಾಗದಲ್ಲಿ 10, ಉತ್ತರ ವಿಭಾಗದಲ್ಲಿ 27, ಈಶಾನ್ಯ ವಿಭಾಗದಲ್ಲಿ 12, ದಕ್ಷಿಣ ವಿಭಾಗದಲ್ಲಿ 8, ಆಗ್ನೇಯ ವಿಭಾಗದಲ್ಲಿ 10, ಪಶ್ಚಿಮ ವಿಭಾಗದಲ್ಲಿ 12, ವೈಟ್ ಫೀಲ್ಡ್ ವಿಭಾಗದಲ್ಲಿ 7 ಕಡೆ ನಾಕಾಬಂದಿ ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ