Bengaluru News: ಕಾಲೇಜು ಬಳಿಯೇ ಚಾಕುವಿನಿಂದ ಇರಿದು ಪಿಯು ವಿದ್ಯಾರ್ಥಿಯ ಕೊಲೆ

ನಗರದಲ್ಲಿ ಚಾಕುವಿನಿಂದ ಇರಿದು ಪಿಯು ವಿದ್ಯಾರ್ಥಿಯ ಕೊಲೆ ಮಾಡಿರುವಂತಹ ಘಟನೆ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಸುಹೇಲ್(18) ಹತ್ಯೆಗೊಳಗಾದ ಗೌತಮ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ.

Bengaluru News: ಕಾಲೇಜು ಬಳಿಯೇ ಚಾಕುವಿನಿಂದ ಇರಿದು ಪಿಯು ವಿದ್ಯಾರ್ಥಿಯ ಕೊಲೆ
ಪ್ರಾತಿನಿಧಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Jul 03, 2023 | 6:14 PM

ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಇರಿದು (stabbed) ಪಿಯು ವಿದ್ಯಾರ್ಥಿಯ ಕೊಲೆ ಮಾಡಿರುವಂತಹ ಘಟನೆ ಮಂಜುನಾಥ್ ನಗರದ ಗೌತಮ್ ಕಾಲೇಜು ಬಳಿ ನಡೆದಿದೆ. ಸುಹೇಲ್(18) ಹತ್ಯೆಗೊಳಗಾದ ಗೌತಮ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ. ಕೊಲೆ ಮಾಡಿದ್ದು ಯಾರು ಮತ್ತು ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬ ಮಾಹಿತಿ ಪೊಲೀಸ್​ ತನಿಖೆಯಿಂದ ಹೊರಬೀಳಬೇಕಿದೆ. ಸದ್ಯ ಸ್ಥಳಕ್ಕೆ ಬಸವೇಶ್ವರನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿಯಂತ್ರಣ ತಪ್ಪಿ ಕೆಳಗಿ ಬಿದ್ದ ಬೈಕ್​: ಸವಾರ ಸಾವು

ತುಮಕೂರು: ಕುಣಿಗಲ್​ ತಾಲೂಕಿನ ಚೆನ್ನತಿಮ್ಮನಪಾಳ್ಯ ಗೇಟ್​ ಬಳಿ ನಿಯಂತ್ರಣ ತಪ್ಪಿ ಬೈಕ್​ನಿಂದ ಬಿದ್ದು ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ದೀಪಕ್ ಮೃತ ಸವಾರ. ಹಾಸನದಿಂದ ಬೆಂಗಳೂರಿನ ಕಡೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗಾಂಜಾ ಪೆಡ್ಲರ್​​ಗಳ ಬೆನ್ನತ್ತಿ ನೆರೆ ರಾಜ್ಯಕ್ಕೆ ತೆರಳಿದ ಬೆಂಗಳೂರು ಪೊಲೀಸರು: ಮಹಾರಾಷ್ಟ್ರದಲ್ಲಿ ನಡೆಯಿತು ಸಿನಿಮಿಯ ಘಟನೆ

ಭೀಕರ ಅಪಘಾತ, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವು, ಮತ್ತೊರ್ವ ಗಂಭೀರ ಗಾಯ

ಉಡುಪಿ: ಬೈಂದೂರು ತಾಲೂಕಿನ ಮಾಸ್ತಿಕಟ್ಟೆ ಬಳಿ ಪಿಕಪ್​ ವಾಹನಕ್ಕೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾರುವಂತಹ ಘಟನೆ ನಡೆದಿದೆ. ರಾಜುಗೌಡ(46) ಮೃತ ವ್ಯಕ್ತಿ. ಗಾಯಗೊಂಡ ಪಿಕಪ್​ ವಾಹನ ಚಾಲಕ ಶಿವರಾಜ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಲ್ಲೂರು ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Bengaluru-Mysore Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪೊಲೀಸ್​ ಸೋಗಿನಲ್ಲಿ ಬಂದು ದರೋಡೆ

ಖಾಸಗಿ ಬಸ್​ ಡಿಕ್ಕಿಯಾಗಿ ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು

ನೆಲಮಂಗಲ: ಖಾಸಗಿ ಬಸ್​ ಡಿಕ್ಕಿಯಾಗಿ ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಜಾಲಹಳ್ಳಿ ಕ್ರಾಸ್​ನಲ್ಲಿ ನಡೆದಿದೆ. ದಿಶಾ(18) ಮೃತ ವಿದ್ಯಾರ್ಥಿನಿ. ಮಲ್ಲೇಶ್ವರಂ 18ನೇ ಕ್ರಾಸ್​​ನ MES ಕಾಲೇಜಿನ ದ್ವಿತೀಯ ಪಿಯು ಓದುತ್ತಿದ್ದಳು. ತಂದೆ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದಾಗ ಬಸ್​ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ದಿಶಾ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಬಸ್​ ಚಾಲಕನನ್ನು ಪೀಣ್ಯ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:46 pm, Mon, 3 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ