ಬೆಂಗಳೂರು: 1 ಕೋಟಿ ರೂ. ಸುಪಾರಿ ನೀಡಿ ತಂದೆ ಕೊಲ್ಲಿಸಿದ್ದ ಮಗ ಅರೆಸ್ಟ್

ಫೆ.13ರಂದು ಅಪಾರ್ಟ್​ಮೆಂಟ್​​ನ ಪಾರ್ಕಿಂಗ್​​ ಲಾಟ್​ನಲ್ಲಿ ನಾರಾಯಣಸ್ವಾಮಿ(70) ಎಂಬುವರ ಕೊಲೆ ಆಗಿತ್ತು. ಪುತ್ರ ಮಣಿಕಂಠ ಶಿವಕುಮಾರ್​, ನವೀನ್ ಕುಮಾರ್​ಗೆ ತಂದೆಯ ಕೊಲೆ ಮಾಡಲು 1 ಕೋಟಿ ರೂ. ಸುಪಾರಿ ನೀಡಿದ್ದ.

ಬೆಂಗಳೂರು: 1 ಕೋಟಿ ರೂ. ಸುಪಾರಿ ನೀಡಿ ತಂದೆ ಕೊಲ್ಲಿಸಿದ್ದ ಮಗ ಅರೆಸ್ಟ್
ಮೃತ ನಾರಾಯಣಸ್ವಾಮಿ, ಪುತ್ರ ಮಣಿಕಂಠ
Follow us
TV9 Web
| Updated By: ಆಯೇಷಾ ಬಾನು

Updated on: Feb 27, 2023 | 9:19 AM

ಬೆಂಗಳೂರು: ₹1 ಕೋಟಿ ಸುಪಾರಿ ನೀಡಿ ತಂದೆ ಕೊಲ್ಲಿಸಿದ್ದ ಮಗನನ್ನು ಬೆಂಗಳೂರಿನ ಮಾರತ್​ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪುತ್ರ ಮಣಿಕಂಠ, ಶಿವಕುಮಾರ್​, ನವೀನ್ ಕುಮಾರ್ ಬಂಧಿತ ಆರೋಪಿಗಳು.

ಫೆ.13ರಂದು ಅಪಾರ್ಟ್​ಮೆಂಟ್​​ನ ಪಾರ್ಕಿಂಗ್​​ ಲಾಟ್​ನಲ್ಲಿ ನಾರಾಯಣಸ್ವಾಮಿ(70) ಎಂಬುವರ ಕೊಲೆ ಆಗಿತ್ತು. ಪುತ್ರ ಮಣಿಕಂಠ ಶಿವಕುಮಾರ್​, ನವೀನ್ ಕುಮಾರ್​ಗೆ ಮುಂಗಡವಾಗಿ ₹1 ಲಕ್ಷ ನೀಡಿ ತನ್ನ ತಂದೆಯ ಕೊಲೆ ಮಾಡಲು 1 ಕೋಟಿ ರೂ. ಸುಪಾರಿ ನೀಡಿದ್ದ. ಅದರಂತೆಯೇ  ಇಬ್ಬರು ದುಷ್ಕರ್ಮಿಗಳು ನಾರಾಯಣಸ್ವಾಮಿಯನ್ನ ಕೊಂದಿದ್ದರು. ಸದ್ಯ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ

ಮಣಿಕಂಠ ಈ ಹಿಂದೆ ತನ್ನ ಮೊದಲ‌ ಪತ್ನಿಯನ್ನು ಕೊಲೆ ಮಾಡಿ ಜೈಲು ಸೇರಿದ್ದ. ಜೈಲಿನಿಂದ ಹೊರಬಂದು ಎರಡನೇ ವಿವಾಹವಾಗಿದ್ದ, ಒಂದು ಹೆಣ್ಣು ಮಗಳಿದ್ದಳು. ಎರಡನೇ ಮದುವೆ ಬಳಿಕವೂ ಬೇರೊಬ್ಬ ಮಹಿಳೆ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದನು. ಈ ವಿಚಾರ ಗೊತ್ತಾಗಿ ಎರಡನೇ ಪತ್ನಿ ಪತಿಯಿಂದ ದೂರವಿದ್ದಳು. ವಿಚ್ಛೇದನ ವಿಚಾರವಾಗಿಯೂ ಮಾತುಕತೆ ನಡೆಯುತ್ತಿತ್ತು.

ಆದರೆ ವಿಚ್ಛೇದನ ಕೊಡುವುದು ಬೇಡ ಎಂದು ಮಾವ ನಾರಾಯಣಸ್ವಾಮಿ ಕೇಳಿಕೊಂಡಿದ್ದನು. ಆದರು ಇದಕ್ಕೆ ಸೊಸೆ ಒಪ್ಪಲಿಲ್ಲ. ಹೀಗಾಗಿ ವಿಚ್ಛೇದನ ಬಳಿಕ ಸೊಸೆ ಹಾಗೂ ಮೊಮ್ಮಗಳಿಗೆ ಕಷ್ಟವಾಗಬಹುದು, ಅವರ ಜೀವನ ನಿರ್ವಹಣೆ ಕಷ್ಟ ಆಗುತ್ತೆ ಎಂದು ಸೈಟ್​​ವೊಂದನ್ನ ಅವರ ಹೆಸರಿಗೆ ಮಾಡಲು ಮಾವ ನಾರಾಯಣಸ್ವಾಮಿ ‌ಮುಂದಾಗಿದ್ದರು.

ಇದನ್ನೂ ಓದಿ: ಬಾಗಲಕೋಟೆ: ಹಳೆ ಪಿಂಚಣಿಗಾಗಿ ಹೋರಾಡುತ್ತಿದ್ದ ನಿವೃತ್ತ ಶಿಕ್ಷಕ; ಸರಕಾರ ಸ್ಪಂದಿಸದ ಹಿನ್ನೆಲೆ ವಿಷ ಸೇವಿಸಿ ಆತ್ಮಹತ್ಯೆ

ಹೀಗಾಗಿ ಸೊಸೆ ಹಾಗೂ ಮೊಮ್ಮಗಳ ಹೆಸರಿಗೆ ಸೈಟ್ ರಿಜಿಸ್ಟ್ರೇಷನ್ ಮಾಡಲು ನಾರಾಯಣಸ್ವಾಮಿ ಮುಂದಾಗಿದ್ದರು. ಆದರೆ ಇದು ಮಣಿಕಂಠನಿಗೆ ಇಷ್ಟವಿರಲಿಲ್ಲ. ಹೀಗಾಗಿ ತಂದೆ ಕೊಲೆಗೆ ಮಗ ಮಣಿಕಂಠ ಸುಪಾರಿ ನೀಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ.

ಎರಡನೇ ಪತ್ನಿಯನ್ನೂ ಕೊಲ್ಲಲು ಯತ್ನ

3-4 ತಿಂಗಳ ಹಿಂದೆ ಆರೋಪಿ ಮಣಿಕಂಠ ಎರಡನೇ ಪತ್ನಿಗೂ ಚಾಕು ಇರಿದು ಕೊಲೆ ಮಾಡಲು ಯತ್ನಿಸಿದ್ದನಂತೆ. ಆದರೆ ಪೊಲೀಸರು ಕೇಸ್ ದಾಖಲಿಕೊಳ್ಳದೆ ಸಂಧಾನ ಮಾಡಿಕಳುಹಿಸಿದ್ದರು.

ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ, ಆರೋಪಿ ಅರೆಸ್ಟ್

ಬೆಂಗಳೂರು: ವಿದೇಶಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನೈಜೀರಿಯಾ ಪ್ರಜೆ ನೋಕೊಚಾ. ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ದೊಡ್ಡಗುಬ್ಬಿ ಮೂಲದ ಮಹಿಳೆ ಬಳಿ 37 ಲಕ್ಷ ಹಣ ಪಡೆದು ವಂಚಿಸಿದ್ದ. ಮಹಿಳೆ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಲ್ಯಾಪ್​ಟಾಪ್​​​​​, 6 ಮೊಬೈಲ್​, ಸಿಮ್​​ಕಾರ್ಡ್, ಪಾಸ್​ಪೋರ್ಟ್ ಜಪ್ತಿ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಎರಡು ಕಡೆ ಫ್ರ್ಯಾಕ್ಚರ್ ಆಗಿರುವ ಕಾರಣ ಪ್ರಚಾರಕ್ಕೆ ಹೋಗಲಿಲ್ಲ: ರೇವಣ್ಣ
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ಇಬ್ರಾಹಿಂ ಮತ್ತು ದೇವೇಗೌಡರ ನಡುವೆ ನಡೆದ ಚರ್ಚೆಯೇನು ಅಂತ ಗೊತ್ತಿಲ್ಲ: ಹರೀಶ್
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ದೇವೇಗೌಡ ಮತ್ತು ಕುಮಾರಸ್ವಾಮಿ ಯಾವತ್ತಿಗೂ ನನ್ನ ನಾಯಕರು: ರೇವಣ್ಣ
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಹಿಂದೆ ಯೋಗೇಶ್ವರ್ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮಾತಾಡಿದ್ದರು: ಸುರೇಶ್
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಯಾದಗಿರಿ ತಲುಪಿ ರೈತರ ಸಂಕಷ್ಟ ಆಲಿಸುತ್ತಿರುವ ಬಸನಗೌಡ ಯತ್ನಾಳ್ ತಂಡ
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಬ್ಯಾಡ್ ಟಚ್, ವಿಡಿಯೋ ವೈರಲ್
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಶಿಶುವನ್ನು ವಾಪಸ್ಸು ಪಡೆದ ತಂದೆತಾಯಿಗಳ ಸಂತೋಷಕ್ಕೆ ಪಾರವೇ ಇಲ್ಲ!
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮುಸ್ಲಿಮರಿಗೆ ಮತದಾನದ ಹಕ್ಕು: ಸ್ವಾಮೀಜಿ ಹೇಳಿಕೆಗೆ ಮಹದೇವಪ್ಪ ಗರಂ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
ಮೋಕ್ಷಿತಾ ಈಗ ಯುವರಾಣಿ; ಇಬ್ಭಾಗವಾದ ಬಿಗ್ ಬಾಸ್ ಮನೆ
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು
6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು