ಯುವತಿಯರ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತಿದ್ದವನ ಬಂಧನ
ಮುಂದುವರೆದ ತಂತ್ರಜ್ಞಾನದಲ್ಲಿ ಎಲ್ಲವೂ ಸಾಧ್ಯ. ಆದರೆ ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಹೌದು, ಯುವತಿಯರ ಫೋಟೋ ಮಾರ್ಫ್(Photo morphing) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಯುವಕನನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು(Cyber Crime Police) ಬಂಧಿಸಿದ್ದಾರೆ.
ಬೆಂಗಳೂರು, ಮೇ.28: ಯುವತಿಯರ ಫೋಟೋ ಮಾರ್ಫ್(Photo morphing) ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಯುವಕನನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರು(Cyber Crime Police) ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರ ಫೋಟೋಗಳನ್ನ ಮಾರ್ಫ್ ಮಾಡ್ತಿದ್ದ ಆರೋಪಿ, ಅದನ್ನು ಇನ್ಸ್ಟಾಗ್ರಾಮ್ ಮೂಲಕ ಶೇರ್ ಮಾಡುತ್ತಿದ್ದ. ಇತ್ತೀಚೆಗೆ ಹದಿನೈದು ವರ್ಷದ ಬಾಲಕಿಯೊಬ್ಬಳ ಫೋಟೋ ಮಾರ್ಫ್ ಮಾಡಿದ್ದ. ಈ ಬಗ್ಗೆ ಬಾಲಕಿ ಪೋಷಕರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.
ಜೊತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರು ವಶ
ಈ ಕುರಿತು ದೂರು ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ತನಿಖೆ ನಡೆಸಿ, ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಜೊತೆಗೆ ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದ್ದು, ಬಂಧಿತ ಆರೋಪಿತನಿಂದ ಮೂರು ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ. ಈ ಕುರಿತು ಈಶಾನ್ಯ ವಿಭಾಗ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೂ ಡೀಪ್ ಫೇಕ್ ಕಾಟ, ಅಶ್ಲೀಲವಾಗಿ ಎಡಿಟ್ ಮಾಡಿ ಫೋಟೋ ಹರಿಬಿಟ್ಟ ಕಿಡಿಗೇಡಿ
ಶಾಲಾ ವಿದ್ಯಾರ್ಥಿನಿಯರಿಗೂ ಡೀಪ್ ಫೇಕ್ ಕಾಟ
ಇದೇ ಮೇ 24 ರಂದು ಬೆಂಗಳೂರಿನ ಪ್ರತಿಷ್ಠಿತ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಭಾವಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್ ಮಾಡಿ ಎಲ್ಲಡೆ ಹರಿಬಿಡಲಾಗಿದ್ದ ಘಟನೆ ನಡೆದಿತ್ತು. 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇನ್ಸ್ಟಾಗ್ರಾಮನಲ್ಲಿ ಗ್ರೂಪ್ ರಚಿಸಿಕೊಂಡಿದ್ದಾರೆ. ಬಳಿಕ ಈ ಗ್ರೂಪ್ನಲ್ಲಿ ಅನಾಮದೇಯ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯರ ಮಾರ್ಫಿಂಗ್ ಭಾವಚಿತ್ರಗಳನ್ನು ಶೇರ್ ಮಾಡುತ್ತಾನೆ. ಈ ವಿಚಾರ ತಿಳಿದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು.ಈ ಕುರಿತು ಪೋಷಕರು ಈಗಾಗಲೇ ಸೈಬರ್ ಸೆಲ್ಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ