ಬೆಂಗಳೂರು: ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ಕಿಡ್ನ್ಯಾಪ್ ಮಾಡಿದ ಮೂವರು ಆರೋಪಿಗಳು ಅರೆಸ್ಟ್

ತಮ್ಮ ಮೇಲಿರುವ ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿದ್ದ ಮೂವರು ಆರೋಪಿಗಳನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್​ 31ರಂದು ಬೆಳಗ್ಗಿನ ಜಾವ 2.30ಕ್ಕೆ ಸಂದೀಪ್​ಕುಮಾರ್ ಎಂಬ ವ್ಯಕ್ತಿಯನ್ನು​​ ಕಿಡ್ನ್ಯಾಪ್ ಮಾಡಿ ತಮಿಳುನಾಡಿಗೆ ಕರೆದೊಯ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಹುಡುಕಾಟ ನಡೆಯುತ್ತಿದೆ.

ಬೆಂಗಳೂರು: ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ಕಿಡ್ನ್ಯಾಪ್ ಮಾಡಿದ ಮೂವರು ಆರೋಪಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
| Updated By: ಆಯೇಷಾ ಬಾನು

Updated on: Sep 10, 2023 | 9:35 AM

ಬೆಂಗಳೂರು, ಸೆ.10: ತಮ್ಮ ಮೇಲಿರುವ ಅಪರಾಧ ಪ್ರಕರಣಗಳ ಇತ್ಯರ್ಥಕ್ಕಾಗಿ ಹಣ ಬೇಕೆಂದು ವ್ಯಕ್ತಿಯನ್ನು ಕಿಡ್ನ್ಯಾಪ್(Kidnap)​ ಮಾಡಿದ್ದ ರೌಡಿಶೀಟರ್​ ಸೇರಿ ಮೂವರನ್ನು ಸಿ.ಕೆ.ಅಚ್ಚುಕಟ್ಟು ಪೊಲೀಸರು ಬಂಧಿಸಿದ್ದಾರೆ(CK Achukattu Police Station). ಅರುಣ್​ ಅಲಿಯಾಸ್​ ಸುನಾಮಿ, ಕಿರಣ್​ಕುಮಾರ್​, ಸೋಮಶೇಖರ್ ಬಂಧಿತ ಆರೋಪಿಗಳು. ಆಗಸ್ಟ್​ 31ರಂದು ಬೆಳಗ್ಗಿನ ಜಾವ 2.30ಕ್ಕೆ ಸಂದೀಪ್​ಕುಮಾರ್ ಎಂಬ ವ್ಯಕ್ತಿಯನ್ನು​​ ಕಿಡ್ನ್ಯಾಪ್ ಮಾಡಿ ತಮಿಳುನಾಡಿಗೆ ಕರೆದೊಯ್ದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಮತ್ತೋರ್ವ ಆರೋಪಿ ಪರಾರಿಯಾಗಿದ್ದು ಹುಡುಕಾಟ ನಡೆಯುತ್ತಿದೆ.

ಆಗಸ್ಟ್​ 31ರಂದು ಸಂದೀಪ್​ಕುಮಾರ್​ನನ್ನು ಕಿಡ್ನ್ಯಾಪ್ ಮಾಡಿ ತಮಿಳುನಾಡಿಗೆ ಕರೆದೊಯ್ದಿದ್ದ ಆರೋಪಿಗಳು ತಮಿಳುನಾಡಿನ ಫಾರಂ ಹೌಸ್​​ನಲ್ಲಿಟ್ಟು 50 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಸಂದೀಪ್ ಕುಟುಂಬಕ್ಕೆ ಬೆದರಿಸಿದ್ದರು. ಆದರೆ ಬೇರೆ ಜಾಗಕ್ಕೆ ಶಿಫ್ಟ್ ಮಾಡುವ ವೇಳೆ ಸಂದೀಪ್​ಕುಮಾರ್​ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದರು. ಬಳಿಕ ತಮಿಳುನಾಡಿನ ಪೊಲೀಸರ ಸಹಾಯ ಪಡೆದು ಬೆಂಗಳೂರಿಗೆ ವಾಪಸಾಗಿದ್ದರು. ನಂತರ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸಂದೀಪ್ ದೂರು ಆಧರಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ: ಚಿತ್ರದುರ್ಗ: ಸ್ನೇಹಿತನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಪ್ರಯತ್ನ; ಆರೋಪಿಗಳು ಸಿಕ್ಕಿಬಿದ್ದಿದ್ದೆ ರೋಚಕ

ಗಾಂಜಾ‌ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಕೋಲಾರ: ಕೆಜಿಎಫ್ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.  ಕೆಜಿಎಫ್​ ತಾಲೂಕಿನ ಚೊಕ್ಕರ ಬಂಡೆ ಬಳಿ ಗಾಂಜಾ ಮಾರುತ್ತಿದ್ದ ಆಂಧ್ರ ಮೂಲದ ರೆಡ್ಡಪ್ಪರಾಜು ಎಂಬ ವ್ಯಕ್ತಿಯನ್ನು ಕೆಜಿಎಫ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿ ಇದ್ದ 11 ಕೆಜಿ 200 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆ್ಯಂಡರ್​​ ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಅಪರಾಧ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ