ಬೆಂಗಳೂರಿನಲ್ಲಿ ಇಂದು RCB vs LSG ಪಂದ್ಯ: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ

IPL 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB vs LSG ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು RCB vs LSG ಪಂದ್ಯ: ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ
RCB vs LGS ಪಂದ್ಯಕ್ಕೆ ಸಂಚಾರ ಸಲಹೆ
Follow us
ವಿವೇಕ ಬಿರಾದಾರ
|

Updated on:Apr 02, 2024 | 9:39 AM

ಬೆಂಗಳೂರು, ಏಪ್ರಿಲ್​​​​ 02: ಟಾಟಾ ಸರಣಿಯ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು (RCB) vs ಲಕ್ನೋ ಸೂಪರ್​ ಜೈಂಟ್ಸ್​ (LSG) ಪಂದ್ಯ ಇಂದು (ಏ.02) ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Ground) ನಡೆಯಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ (Traffic advisory) ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಇಲಾಖೆ ತಿಳಿಸಿದೆ.

ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲಯಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್​ ಪ್ರೇಮಿಗಳ ಅನುಕೂಲಕ್ಕಾಗಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ.

ವಾಹನ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ

ರಾತ್ರಿ 7:30ಕ್ಕೆ RCB vs LSG ಪಂದ್ಯ ಆರಂಭವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಧ್ಯಾಹ್ನ 3 ಗಂಟೆಯಿಂದಲೆ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ನಿಲುಗಡೆ ನಿಷೇಧವಿರುವ ಸ್ಥಳಗಳು ಹೀಗಿದೆ..

ಕ್ವೀನ್ಸ್​ ರಸ್ತೆ, ಎಂಜಿ ರಸ್ತೆ, ಕಬ್ಬನ್​ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್​ ಸ್ಟ್ರೀಟ್​ ರಸ್ತೆ, ಸೆಂಟ್​ ಮಾರ್ಕ್ಸ್​ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್​ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್​​ ಮಲ್ಯ ರಸ್ತೆ, ಕಿಂಗ್ಸ್​ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇದನ್ನೂ ಓದಿ: ಐಪಿಎಲ್​ನಲ್ಲಿಂದು ಆರ್​ಸಿಬಿ ಪಂದ್ಯ: ಗೆಲ್ಲಬೇಕಾದರೆ ಬದಲಾವಣೆ ಅನಿವಾರ್ಯ

ವಾಹನ ನಿಲುಗಡೆ ಸ್ಥಳಗಳು

ಇನ್ನು ಕ್ರಿಕೇಟ್​ ಪ್ರೇಮಿಗಳ ವಾಹನ ನಿಲುಗಡೆಗಾಗಿ ಬೆಂಗಳೂರು ಸಂಚಾರ ಪೊಲೀಸ್​ ಅಧಿಕಾರಿಗಳು ಕೆಲವು ಸ್ಥಳಗಳನ್ನು ಗುರುತಿಸಿದ್ದಾರೆ. ವಾಹನ ನಿಲುಗಡೆ ಸ್ಥಳಗಳು…

ಸೆಂಟ್​ ಜೋಸೆಫ್​​ ಇಂಡಿಯನ್ ಸ್ಕೂಲ್​ ನೈದಾನ, ಯು.ಬಿ ಸಿಟಿ ಪಾರ್ಕಿಂಗ್​ ಸ್ಥಳ, ಬಿಎಂಟಿಸಿ ಬಸ್​ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್​ ಕೆಜಿಐಡಿ ಬಿಲ್ಡಿಂಗ್​, ಕಿಂಗ್ಸ್​ ರಸ್ತೆ (ಕಬ್ಬನ್​ಪಾರ್ಕ್​ ಒಳಭಾಗ) ದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

ಇಂದಿನ ಪಂದ್ಯದ ಬಗ್ಗೆ ಮಾಹಿತಿ

ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ನಾಲ್ಕನೇ ಪಂದ್ಯವಾಗಿದ್ದು, ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.

ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್​ನಲ್ಲಿ ಮೇಲೇಳಲು ಆರ್​ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:31 am, Tue, 2 April 24

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?