ಬೆಂಗಳೂರು, ಏಪ್ರಿಲ್ 02: ಟಾಟಾ ಸರಣಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) vs ಲಕ್ನೋ ಸೂಪರ್ ಜೈಂಟ್ಸ್ (LSG) ಪಂದ್ಯ ಇಂದು (ಏ.02) ಬೆಂಗಳೂರಿನ (Bengaluru) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Ground) ನಡೆಯಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಪಂದ್ಯ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಡೆಯವರೆಗೆ ರಸ್ತೆ ಬಳಕೆದಾರರ ಅನುಕೂಲ ಮಾಡಿಕೊಡುವ ಸಲುವಾಗಿ ಸಂಚಾರ ವ್ಯವಸ್ಥೆಯಲ್ಲಿ (Traffic advisory) ಬದಲಾವಣೆ ಮಾಡಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸ್ ಇಲಾಖೆ ತಿಳಿಸಿದೆ.
ಪಂದ್ಯ ನಡೆಯುವ ಹಿನ್ನೆಲೆಯಲ್ಲಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ನಿಲಯಗಡೆಯನ್ನು ನಿಷೇಧಿಸಲಾಗಿದೆ. ಆದರೆ ಕ್ರಿಕೆಟ್ ಪ್ರೇಮಿಗಳ ಅನುಕೂಲಕ್ಕಾಗಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ಕೆಲವು ಸ್ಥಳಗಳನ್ನು ಗುರುತಿಸಲಾಗಿದೆ.
ರಾತ್ರಿ 7:30ಕ್ಕೆ RCB vs LSG ಪಂದ್ಯ ಆರಂಭವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಧ್ಯಾಹ್ನ 3 ಗಂಟೆಯಿಂದಲೆ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ. ವಾಹನ ನಿಲುಗಡೆ ನಿಷೇಧವಿರುವ ಸ್ಥಳಗಳು ಹೀಗಿದೆ..
ಕ್ವೀನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಐಪಿಎಲ್ನಲ್ಲಿಂದು ಆರ್ಸಿಬಿ ಪಂದ್ಯ: ಗೆಲ್ಲಬೇಕಾದರೆ ಬದಲಾವಣೆ ಅನಿವಾರ್ಯ
ಇನ್ನು ಕ್ರಿಕೇಟ್ ಪ್ರೇಮಿಗಳ ವಾಹನ ನಿಲುಗಡೆಗಾಗಿ ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳು ಕೆಲವು ಸ್ಥಳಗಳನ್ನು ಗುರುತಿಸಿದ್ದಾರೆ. ವಾಹನ ನಿಲುಗಡೆ ಸ್ಥಳಗಳು…
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ನೈದಾನ, ಯು.ಬಿ ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ (ಕಬ್ಬನ್ಪಾರ್ಕ್ ಒಳಭಾಗ) ದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಯಲ್ಲಿಂದು (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಐಪಿಎಲ್ 2024 ರಲ್ಲಿ ಇದು ಆರ್‌ಸಿಬಿಯ ನಾಲ್ಕನೇ ಪಂದ್ಯವಾಗಿದ್ದು, ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
ಆಡಿರುವ ಮೂರು ಪಂದ್ಯಗಳಿಂದ ಎರಡು ಅಂಕ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮತ್ತೊಂದೆಡೆ, ಲಕ್ನೋ ಎರಡು ಪಂದ್ಯದಿಂದ 2 ಅಂಕಗಳನ್ನು ಹೊಂದಿ ಆರನೇ ಸ್ಥಾನದಲ್ಲಿದೆ. ಪಾಯಿಂಟ್ಸ್ ಟೇಬಲ್ನಲ್ಲಿ ಮೇಲೇಳಲು ಆರ್ಸಿಬಿ ಈ ಪಂದ್ಯ ಗೆಲ್ಲಲೇ ಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:31 am, Tue, 2 April 24