AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಿಸ್​ ಆಗಿ ಬೇರೆ ಕ್ಯಾಬ್ ಹತ್ತಿದ ಮಹಿಳೆ, ಸಿಟ್ಟಿಗೆದ್ದು ಹಲ್ಲೆ ಮಾಡಿದ ಚಾಲಕ: ಮುಂದೇನಾಯ್ತು?

Bengaluru News: ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಊಬರ್ ಬುಕ್​ ಮಾಡಿದ್ದ ಮಹಿಳೆ ಮೇಲೆ ಚಾಲಕ ಹಲ್ಲೆ ನಡೆಸಿದ ಘಟನೆ ನಗರದ ಬೋಗನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಮಿಸ್​ ಆಗಿ ಬೇರೆ ಕ್ಯಾಬ್ ಹತ್ತಿದ ಮಹಿಳೆ, ಸಿಟ್ಟಿಗೆದ್ದು ಹಲ್ಲೆ ಮಾಡಿದ ಚಾಲಕ: ಮುಂದೇನಾಯ್ತು?
ಸಿಸಿಟಿವಿಯಲ್ಲಿ ಸೆರೆಯಾದ ಹಲ್ಲೆಯ ದೃಶ್ಯ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on:Aug 10, 2023 | 9:08 AM

Share

ಬೆಂಗಳೂರು, ಆ.10: ಬೆಂಗಳೂರು, ಆ.10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಊಬರ್ ಬುಕ್​ ಮಾಡಿದ್ದ ಮಹಿಳೆ ಮೇಲೆ ಚಾಲಕ ಹಲ್ಲೆ ನಡೆಸಿದ ಘಟನೆ ನಗರದ ಬೋಗನಹಳ್ಳಿಯಲ್ಲಿ ನಡೆದಿದೆ. ಊಬರ್ ಚಾಲಕ (Uber Driver) ಮಹಿಳೆ ಮೇಲೆ ಹಲ್ಲೆ ನಡೆಸಿರುವ ದೃಶ್ಯಗಳು ಅಪಾರ್ಟ್​​ಮೆಂಟ್​​ನ ಸಿಸಿಟಿವಿ ಕ್ಯಾಮೆರಾದಲ್ಲಿ (CCTV Footage) ಸೆರೆಯಾಗಿದೆ. ಹಲ್ಲೆಗೊಳಗಾದ ಮಹಿಳೆಯ ಪತಿ ಅಜಯ್ ಅಗರ್ವಾಲ್ ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಬುಧವಾರ ಬೆಳಗ್ಗೆ ಮಹಿಳೆ ತನ್ನ ಮಗನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಊಬರ್ ಕ್ಯಾಬ್​ ಬುಕ್ ಮಾಡಿದ್ದರು. ಮಹಿಳೆ ಬುಕ್ ಮಾಡಿದ್ದ ಸ್ಥಳಕ್ಕೆ ಮತ್ತೊಂದು ಕ್ಯಾಬ್ ಬಂದಿತ್ತು. ಆಸ್ಪತ್ರೆಗೆ ಹೋಗುವ ಅವಸರದಲ್ಲಿದ್ದ ಮಹಿಳೆ ಇದೇ ಕ್ಯಾಬ್ ಇರಬೇಕು ಎಂದು ಕ್ಯಾಬ್​ನಲ್ಲಿ ಮಗನೊಂದಿಗೆ ಕುಳಿತಿದ್ದಾಳೆ. ಬಳಿಕ ಇದು ಬೇರೆ ಕ್ಯಾಬ್ ತಾನು ಬುಕ್ ಮಾಡಿದ ಕ್ಯಾಬ್ ಇನ್ನು ಬಂದಿಲ್ಲ ಎಂಬ ಬಗ್ಗೆ ಗಮನಕ್ಕೆ ಬಂದಿದೆ. ಕೂಡಲೇ ಮಹಿಳೆ ಕಾರ್​ನಿಂದ ಇಳಿಯಲು ಮುಂದಾಗಿದ್ದಾರೆ. ಈ ವೇಳೆ ಚಾಲಕ ಕಾರು ಚಲಾಯಿಸಿದ್ದಾನೆ.

ಮಹಿಳೆ ಇಳಿಯಲು ಯತ್ನಿಸಿದರೂ ಕಾರ್ ನಿಲ್ಲಿಸದೇ ಚಲಾಯಿಸಿದ್ದಾನೆ. ಬಳಿಕ ದಿಢೀರನೆ ಕ್ಯಾಬ್ ನಿಲ್ಲಿಸಿ ಮಹಿಳೆ ಮೇಲೆ ಹಲ್ಲೆಗೈದಿದ್ದಾನೆ. ಇನ್ನು ತಾಯಿ ರಕ್ಷಣೆಗೆ ಮುಂದಾದ ಬಾಲಕನ ಮೇಲೆಯೂ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ. ಸದ್ಯ ಘಟನೆ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಘಟನೆಯ ದೃಶ್ಯ ಅಪಾರ್ಟ್‌ಮೆಂಟ್​ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಘಟನೆ ಬಗ್ಗೆ ಅಪಾರ್ಟ್‌ಮೆಂಟ್ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಯಚೂರಿನಲ್ಲಿ ಮರಳು ದಂಧೆಕೋರರ ಅಟ್ಟಹಾಸ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ

ವಿಚಾರಣೆ ವೇಳೆ ಚಾಲಕ ಹೇಳಿದ್ದೇನು?

ಸದ್ಯ ಬೆಳ್ಳಂದೂರು ಪೊಲೀಸರು ಕ್ಯಾಬ್ ಚಾಲಕ ಬಸವರಾಜ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಚಾಲಕ ನಡೆದ ಘಟನೆಯನ್ನು ವಿವರಿಸಿದ್ದಾನೆ. ಅದೇ ಅಪಾರ್ಟ್​ಮೆಂಟ್ ನಲ್ಲಿ ಎರಡು ಕ್ಯಾಬ್ ಬುಕ್ ಆಗಿದ್ದವು. ಮಹಿಳೆ ಬುಕ್ ಮಾಡಿದ್ದು ಬೇರೆಯ ಕ್ಯಾಬ್. ಆದರೆ ಅದೇ ಸಮಯಕ್ಕೆ ಬಂದ ಬಸವರಾಜ್ ಕ್ಯಾಬ್ ಹತ್ತಿದ್ದಾರೆ. ಕೇವಲ 100 ಮೀಟರ್ ದೂರದಲ್ಲಿ ಕ್ಯಾಬ್ ನಿಲ್ಲಿಸುವಂತೆ ಚಾಲಕನಿಗೆ ನಿಂದಿಸಿದ್ದಾರೆ. ಏಕ ವಚನದಲ್ಲೇ ನಿಂದಿಸಿದ್ದಾರೆ. ಈ ವೇಳೆ ಕಾರ್ ನಲ್ಲಿ ಮಾತಿನ ಚಕಮಕಿ ನಡೆದಿದ್ದು ನಂತರ ಕೆಳಗಿಳಿದು ಡೋರ್ ಜೋರಾಗಿ ಹಾಕಿದ್ದಾರೆ. ಇದರಿಂದ ಕೋಪಗೊಂಡ ಬಸವರಾಜ್ ಮಹಿಳೆಯನ್ನು ನೂಕಿದ್ದಾನೆ ಎಂದು ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ

ನಗರದ ಬಾಣಸವಾಡಿ ರೈಲು ನಿಲ್ದಾಣ ರಸ್ತೆ ಬದಿ ಮೊಬೈಲ್ ನಲ್ಲಿ ಮಾತಾಡುತ್ತಾ ನಿಂತಿದ್ದ ಮಹಿಳೆಯಿಂದ ಮೊಬೈಲ್ ಕಸಿದು ಇಬ್ಬರು ಮೊಬೈಲ್ ಕಳ್ಳರು ಪರಾರಿಯಾದ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ಖದೀಮರು ಮಹಿಳೆಯಿಂದ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ. ಮೊಬೈಲ್ ಕಸಿದುಕೊಳ್ಳವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆ ಮೊಬೈಲ್ ನಲ್ಲಿ ಮಾತನಾಡುತ್ತಿರುವುದು ಗಮನಿಸಿ ಕಳ್ಳರು ಕೃತ್ಯ ಎಸಗಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:01 am, Thu, 10 August 23

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ