ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್
ರಾಜ್​ಕುಮಾರ್
Edited By: ಆಯೇಷಾ ಬಾನು

Updated on: Aug 20, 2023 | 10:08 AM

ಬೆಂಗಳೂರು, ಆ.20: ನಗರದ ಹೆಚ್​ಎಎಲ್​ ಬಳಿಯ ವಾಯುಸೇನಾ ಜಾಗಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶ ಮಾಡಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್​ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Sun, 20 August 23

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us