AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cubbon Park: 2 ಮತ್ತು 4ನೇ ಶನಿವಾರ ಕಬ್ಬನ್ ಪಾರ್ಕ್​​ನೊಳಗೆ ವಾಹನ ಸಂಚಾರಕ್ಕೆ ಅನುಮತಿ

ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಎರಡು ಮತ್ತು ನಾಲ್ಕನೇ ಶನಿವಾರಗಳಂದು ಕಬ್ಬನ್ ಪಾರ್ಕ್​​ನೊಳಗೆ ವಾಹನ ಸಂಚಾರಕ್ಕೆ ಅನುವು ನೀಡಿ ಆದೇಶ ಹೊರಡಿಸಲಾಗಿದೆ. ಇದು ಆ ಭಾಗದಲ್ಲಿ ಸಂಚರಿಸುವವರಿಗೆ ಖುಷಿ ನೀಡಿದ್ದರೆ, ಕಬ್ಬನ್ ಪಾರ್ಕ್ ಸಂರಕ್ಷಣಾ ಸಮಿತಿಯು ಈ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದೆ.

Cubbon Park: 2 ಮತ್ತು 4ನೇ ಶನಿವಾರ ಕಬ್ಬನ್ ಪಾರ್ಕ್​​ನೊಳಗೆ ವಾಹನ ಸಂಚಾರಕ್ಕೆ ಅನುಮತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 11, 2024 | 11:05 AM

Share

ಬೆಂಗಳೂರು, ಫೆಬ್ರವರಿ 11: ಬೆಂಗಳೂರು ನಗರದ ಅತಿ ದಟ್ಟಣೆಯ ಪ್ರದೇಶಗಳಲ್ಲಿ ಒಂದಾದ ಕಬ್ಬನ್ ಪಾರ್ಕ್​ನೊಳಗೆ (Cubbon Park) ವಾಹನ ಸಂಚಾರಕ್ಕೆ ಕೊನೆಗೂ ಸರ್ಕಾರ ಅವಕಾಶ ಕಲ್ಪಿಸಿದೆ. ತಿಂಗಳ 2 ಮತ್ತು 4ನೇ ಶನಿವಾರ ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರಕ್ಕೆ ಅನುವು ನೀಡಿ ಫೆಬ್ರವರಿ 8 ರಂದು ತೋಟಗಾರಿಕಾ ಇಲಾಖೆ (Horticulture Department) ಆದೇಶ ನೀಡಿದ್ದು, ಪ್ರವಾಸಿಗರು ಹಾಗೂ ಆ ಭಾಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಸಂತಸ ನೀಡಿದೆ.

ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಸುಗಮ ಸಂಚಾರಕ್ಕಾಗಿ ಕಬ್ಬನ್ ಪಾರ್ಕ್ ಆವರಣದೊಳಗೆ ಹೈಕೋರ್ಟ್‌ನಿಂದ ಸಿದ್ದಲಿಂಗಯ್ಯ ವೃತ್ತ ಮತ್ತು ಸಿದ್ದಲಿಂಗಯ್ಯ ವೃತ್ತದಿಂದ ಹೈಕೋರ್ಟ್​ ಭಾಗದವರೆಗೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೂರು ತಿಂಗಳ ಕಾಲ ಪ್ರಾಯೋಗಿಕ ಆಧಾರದ ಮೇಲೆ ಈ ಅವಕಾಶ ನೀಡಲಾಗಿದೆ.

ಕಬ್ಬನ್ ಪಾರ್ಕ್ ಒಳಗೆ ಸಂಚಾರಕ್ಕೆ ಅವಕಾಶ ನೀಡುವುದರಿಂದ ಹೊರಗಿನ ರಸ್ತೆಗಳಲ್ಲಿನ ಟ್ರಾಫಿಕ್ ಸಮಸ್ಯೆಗಳನ್ನು ಪರಿಹರಿಸಲು ಸಹಾಯವಾಗಲಿದೆ ಎಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಅನುಚೇತ್ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಕಬ್ಬನ್ ಪಾರ್ಕ್‌ನೊಳಗೆ ಸಂಚಾರಕ್ಕೆ ಸಾಕಷ್ಟು ಸ್ಥಳಾವಕಾಶವಿದೆ ಎಂದು ಅನುಚೇತ್ ಹೇಳಿದ್ದಾರೆ.

ಕೆಲವು ವರ್ಷಗಳಿಂದ ಕಬ್ಬನ್ ಪಾರ್ಕ್‌ನೊಳಗೆ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಇತರ ಸಾರ್ವತ್ರಿಕ ರಜಾದಿನಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್​ನ ನೂರಕ್ಕೂ ಹೆಚ್ಚು ​​ಸದಸ್ಯರು ಮತ್ತು ಕಬ್ಬನ್ ಪಾರ್ಕ್‌ಗೆ ನಿತ್ಯ ಭೇಟಿ ನೀಡುವವರು ಪಾರ್ಕ್​ನೊಳಗೆ ಸಂಚಾರಕ್ಕೆ ಅವಕಾಶ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಹೀಗಾಗಿ 2023 ರ ಅಕ್ಟೋಬರ್​​​ನಲ್ಲಿ ಪಾರ್ಕ್​ನೊಳಗೆ ಸಂಚಾರಕ್ಕೆ ಅವಕಾಶ ನಿಷೇಧಿಸಲಾಗಿತ್ತು.

ಕಬ್ಬನ್ ಪಾರ್ಕ್ ಸಂರಕ್ಷಣಾ ಸಮಿತಿ ವಿರೋಧ

ಪಾರ್ಕ್​​ನೊಳಗೆ ಸಂಚಾರಕ್ಕೆ ಅನುವು ಮಾಡಿಕೊಡುವ ಆದೇಶಕ್ಕೆ ಇತ್ತೀಚೆಗೆ ರಚನೆಯಾಗಿರುವ ಕಬ್ಬನ್ ಪಾರ್ಕ್ ಸಂರಕ್ಷಣಾ ಸಮಿತಿಯು ವಿರೋಧ ವ್ಯಕ್ತಪಡಿಸಿದೆ. ತೋಟಗಾರಿಕೆ ಇಲಾಖೆಯ ಉನ್ನತಾಧಿಕಾರಿಗಳು ಕಬ್ಬನ್ ಪಾರ್ಕ್‌ನ ನಿರ್ವಹಣೆ ಅಥವಾ ಪರಿಸರ ವ್ಯವಸ್ಥೆಯ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಸಮಿತಿ ದೂರಿದೆ.

ಇದನ್ನೂ ಓದಿ: ಬೆಂಗಳೂರು: ಭಾರೀ ಟ್ರಾಫಿಕ್ ಸ್ಪಾಟ್‌ಗಳನ್ನು ಕಡಿಮೆ ಮಾಡಲು ಸಂಚಾರದಲ್ಲಿ ಬದಲಾವಣೆ ಮಾಡಿದ ಪೊಲೀಸರು

ಎರಡನೇ ಮತ್ತು ನಾಲ್ಕನೇ ಶನಿವಾರದಂದು ಪಾರ್ಕ್​ನೊಳಗೆ ವಾಹನ ಸಂಚಾರಕ್ಕೆ ಅನುವುಮಾಡಿಕೊಡುವುದರಿಂದ ಕಬ್ಬನ್ ಪಾರ್ಕ್‌ಗೆ ಬರುವ 3,000, 5,000 ಮಂದಿಗೆ ತೊಂದರೆಯಾಗಲಿದೆ ಎಂದು ಸಮಿತಿಯ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ