NICE Road Toll Price: ನೈಸ್ ರಸ್ತೆಯ ವಾಹನ ಸವಾರರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ; ಟೋಲ್ ದರ ಶೇ 11ರಷ್ಟು ಹೆಚ್ಚಳ

NICE Road Toll Price Hike; ನೈಸ್ ರಸ್ತೆಯ ಟೋಲ್ ದರ ಪರಿಷ್ಕರಿಸಲಾಗಿದ್ದು, ಜುಲೈ 1 ರಿಂದ (ಶನಿವಾರ) ಪರಿಷ್ಕೃತ ದರ ಜಾರಿಗೆ ಬರಲಿದೆ. ಟೋಲ್ ದರಗಳನ್ನು ಶೇಕಡಾ 11 ರಷ್ಟು ಹೆಚ್ಚಿಸಲಾಗಿದೆ.

NICE Road Toll Price: ನೈಸ್ ರಸ್ತೆಯ ವಾಹನ ಸವಾರರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ; ಟೋಲ್ ದರ ಶೇ 11ರಷ್ಟು ಹೆಚ್ಚಳ
ನೈಸ್ ರಸ್ತೆ
Follow us
Ganapathi Sharma
|

Updated on:Jun 30, 2023 | 5:56 PM

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (NICE) ‘ನೈಸ್ ರಸ್ತೆ’ಯಲ್ಲಿ (NICE Road) ಪ್ರಯಾಣಿಸುವುದು ಇನ್ನು ದುಬಾರಿಯಾಗಲಿದೆ. ನೈಸ್ ರಸ್ತೆಯ ಟೋಲ್ ದರ (NICE Road Toll Price) ಪರಿಷ್ಕರಿಸಲಾಗಿದ್ದು, ಜುಲೈ 1 ರಿಂದ (ಶನಿವಾರ) ಪರಿಷ್ಕೃತ ದರ ಜಾರಿಗೆ ಬರಲಿದೆ. ಟೋಲ್ ದರಗಳನ್ನು ಶೇಕಡಾ 11 ರಷ್ಟು ಹೆಚ್ಚಿಸಲಾಗಿದೆ. ವೆಚ್ಚಗಳು ಹೆಚ್ಚಾಗಿರುವ ಕಾರಣ ಟೋಲ್ ದರ ಹೆಚ್ಚಿಸಲಾಗಿದೆ ಎಂದು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ ತಿಳಿಸಿದೆ. ಈ ಕುರಿತು ಸಂಸ್ಥೆಯು ಪ್ರಕಟಣೆ ಬಿಡುಗಡೆ ಮಾಡಿದ್ದು, ಪರಿಷ್ಕೃತ ದರ ಶನಿವಾರದಿಂದ ಜಾರಿಗೆ ಬರಲಿದೆ ಎಂದು ಹೇಳಿದೆ.

ಹೊಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ, ಕ್ಲೋವರ್ ಲೀಫ್ ಜಂಕ್ಷನ್, ಮೈಸೂರು ರಸ್ತೆ, ಮಾಗಡಿ ರಸ್ತೆ, ತುಮಕೂರು ರಸ್ತೆ ಮತ್ತು ಲಿಂಕ್ ರಸ್ತೆ ಮಾರ್ಗಗಳಲ್ಲಿ ನೈಸ್ ರಸ್ತೆಯನ್ನು ಆಗಾಗ್ಗೆ ಬಳಸುವ ಪ್ರಯಾಣಿಕರು ಶನಿವಾರದಿಂದ ಹೆಚ್ಚುವರಿ ದರ ತೆರಬೇಕಾಗುತ್ತದೆ.

ಜುಲೈ 1 ರಿಂದ ನೈಸ್ ರಸ್ತೆಯಲ್ಲಿ ಪರಿಷ್ಕೃತ ಟೋಲ್ ದರಗಳ ಪಟ್ಟಿ ಇಲ್ಲಿದೆ

(E – ಹಾಲಿ ದರ: N – ಪರಿಷ್ಕೃತ ದರ)

ನೈಸ್ ರಸ್ತೆಯು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್‌ನಿಂದ ನಿರ್ಮಿಸಲ್ಪಟ್ಟ ಮತ್ತು ನಿರ್ವಹಿಸಲ್ಪಡುವ ಖಾಸಗಿ ಎಕ್ಸ್‌ಪ್ರೆಸ್‌ ವೇ ಆಗಿದೆ. ಆರು ಪಥಗಳ ಖಾಸಗಿ ಎಕ್ಸ್‌ಪ್ರೆಸ್‌ ವೇ ಬೆಂಗಳೂರಿನ ವಿವಿಧ ಭಾಗಗಳನ್ನು ಸಂಪರ್ಕಿಸುತ್ತದೆ.

ಈ ಹಿಂದೆ ಕಳೆದ ವರ್ಷ ಜುಲೈನಲ್ಲಿ ನೈಸ್ ರಸ್ತೆಯಲ್ಲಿ ಬಾರಿಗೆ ಟೋಲ್ ದರವನ್ನು ಹೆಚ್ಚಿಸಲಾಗಿತ್ತು. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳಿಂದಾಗಿ ನೈಸ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Bengaluru Mysuru Expressway Toll Price Hike: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್ ದರ ಮತ್ತಷ್ಟು ಹೆಚ್ಚಳ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ದರವನ್ನು ಹೆಚ್ಚಿಸಿದ ಒಂದು ತಿಂಗಳ ನಂತರ ನೈಸ್ ರಸ್ತೆಯಲ್ಲಿ ಟೋಲ್ ದರಗಳು ಏರಿಕೆಯಾಗಿವೆ. ಜೂನ್ 1 ರಿಂದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಟೋಲ್ ದರವನ್ನು ಶೇಕಡಾ 22 ರಷ್ಟು ಹೆಚ್ಚಿಸಲಾಗಿದೆ. ಟೋಲ್ ದರಗಳ ಪರಿಷ್ಕರಣೆ ನಂತರ ಎಕ್ಸ್‌ಪ್ರೆಸ್‌ ವೇನಲ್ಲಿ ಒಂದು ಬದಿಯ ಪ್ರಯಾಣದ ವೆಚ್ಚವು 135 ರಿಂದ 165 ಕ್ಕೆ ಏರಿಕೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 30 June 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ