Bengaluru Night Curfew: ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ, ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ

TV9 Digital Desk

| Edited By: Ayesha Banu

Updated on:Oct 12, 2021 | 12:17 PM

ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ ಹತ್ತು ಗಂಟೆಯಿಂದ ಬೆಳಗಿನ ಜಾವ 5 ಗಂಟೆ ತನಕ ನೈಟ್ ಕರ್ಫ್ಯೂ ಇರಲಿದೆ. ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದ್ರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

Bengaluru Night Curfew: ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ವಿಸ್ತರಣೆ, ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)

Follow us on

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 25ರ ವರೆಗೂ ನೈಟ್ ಕರ್ಫ್ಯೂ ಮುಂದುವರಿಯಲಿದೆ. ರಾತ್ರಿ ಹತ್ತು ಗಂಟೆಯಿಂದ ಬೆಳಗಿನ ಜಾವ 5 ಗಂಟೆ ತನಕ ನೈಟ್ ಕರ್ಫ್ಯೂ ಇರಲಿದೆ. ನೈಟ್ ಕರ್ಪ್ಯೂ ಉಲ್ಲಂಘನೆ ಮಾಡಿದ್ರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಜಿಲ್ಲೆಯಲ್ಲಿ ಅಕ್ಟೋಬರ್ 11ರ ವರೆಗೂ ನೈಟ್​ ಕರ್ಫ್ಯೂ ಮುಂದುವರಿಕೆ ಆಗಲಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದರು. ಅದರಂತೆ, ರಾತ್ರಿ 10 ಗಂಟೆಯಿಂದ ಮುಂಜಾನೆ 5ರ ವರೆಗೆ ನೈಟ್ ಕರ್ಫ್ಯೂ ಇತ್ತು. ಈಗ ಇದು ಅಕ್ಟೋಬರ್ 25ರ ವರೆಗೂ ವಿಸ್ತರಣೆಯಾಗಿದೆ.

ಕರ್ನಾಟಕದಲ್ಲಿ ಸೋಮವಾರ 373 ಮಂದಿಯಲ್ಲಿ ಹೊಸದಾಗಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, 10 ಮಂದಿ ಮೃತಪಟ್ಟದ್ದಾರೆ. 611 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 9906 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.45, ಸೋಂಕಿತರ ಸಾವಿನ ಪ್ರಮಾಣ ಶೇ 2.68 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,81,400 ಮಂದಿಯಲ್ಲಿ ಸೋಂಕು ಖಚಿತವಾಗಿದ್ದು, 29,33,570 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರದಲ್ಲಿ ಸೋಮವಾರ 146 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 210 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಐವರು ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ 12,48,459 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,25,685 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 6580 ಸಕ್ರಿಯ ಪ್ರಕರಣಗಳಿದ್ದರೆ, ಈವರೆಗೆ ಒಟ್ಟು 16,193 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಬೆಳಕಿನ ಹಬ್ಬ; ನೈಟ್ ಕರ್ಫ್ಯೂ ಜಾರಿ ಹಿನ್ನೆಲೆ ರಾತ್ರಿ 10 ಗಂಟೆಯವರೆಗೆ ಮಾತ್ರ ವಿದ್ಯುತ್ ದೀಪಾಲಂಕಾರ

ತಾಜಾ ಸುದ್ದಿ

Related Stories

Click on your DTH Provider to Add TV9 Kannada