Bengaluru Night Curfew: ಅಕ್ಟೋಬರ್ 11ವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ: ಕಮಲ್ ಪಂತ್ ಆದೇಶ

Bengaluru Night Curfew Timings: ಇದೀಗ ನೈಟ್ ಕರ್ಫ್ಯೂ ಆದೇಶವನ್ನು ಅಕ್ಟೋಬರ್ 11ರ ವರೆಗೂ ಮುಂದೂಡಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಆದೇಶ ನೀಡಿದ್ದಾರೆ.

Bengaluru Night Curfew: ಅಕ್ಟೋಬರ್ 11ವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ: ಕಮಲ್ ಪಂತ್ ಆದೇಶ
ಕೊರೊನಾ ಕರ್ಫ್ಯೂ (ಪ್ರಾತಿನಿಧಿಕ ಚಿತ್ರ)


ಬೆಂಗಳೂರು: ಜಿಲ್ಲೆಯಲ್ಲಿ ಅಕ್ಟೋಬರ್ 11ರ ವರೆಗೂ ನೈಟ್​ ಕರ್ಫ್ಯೂ ಮುಂದುವರಿಕೆ ಆಗಲಿದೆ ಎಂಬ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಅದರಂತೆ, ರಾತ್ರಿ 10 ಗಂಟೆಯಿಂದ ಮುಂಜಾನೆ 5ರ ವರೆಗೆ ನೈಟ್ ಕರ್ಫ್ಯೂ ಇರಲಿದೆ. ಕೊರೊನಾ ಹಿನ್ನೆಲೆ ನೈಟ್​ಕರ್ಫ್ಯೂ ಜಾರಿಗೊಳಿಸಿದ್ದ ಸರ್ಕಾರ. ಸೆಪ್ಟೆಂಬರ್ 27ರ ವರೆಗೂ ನೈಟ್​ ಕರ್ಫ್ಯೂ ಜಾರಿಗೊಳಿಸಿತ್ತು. ಇದೀಗ ನೈಟ್ ಕರ್ಫ್ಯೂ ಆದೇಶವನ್ನು ಅಕ್ಟೋಬರ್ 11ರ ವರೆಗೂ ಮುಂದೂಡಿ ಆದೇಶ ಹೊರಡಿಸಲಾಗಿದೆ. ಸರ್ಕಾರದ ಮಾರ್ಗಸೂಚಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಈ ಬಗ್ಗೆ ಆದೇಶ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 27) 181 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾದಿಂದ ಐವರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 504 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 20 ಜನ ಬಲಿಯಾಗಿದ್ದಾರೆ. ಅದರಂತೆ, ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 12,804 ಆಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯದಲ್ಲಿ ಇಂದು ಹೊಸದಾಗಿ 504 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,73,899 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,23,320 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 20 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,746 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 12,804 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಇದನ್ನೂ ಓದಿ: Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ

ಇದನ್ನೂ ಓದಿ: Ragi Kana Santhe: ಕೊರೊನಾದಿಂದ ಸ್ಥಗಿತಗೊಂಡಿದ್ದ ‘ರಾಗಿ ಕಣ ಸಂತೆ’ ಅಕ್ಟೋಬರ್ 2ರಿಂದ ಪುನರಾರಂಭ

Read Full Article

Click on your DTH Provider to Add TV9 Kannada