AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಉತ್ತರ ನಿಗಮದಿಂದ ಮಹತ್ವದ ಹೆಜ್ಜೆ: ಇನ್ಮುಂದೆ ಪ್ರತಿ ಮಂಗಳವಾರ ಕಸದ ಸಮಸ್ಯೆಗೆ ಫೋನ್-ಇನ್ ಕಾರ್ಯಕ್ರಮ!

ಬೆಂಗಳೂರು ಉತ್ತರ ನಗರ ನಿಗಮವು ಘನತ್ಯಾಜ್ಯ ನಿರ್ವಹಣೆ ಮತ್ತು ಕಸ ವಿಲೇವಾರಿಗೆ ಸಂಬಂಧಿಸಿದ ಸಾರ್ವಜನಿಕರ ದೂರುಗಳನ್ನು ಪರಿಹರಿಸಲು ಮಂಗಳವಾರದ ವಿಶೇಷ ಫೋನ್-ಇನ್ ಕಾರ್ಯಕ್ರಮ ಹಾಗೂ ಹೆಲ್ಪ್‌ಲೈನ್ ಆರಂಭಿಸಿದೆ. ನಾಗರಿಕರು ಕರೆ ಅಥವಾ ವಾಟ್ಸಾಪ್ ಮೂಲಕ ದೂರುಗಳನ್ನು ದಾಖಲಿಸಬಹುದು. ತ್ಯಾಜ್ಯ ನಿರ್ವಹಣೆಯ ದಕ್ಷತೆ ಹೆಚ್ಚಿಸಲು ನಿಗಮವು ಬ್ಲಾಕ್-ವೈಸ್ ಸೂಕ್ಷ್ಮ ಯೋಜನೆಗಳನ್ನು ಸಹ ಸಿದ್ಧಪಡಿಸಿದೆ.

ಬೆಂಗಳೂರು ಉತ್ತರ ನಿಗಮದಿಂದ ಮಹತ್ವದ ಹೆಜ್ಜೆ: ಇನ್ಮುಂದೆ ಪ್ರತಿ ಮಂಗಳವಾರ ಕಸದ ಸಮಸ್ಯೆಗೆ ಫೋನ್-ಇನ್ ಕಾರ್ಯಕ್ರಮ!
ಸಾಂದರ್ಭಿಕ ಚಿತ್ರ
ಭಾವನಾ ಹೆಗಡೆ
|

Updated on: Oct 12, 2026 | 8:44 AM

Share

ಮುಖ್ಯಾಂಶಗಳು

  • ಬೆಂಗಳೂರು ಉತ್ತರ ನಿಗಮದಿಂದ ಕಸದ ಸಮಸ್ಯೆಗೆ ವಿಶೇಷ ಹೆಲ್ಪ್‌ಲೈನ್ ಆರಂಭಿಸಲಾಗಿದೆ.
  • ಪ್ರತಿ ಮಂಗಳವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಫೋನ್-ಇನ್ ಕಾರ್ಯಕ್ರಮ ನಡೆಯಲಿದೆ.
  • ದೂರುಗಳಿಗಾಗಿ ಹೆಲ್ಪ್‌ಲೈನ್ ಸಂಖ್ಯೆ ಹಾಗೂ ವಾಟ್ಸಾಪ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಬೆಂಗಳೂರು, ಅಕ್ಟೋಬರ್ 12: ನಗರದಲ್ಲಿ ತ್ಯಾಜ್ಯ ನಿರ್ವಹಣೆಯೇ ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕೆ ಪರಿಹಾರವಾಗಿ ಜಿಬಿಎ ಹಲವು ಕ್ರಮಗಳನ್ನು ಕೈಗೊಂಡಿದೆ. ಇದರ ಬೆನ್ನಲ್ಲೇ ಈಗ ಘನತ್ಯಾಜ್ಯ ನಿರ್ವಹಣೆ ಹಾಗೂ ಕಸ ವಿಲೇವಾರಿಗೆ ಸಂಬಂಧಿಸಿದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಬೆಂಗಳೂರು ಉತ್ತರ ಸಿಟಿ ಕಾರ್ಪೊರೇಷನ್ ವತಿಯಿಂದ ವಿಶೇಷ ಹೆಲ್ಪ್‌ಲೈನ್ ಹಾಗೂ ಫೋನ್-ಇನ್ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಪ್ರತಿ ವಾರದ ಮಂಗಳವಾರ ಬೆಳಿಗ್ಗೆ 7.30ರಿಂದ 9.30ರವರೆಗೆ ಈ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಲ್ಪ್​ಲೈನ್ ನಂಬರ್​ಗಳು ಇಲ್ಲಿವೆ

ಸಾರ್ವಜನಿಕರು ತಮ್ಮ ವಾರ್ಡ್ ಅಥವಾ ಪ್ರದೇಶಗಳಲ್ಲಿ ಕಸ ಸಂಗ್ರಹಣೆಯ ಸಮಯ, ಪೌರಕಾರ್ಮಿಕರ ಸೇವೆಗಳು, ತ್ಯಾಜ್ಯ ವಿಲೇವಾರಿ ಹಾಗೂ ಇತರ ಕಸ ಸಂಗ್ರಹಣಾ ವ್ಯವಸ್ಥೆಗಳ ಕುರಿತು ಇರುವ ದೂರುಗಳು ಅಥವಾ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಗಮನಕ್ಕೆ ತರಬಹುದು. ಇದಕ್ಕಾಗಿ ನಾಗರಿಕರು 080-22975936 ಅಥವಾ 080-23636671 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು. ಇದರೊಂದಿಗೆ ಸಾರ್ವಜನಿಕರ ಅನುಕೂಲಕ್ಕಾಗಿ 9480685705 ವಾಟ್ಸಾಪ್ (WhatsApp) ಸಂಖ್ಯೆಗೂ ಸಂದೇಶ ಕಳುಹಿಸಿ ತಮ್ಮ ದೂರುಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

ಫೋನ್-ಇನ್ ಕಾರ್ಯಕ್ರಮ

ಈ ಫೋನ್-ಇನ್ ಕಾರ್ಯಕ್ರಮವು ವಲಯ ಜಂಟಿ ಆಯುಕ್ತರ ನೇತೃತ್ವದಲ್ಲಿ ನಡೆಯಲಿದ್ದು, ಘನತ್ಯಾಜ್ಯ ನಿರ್ವಹಣೆಯ ಉಪ ಪ್ರಧಾನ ವ್ಯವಸ್ಥಾಪಕರು ದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. ಕಸದ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ದೊರೆಯುವಂತೆ ನೋಡಿಕೊಳ್ಳಲು ಇದು ಸಹಕಾರಿಯಾಗಲಿದೆ.

ಜೊತೆಗೆ, ನಗರದಾದ್ಯಂತ ತ್ಯಾಜ್ಯ ನಿರ್ವಹಣಾ ಸೇವೆಯ ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ನಿಗಮವು ತನ್ನ ವ್ಯಾಪ್ತಿಗೆ ಬರುವ ಎಲ್ಲಾ ಏಳು ವಿಭಾಗಗಳಿಗೂ ಬ್ಲಾಕ್-ವೈಸ್ ಸೂಕ್ಷ್ಮ ಯೋಜನೆಗಳನ್ನು ಸಿದ್ಧಪಡಿಸಿದೆ. ಮನೆಮನೆ ಕಸ ಸಂಗ್ರಹಣೆ, ರಸ್ತೆ ಸ್ವಚ್ಛತೆ, ಮತ್ತು ಬೃಹತ್ ಪ್ರಮಾಣದ ತ್ಯಾಜ್ಯ ಉತ್ಪಾದಕರ ನಿರ್ವಹಣೆಯನ್ನು ಈ ಯೋಜನೆ ಒಳಗೊಂಡಿದೆ. ವಸತಿ ಪ್ರದೇಶಗಳು, ವಾಣಿಜ್ಯ ಮಳಿಗೆಗಳು, ಕಸ ಸಂಗ್ರಹಣಾ ಮಾರ್ಗಗಳು, ಆಟೋ-ಟಿಪ್ಪರ್‌ಗಳು, ಮಾರುಕಟ್ಟೆಗಳು, ಉದ್ಯಾನವನಗಳು ಮತ್ತು ಗುರುತಿಸಲ್ಪಟ್ಟ ಕಸದ ಕಪ್ಪುಚುಕ್ಕೆಗಳನ್ನು ಸುಧಾರಿಸಲು ಈ ಯೋಜನೆ ವಿಶೇಷ ಗಮನಹರಿಸಲಿದೆ ಎಂದು ಕಾರ್ಪೊರೇಷನ್ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು