AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್​ ಮನೆಯಲ್ಲಿ ಹರಿದಿದ್ದು ರಕ್ತದೋಕುಳಿ!

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ಜಯದೇವ ಆಸ್ಪತ್ರೆಯ ಸ್ಟಾಫ್ ನರ್ಸ್ ಅವರನ್ನು ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಲಾಗಿದೆ. ಡಿಸೆಂಬರ್ 24ರಂದು ರಾತ್ರಿ ಕೃತ್ಯ ನಡೆದಿದ್ದು, 25ರಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ತಿಳಿದ ಪೊಲೀಸರು ಶೋಧ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆಕೆ ಒಬ್ಬರೇ ಇರುವುದನ್ನು ನೋಡಿಕೊಂಡು ಬಂದಿದ್ದ ಆಕೆಯ ಪ್ರಿಯಕರ ಈ ಕೃತ್ಯವೆಸಗಿದ್ದಾನೆಂದು ತನಿಖೆ ವೇಳೆ ತಿಳಿದುಬಂದಿದೆ.

ಮದುವೆಯಾಗು ಎಂದಿದ್ದಕ್ಕೆ ಕತ್ತು ಸೀಳಿ ಕೊಂದ ಪ್ರಿಯಕರ: ನರ್ಸ್​ ಮನೆಯಲ್ಲಿ ಹರಿದಿದ್ದು ರಕ್ತದೋಕುಳಿ!
ಕುಮಾರಸ್ವಾಮಿ ಲೇಔಟ್‌ನಲ್ಲಿ ಸ್ಟಾಫ್ ನರ್ಸ್ ಕತ್ತು ಸೀಳಿ ಭೀಕರ ಕೊಲೆ!
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 26, 2025 | 11:35 AM

Share

ಬೆಂಗಳೂರು, ಡಿಸೆಂಬರ್ 26: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ (Kumaraswamy Layout) ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು ತಿಳಿದುಬಂದಿದೆ. ಮಾಹಿತಿ ಸಿಕ್ಕ ಕೂಡಲೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಮದುವೆಯಾಗದೇ ಒಂಟಿಯಾಗಿದ್ದ ಸ್ಟಾಫ್ ನರ್ಸ್

39 ವರ್ಷವಾದರೂ ಮದುವೆಯಾಗದೆ ಒಂಟಿಯಾಗಿದ್ದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಮಾರಸ್ವಾಮಿ ಲೇಔಟ್‌ನಲ್ಲಿ ತಮ್ಮ ಸ್ನೇಹಿತೆಯೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದರು. ಡಿಸೆಂಬರ್ 24ರಂದು ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಆ ದಿನ ರಾತ್ರಿ ಮಮತಾ ಒಬ್ಬರೇ ಮನೆಯಲ್ಲಿದ್ದರು. ಇದೇ ಸಮಯಕ್ಕೆ ಕಾದು ಕುಳಿತಿದ್ದ ಆರೋಪಿ ಸುಧಾಕರ್, ರಾತ್ರೋ ರಾತ್ರಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ಡಿಸೆಂಬರ್ 25ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಮಾಹಿತಿ ದೊರಕುತ್ತಿದ್ದಂತೆ , ಕುಮಾರಸ್ವಾಮಿ ಲೇಔಟ್ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!

ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ

ತನ್ನನ್ನು ಮದುವೆಯಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದಿದ್ದ ಮಮತಾ

ಸುಧಾಕರ್ ಮತ್ತು ಮಮತಾ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಮಮತಾ ತನಗಿಂತ ವಯಸ್ಸಿನಲ್ಲಿ  ಹಿರಿಯವರೆಂದು ತಿಳಿಯದ ಸುಧಾಕರ್ ಪ್ರೀತಿಯಲ್ಲಿ ಬಿದ್ದಿದ್ದ. ಆದರೆ ಸುಧಾಕರ್‌ಗೆ ಇತ್ತೀಚೆಗೆ ಕುಟುಂಬಸ್ಥರು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು. ಈ ವಿಷಯ ತಿಳಿದ ಮಮತಾ, ಕೋಪಗೊಂಡು ತನ್ನನ್ನೇ ಮದುವೆಯಾಗಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ತನ್ನನ್ನು ಬಿಟ್ಟು ಬೇರೆ ಮದುವೆಯಾದರೆ ತಾನು ಆತ್ಮಹತ್ಯೆ ಮಾಡಿಕೊಂಡು ಸುಧಾಕರ್ ಹಾಗೂ ಅವರ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಈ ಒತ್ತಡದಿಂದ ಆತಂಕಕ್ಕೊಳಗಾದ ಸುಧಾಕರ್, ಮಮತಾಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಡಿಸೆಂಬರ್ 24ರಂದು ಮಮತಾ ಒಬ್ಬರೇ ಇದ್ದ ಸಂದರ್ಭ ಮನೆಗೆ ತೆರಳಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:17 am, Fri, 26 December 25

ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್