ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!

ಬೆಂಗಳೂರಿನ ನಾಗರಬಾವಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್‌ಗಳ ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಕೃತ್ಯ ವೈದ್ಯರ ಗಮನಕ್ಕೆ ಬಂದ ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವೇಳೆ ಆತನ ಮೊಬೈಲ್‌ನಲ್ಲಿ ಹಲವು ನರ್ಸ್‌ಗಳ ಖಾಸಗಿ ವಿಡಿಯೋಗಳು ಪತ್ತೆಯಾಗಿದೆ.

ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಬೆಚ್ಚಿಬೀಳಿಸುವ ಕೃತ್ಯ; ನರ್ಸ್‌ಗಳು ಬಟ್ಟೆ ಬದಲಿಸುವ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!
ನರ್ಸ್‌ಗಳ ಖಾಸಗಿ ವಿಡಿಯೋ ಮಾಡುತ್ತಿದ್ದ ಸೈಕೋ ಅಂದರ್!
Edited By:

Updated on: Dec 26, 2025 | 10:12 AM

ಬೆಂಗಳೂರು, ಡಿಸೆಂಬರ್ 26: ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುವ ಪ್ರಕರಣವೊಂದು ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನ (Bengaluru) ಆಸ್ಪತ್ರೆಯೊಂದರಲ್ಲಿ ಸೈಕೋ ಸಿಬ್ಬಂದಿಯೊಬ್ಬ ಮಹಿಳಾ ನರ್ಸ್​ಗಳ ಖಾಸಗಿ ವೀಡಿಯೋ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯ ಈ ಕೃತ್ಯವು ವೈದ್ಯರ ಗಮನಕ್ಕೆ ಬಂದ ನಂತರ ಪೊಲೀಸರಲ್ಲಿ ದೂರು ನೀಡಲಾಗಿದ್ದು, ಕಾಮುಕನನ್ನು ಬಂಧಿಸಲಾಗಿದೆ.

ನರ್ಸ್​ಗಳು ಬಟ್ಟೆ ಬದಲಿಸುವ ವೀಡಿಯೋ ಮಾಡುತ್ತಿದ್ದ!

ನಗರದ ನಾಗರಬಾವಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ತನ್ನ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ ತೆಗೆದು ಸಿಕ್ಕಿಹಾಕಿಕೊಂಡಿದ್ದಾನೆ. ಆರೋಪಿಯನ್ನು ಸುವೆಂದು ಮೊಹಂತ ಎಂದು ಗುರುತಿಸಲಾಗಿದೆ. ಈತ ಲೇಡಿ ನರ್ಸ್‌ಗಳು ಬಟ್ಟೆ ಬದಲಿಸುವ ಸಂದರ್ಭದಲ್ಲಿ ಫೋಟೋ ಮತ್ತು ವೀಡಿಯೋ ಚಿತ್ರಿಸಿ ವಿಕೃತಿ ಮೆರೆದಿದ್ದ. ಕಾಮುಕನ ಈ ಕೃತ್ಯವನ್ನು ಗಮನಿಸಿದ್ದ ನರ್ಸ್​ವೊಬ್ಬರು ತಕ್ಷಣವೇ ಈ ವಿಷಯವನ್ನು ಆಸ್ಪತ್ರೆಯ ವೈದ್ಯರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಕೂಡಲೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಚೇತನ್ ಅವರು ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಮುಕನನ್ನು ಬಂಧಿಸಿದ ಪೊಲೀಸರು

ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಆರೋಪಿ ಸುವೆಂದು ಮೊಹಂತ ಕಳೆದ ಒಂದು ವರ್ಷದಿಂದ ಅದೇ ಖಾಸಗಿ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ. ಅದಲ್ಲದೇ ಆರೋಪಿಯ ಮೊಬೈಲ್ ಪರಿಶೀಲನೆ ವೇಳೆ ಮಹಿಳಾ ಸಹೋದ್ಯೋಗಿಗಳ ಖಾಸಗಿ ಫೋಟೋ ಮತ್ತು ವೀಡಿಯೋಗಳು ಪತ್ತೆಯಾಗಿವೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿ ಸುವೆಂದು ಮೊಹಂತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:06 am, Fri, 26 December 25