AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಚೇರಿಗೆ ನುಗ್ಗಿ ಯುವತಿಗೆ ಚಾಕು ತೋರಿಸಿ ಸರಗಳ್ಳತನಕ್ಕೆ ಯತ್ನಿಸಿದಾತನ ಬಂಧನ

ಬೆಂಗಳೂರಿನ ದೊಮ್ಮಲೂರಿನ ಕಚೇರಿಗೆ ನುಗ್ಗಿದ ಪ್ರಭುರಾಜ್ ಎಂಬಾತ ಯುವತಿಗೆ ಚಾಕು ತೋರಿಸಿ ಚಿನ್ನದ ಸರ ನೀಡುವಂತೆ ಬೆದರಿಸಿದ್ದಾನೆ. ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 31ರಂದು ದೊಮ್ಮಲೂರಿನಲ್ಲಿ ನಡೆದ ಘಟನೆ ಬಗ್ಗೆ ಇದೀಗ ಪೂರ್ವ ವಿಭಾಗದ ಡಿಸಿಪಿ ವಿಕ್ರಂ ಆಮಟೆ ಸ್ಟಷ್ಟನೆ ನೀಡಿದ್ದಾರೆ.

ಬೆಂಗಳೂರು: ಕಚೇರಿಗೆ ನುಗ್ಗಿ ಯುವತಿಗೆ ಚಾಕು ತೋರಿಸಿ ಸರಗಳ್ಳತನಕ್ಕೆ ಯತ್ನಿಸಿದಾತನ ಬಂಧನ
ಆರೋಪಿ ಪ್ರಭುರಾಜ್
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 03, 2026 | 9:20 AM

Share

ಮುಖ್ಯಾಂಶಗಳು

  • ದೊಮ್ಮಲೂರು ಕಚೇರಿಗೆ ನುಗ್ಗಿ ಸರಗಳ್ಳತನಕ್ಕೆ ಯತ್ನ
  • ಚಾಕು ತೋರಿಸಿ ಯುವತಿಗೆ ಕೊಲೆ ಬೆದರಿಕೆ
  • ಆರೋಪಿಯ ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಬೆಂಗಳೂರು, ನವೆಂಬರ್ 3: ವ್ಯಕ್ತಿಯೊಬ್ಬ ಕಚೇರಿಗೆ ನುಗ್ಗಿ ಯುವತಿಯೊಬ್ಬರಿಗೆ ಚಾಕು ತೋರಿಸಿ ಚಿನ್ನದ ಸರ ನೀಡುವಂತೆ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನ ದೊಮ್ಮಲೂರಿನಲ್ಲಿ ನಡೆದಿದೆ. ಅಕ್ಟೋಬರ್ 31ರಂದು ದೊಮ್ಮಲೂರಿನ 100 ಅಡಿ ರಸ್ತೆಯಲ್ಲಿರುವ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಸರಗಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಭುರಾಜ್ ಎಂಬಾತ ಕಚೇರಿಗೆ ನುಗ್ಗಿ ಯುವತಿಯ ಚಿನ್ನದ ಸರವನ್ನು ನೀಡುವಂತೆ ಒತ್ತಾಯಿಸಿದ್ದಾನೆ. ಸರ ನೀಡದಿದ್ದರೆ ಚಾಕುವಿನಿಂದ ಇರಿಯುವುದಾಗಿ ಬೆದರಿಕೆ ಹಾಕಿದ್ದಾನೆ. ಈ ವೇಳೆ ಕಚೇರಿಯ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಆರೋಪಿಯನ್ನು ಹಿಡಿಯಲು ಮುಂದಾದಾಗ ಯುವತಿಯನ್ನು ಹಿಡಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಆದರೆ, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಮಾಹಿತಿ ಪಡೆದ ಇಂದಿರಾನಗರ ಠಾಣೆ ಪೊಲೀಸರು ಪ್ರಭುರಾಜ್‌ನನ್ನು ಬಂಧಿಸಿದ್ದಾರೆ. ಯುವತಿಗೆ ಯಾವುದೇ ಗಾಯಗಳಾಗಿಲ್ಲ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸರಗಳ್ಳತನಕ್ಕೆ ಯತ್ನಿಸಿದ್ದ ಆರೋಪಿ ಬಂಧನ

ಘಟನೆಗೆ ಸಂಬಂಧಿಸಿದಂತೆ ಪೂರ್ವ ವಿಭಾಗದ ಡಿಸಿಪಿ ವಿಕ್ರಂ ಆಮಟೆ ಸ್ಪಷ್ಟನೆ ನೀಡಿದ್ದಾರೆ. ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಯತ್ನದ ಪ್ರಕರಣ ದಾಖಲಾಗಿದೆ. ಆರೋಪಿ ಸರ ಕದಿಯುವ ಉದ್ದೇಶದಿಂದ ಕಚೇರಿಗೆ ಬಂದಿದ್ದ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಸಾರ್ವಜನಿಕರು ಆತನನ್ನು ಹಿಡಿಯಲು ಮುಂದಾದಾಗ ಯುವತಿಗೆ ಚಾಕು ತೋರಿಸಿ ಬೆದರಿಸಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಮದ್ಯ ತರಲು, ಹಣ ನೀಡಲು ಕಿರುಕುಳ ಆರೋಪ

ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆತನ ಹಿನ್ನೆಲೆಯ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಭುರಾಜ್ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿರಬಹುದು ಎಂಬ ಅನುಮಾನವಿದೆ ಎಂದು ಡಿಸಿಪಿ ತಿಳಿಸಿದ್ದಾರೆ. ಈ ಬಗ್ಗೆಯೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More