ಬೆಂಗಳೂರು: 2024 ರ ಕೊನೆಯ ದಿನ 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಸ್ವಾಗತ ಭರ್ಜರಿಯಾಗಿ ನಡೆದಿದೆ. ನಗರದ ಹಲವು ಕಡೆಗಳಲ್ಲಿ ಪಾರ್ಟಿ, ಮೋಜು ಮಸ್ತಿ ನಡೆದಿವೆ. ಆದರೆ, ಈ ಪಾರ್ಟಿಗಳಿಗೆ ಪೂರೈಕೆ ಆಗಬೇಕಿದ್ದ ಸುಮಾರು ಎರಡುವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. 2024ರ ಕೊನೆಯ ದಿನದ ಸಿಸಿಬಿ ಬೇಟೆಯ ವಿವರ ಇಲ್ಲಿದೆ.

ಬೆಂಗಳೂರು: 2024 ರ ಕೊನೆಯ ದಿನ 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: Ganapathi Sharma

Updated on: Jan 01, 2025 | 7:19 AM

ಬೆಂಗಳೂರು, ಜನವರಿ 1: ಅಲ್ಲಿ ಕಾಣಿಸಿದ್ದೆಲ್ಲ ಕೇಕ್ ಪ್ಯಾಕ್, ಕಿಟ್ ಕ್ಯಾಟ್ ಪ್ಯಾಕ್​ಗಳು. ಆದರೆ, ಆ ಪ್ಯಾಕೆಟ್​​ಗಳಲ್ಲಿ ಇದ್ದಿದ್ದು ಚಾಕೊಲೇಟ್ ಅಥವಾ ಕೇಕ್ ಅಲ್ಲ! ಬದಲಾಗಿ ಹೈಡ್ರೋ ಗಾಂಜಾ. ಈ ಹೈಡ್ರೋ ಗಾಂಜಾ ಬೆಂಗಳೂರಿನ ಮೂಲೆ ಮೂಲೆಯಲ್ಲಿ ನಡೆಯುವ ಪಾರ್ಟಿಗಳಿಗೆ ಸೇರಬೇಕಿತ್ತು. ಆದರೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಲ್ಲದೆ, ಮಾಲೀಕನನ್ನು ವಶಕ್ಕೆ ಪಡೆದಿದ್ದಾರೆ.

ಥೈಲ್ಯಾಂಡ್​ನಿಂದ ತರಿಸಿದ್ದ ಹೈಡ್ರೋ ಗಂಜಾ

ಬೆಂಗಳೂರಿನ ಮೂಲೆ ಮೂಲೆಯಲ್ಲಿ ಹೊಸ ವರ್ಷದ ಪಾರ್ಟಿ ನಡೆಯುವುದು ಸಹಜ. ಹುಡುಗರಿಂದ ತೊಡಗಿ ಹಣ್ಣು ಹಣ್ಣು ಮುದುಕರ ವರೆಗೆ ಅವರದೇ ಆದ ರೀತಿಯಲ್ಲಿ ಪಾರ್ಟಿ ಮಾಡುತ್ತಾರೆ. ಆದರೆ ಪಾರ್ಟಿಯಲ್ಲಿ ಮದ್ಯ ಮಾತ್ರವಲ್ಲದೆ ಒಂದಷ್ಟು ಜನರು ಡ್ರಗ್ಸ್​​ಗೆ ಮಾರು ಹೋಗುತ್ತಾರೆ. ಅಂತಹವರಿಗೆ ಮಾರಾಟ ಮಾಡಲು ಅಂತ ಥೈಲ್ಯಾಂಡ್​ನಿಂದ ತರಿಸಿದ್ದ ಹೈಡ್ರೋ ಗಂಜಾವನ್ನು ಬೆಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ಮೂಲದ ರಕ್ಷಿತ್ ರಮೇಶ್ ಎಂಬಾತನನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಆತನ ಸಂಪಿಗೆಹಳ್ಳಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆತ ಬೆಂಗಳೂರಿನ ಪಾರ್ಟಿಗಳಿಗೆ ಪೂರೈಕೆ ಮಾಡಲು ತರಿಸಿದ್ದ ಬರೋಬ್ಬರಿ ಹದಿನಾರು ಕೆಜಿ ಗಾಂಜಾ ಸೊಪ್ಪು ಮತ್ತು ಥೈಲ್ಯಾಂಡ್​​ನಿಂದ ತರಿಸಿದ್ದ ಸುಮಾರು ಮೂರು ಕೆಜಿ ಹೈಡ್ರೋ ಗಾಂಜಾ ದೊರೆತಿದೆ. ಎಂಡಿಎಂಎ, ಎಲ್​ಎಸ್​ಡಿ ಮತ್ತು ಚರಸ್ ಎಲ್ಲ ಸೇರಿ ಸುಮಾರು 2.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

40 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಎಂಡಿಎಂಎ ವಶಕ್ಕೆ

ಇನ್ನು ನಗರದ ಯಲಹಂಕ ನ್ಯೂಟೌನ್, ಗೋವಿಂದ ರಾಜನಗರ, ಕಾಮಾಕ್ಷಿ ಪಾಳ್ಯ, ಬಾಗಲೂರು, ಕೊಡಿಗೆಹಳ್ಳಿ, ಅಮೃತಹಳ್ಳಿ ಪೊಲೀಸರು ಸಹ ಗಾಂಜಾ ಮಾರಾಟ ಮಾಡುತ್ತಿದ್ದ ಏಳು ಜನರನ್ನು ಬಂಧಿಸಿ ಪ್ರತ್ಯೇಕ ವಾಗಿ ಸುಮಾರು 40 ಲಕ್ಷ ರೂ. ಮೌಲ್ಯದ ಗಾಂಜಾ ಮತ್ತು ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. 2024ರ ಕೊನೆಯ ದಿನ ಸಹ ಸಿಸಿಬಿಯ ನಾರ್ಕೊಟಿಕ್ಸ್ ವಿಭಾಗ ನಗರ ಪಾರ್ಟಿಗಳ ಮೇಲೆ ಕಣ್ಣಿಟ್ಟಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ