ಬೆಂಗಳೂರು: ಬಿಎಂಟಿಸಿ ಬಸ್ ಕೆಟ್ಟು ನಿಂತಿದ್ದಕ್ಕೆ ಇಡೀ ಔಟರ್ರಿಂಗ್ ರಸ್ತೆ ಫುಲ್ ಜಾಮ್!
ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಕೆಟ್ಟುನಿಂತು ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಇಕೋಸ್ಪೇಸ್ ಬಳಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸವಾರರು ಪರದಾಡುವಂತಾಯಿತು. ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡುವ ಮೂಲಕ ಸಂಚಾರ ಸಲಹೆಯನ್ನು ನೀಡಿದ್ದರು.

ಬೆಂಗಳೂರು, ಅಕ್ಟೋಬರ್ 14: ಎಲೆಕ್ಟ್ರಿಕ್ ಬಸ್ ಕೆಟ್ಟು ನಿಂತ ಹಿನ್ನೆಲೆ ನಗರದ ಔಟರ್ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ (Traffic jam) ಉಂಟಾಗಿತ್ತು. ಚಕ್ರಗಳು ಜಾಮ್ ಆಗಿ ಬಿಎಂಟಿಸಿ ಬಸ್ (BMTC BUS) ಕೆಟ್ಟುನಿಂತ ಪರಿಣಾಮ ಕಿಲೋಮೀಟರ್ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು.
ಇಕೋ ಸ್ಪೇಸ್ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಕೆಟ್ಟು ನಿಂತಿರುವುದರಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ, ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆ ನೀಡಿದ್ದರು.
ಬೆಂಗಳೂರು ಸಂಚಾರ ಪೊಲೀಸರು
“ಸಂಚಾರ ಸಲಹೆ ” ಇಕೋ ಸ್ಪೇಸ್ ಜಂಕ್ಷನ್ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ, ದೇವರಬೀಸನಹಳ್ಳಿ, ಬೆಳ್ಳಂದೂರು ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ.
“Traffic advisory” Due to vehicle breakdown near Eco space junction towards Marathahalli , Kadubeesanahalli,Devarabisanahalli,… pic.twitter.com/4QcuCO5oK1
— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) October 14, 2025
ಕೆಟ್ಟುಹೋದ ಬಸ್ನಿಂದಾಗಿ ಈ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವಾಹನ ಸವಾರರು ಸುದೀರ್ಘ ಗಂಟೆಗಳ ಕಾಲ ಟ್ರಾಫಿಕ್ನಲ್ಲೇ ಸಿಲುಕಿಕೊಳ್ಳುವಂತಾಗಿತ್ತು. ಈ ಬಗ್ಗೆ ನೆಟ್ಟಿಗರು ಕೂಡ ವಿಧವಿಧವಾಗಿ ಕಮೆಂಟ್ ಮಾಡುವ ಮೂಲಕ ವ್ಯವಸ್ಥೆಯನ್ನು ಟೀಕಿಸಿದ್ದಾರೆ.
ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿ: ಸಂಸದ ಮಂಜುನಾಥ್ರಿಂದ ಪರಿಶೀಲನೆ
ಇನ್ನು ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಸಂಸದ ಮಂಜುನಾಥ್ ಇಂದು ಪರಿಶೀಲನೆ ಮಾಡಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಹೊಸೂರು ಹೆದ್ದಾರಿ ಬಳಿ ಪರಿಶೀಲನೆ ಮಾಡಲಾಗಿದೆ.
ಮಂದಗತಿಯ ಕಾಮಗಾರಿಯಿಂದ ವಾಹನ ಸವಾರರು ಹೌರಾಣಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ವಾಹನ ಸವಾರರು ನಿತ್ಯ ಟ್ರಾಫಿಕ್ ಜಾಮ್ ಕಿರಿಕಿರಿ ಅನುಭವಿಸುವಂತಾಗಿದೆ. ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ.
ಇದನ್ನೂ ಓದಿ: ದೀಪಾವಳಿಗೆಂದು ಊರಿಗೆ ಹೋಗುವವರ ಗಮನಕ್ಕೆ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ
ನಿರ್ವಹಣೆ ಇಲ್ಲದೆ ಒಳ ಚರಂಡಿಗಳು ಮುಚ್ಚಿ ಹೋಗಿವೆ. ಪರಿಣಾಮ ಮಳೆ ನೀರು ಹೆದ್ದಾರಿಗೆ ನುಗ್ಗುತ್ತಿದೆ. ಅಸಮರ್ಪಕ ನಿರ್ವಹಣೆ, ಅವೈಜ್ಞಾನಿಕ ಕಾಮಗಾರಿ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆ ತೆಗೆದುಕೊಂಡರು. ಸಾರ್ವಜನಿಕ ಆಕ್ರೋಶಕ್ಕೆ ಅಧಿಕಾರಿಗಳು ಕಕ್ಕಾಬಿಕ್ಕಿ ಆದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:59 pm, Tue, 14 October 25




