ಬೆಂಗಳೂರು: ಬಿಎಂಟಿಸಿ ಬಸ್ ಕೆಟ್ಟು ನಿಂತಿದ್ದಕ್ಕೆ ಇಡೀ ಔಟರ್​ರಿಂಗ್ ರಸ್ತೆ ಫುಲ್​​ ಜಾಮ್!

ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಕೆಟ್ಟುನಿಂತು ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಇಕೋಸ್ಪೇಸ್ ಬಳಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸವಾರರು ಪರದಾಡುವಂತಾಯಿತು. ಈ ಬಗ್ಗೆ ಬೆಂಗಳೂರು ಟ್ರಾಫಿಕ್​ ಪೊಲೀಸರು ಮಾಹಿತಿ ನೀಡುವ ಮೂಲಕ ಸಂಚಾರ ಸಲಹೆಯನ್ನು ನೀಡಿದ್ದರು.

ಬೆಂಗಳೂರು: ಬಿಎಂಟಿಸಿ ಬಸ್ ಕೆಟ್ಟು ನಿಂತಿದ್ದಕ್ಕೆ ಇಡೀ ಔಟರ್​ರಿಂಗ್ ರಸ್ತೆ ಫುಲ್​​ ಜಾಮ್!
ಸಂಚಾರ ದಟ್ಟಣೆ

Updated on: Oct 14, 2025 | 9:02 PM

ಬೆಂಗಳೂರು, ಅಕ್ಟೋಬರ್​ 14: ಎಲೆಕ್ಟ್ರಿಕ್ ಬಸ್ ಕೆಟ್ಟು ನಿಂತ ಹಿನ್ನೆಲೆ ನಗರದ ಔಟರ್​ರಿಂಗ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್ (Traffic jam) ಉಂಟಾಗಿತ್ತು. ಚಕ್ರಗಳು ಜಾಮ್ ಆಗಿ ಬಿಎಂಟಿಸಿ ಬಸ್ (BMTC BUS) ಕೆಟ್ಟುನಿಂತ ಪರಿಣಾಮ ಕಿಲೋಮೀಟರ್​ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು. ಈ ಬಗ್ಗೆ ಬೆಂಗಳೂರು ಟ್ರಾಫಿಕ್​ ಪೊಲೀಸರು ತಮ್ಮ ಅಧಿಕೃತ ಎಕ್ಸ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಇಕೋ ಸ್ಪೇಸ್ ಜಂಕ್ಷನ್ ಬಳಿ ಬಿಎಂಟಿಸಿ ಬಸ್ ಕೆಟ್ಟು ನಿಂತಿರುವುದರಿಂದ ಮಾರತಹಳ್ಳಿ, ಕಾಡುಬೀಸನಹಳ್ಳಿ, ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆ ನೀಡಿದ್ದರು.

ಬೆಂಗಳೂರು ಸಂಚಾರ ಪೊಲೀಸರು

ಕೆಟ್ಟುಹೋದ ಬಸ್​​ನಿಂದಾಗಿ ಈ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ವಾಹನ ಸವಾರರು ಸುದೀರ್ಘ ಗಂಟೆಗಳ ಕಾಲ ಟ್ರಾಫಿಕ್​​ನಲ್ಲೇ ಸಿಲುಕಿಕೊಳ್ಳುವಂತಾಗಿತ್ತು. ಈ ಬಗ್ಗೆ ನೆಟ್ಟಿಗರು ಕೂಡ ವಿಧವಿಧವಾಗಿ ಕಮೆಂಟ್​ ಮಾಡುವ ಮೂಲಕ ವ್ಯವಸ್ಥೆಯನ್ನು ಟೀಕಿಸಿದ್ದಾರೆ.

ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿ: ಸಂಸದ ಮಂಜುನಾಥ್​​ರಿಂದ ಪರಿಶೀಲನೆ

ಇನ್ನು ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕಿರಿಕಿರಿ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಸಂಸದ ಮಂಜುನಾಥ್​ ಇಂದು ಪರಿಶೀಲನೆ ಮಾಡಿದರು. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಹೊಸೂರು ಹೆದ್ದಾರಿ ಬಳಿ ಪರಿಶೀಲನೆ ಮಾಡಲಾಗಿದೆ.

ಮಂದಗತಿಯ ಕಾಮಗಾರಿಯಿಂದ ವಾಹನ ಸವಾರರು ಹೌರಾಣಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ವಾಹನ ಸವಾರರು ನಿತ್ಯ ಟ್ರಾಫಿಕ್ ಜಾಮ್ ಕಿರಿಕಿರಿ ಅನುಭವಿಸುವಂತಾಗಿದೆ. ಯಾವುದೇ ಸೂಚನಾ ಫಲಕಗಳನ್ನು ಅಳವಡಿಸಿಲ್ಲ.

ಇದನ್ನೂ ಓದಿ: ದೀಪಾವಳಿಗೆಂದು ಊರಿಗೆ ಹೋಗುವವರ ಗಮನಕ್ಕೆ: ನಾಳೆಯಿಂದ ಸಾರಿಗೆ ನೌಕರರ ಮುಷ್ಕರ

ನಿರ್ವಹಣೆ ಇಲ್ಲದೆ ಒಳ ಚರಂಡಿಗಳು ಮುಚ್ಚಿ ಹೋಗಿವೆ. ಪರಿಣಾಮ ಮಳೆ ನೀರು ಹೆದ್ದಾರಿಗೆ ನುಗ್ಗುತ್ತಿದೆ. ಅಸಮರ್ಪಕ ನಿರ್ವಹಣೆ, ಅವೈಜ್ಞಾನಿಕ ಕಾಮಗಾರಿ ಬಗ್ಗೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆ ತೆಗೆದುಕೊಂಡರು. ಸಾರ್ವಜನಿಕ ಆಕ್ರೋಶಕ್ಕೆ ಅಧಿಕಾರಿಗಳು ಕಕ್ಕಾಬಿಕ್ಕಿ ಆದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:59 pm, Tue, 14 October 25

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us