ಬೆಂಗಳೂರು ಜಲಮಂಡಳಿಯಲ್ಲಿ ರಾತ್ರೋರಾತ್ರಿ 200ಕ್ಕೂ ಹೆಚ್ಚು ಮಂದಿಯ ವರ್ಗಾವಣೆ, ಒಬ್ಬೊಬ್ಬರಿಗೆ ಎರಡೆರಡು ಪೋಸ್ಟಿಂಗ್!

ಬೆಂಗಳೂರು ಜಲ ಮಂಡಳಿ ನಷ್ಟದಲ್ಲಿದೆ, ಸಂಕಷ್ಟ ಎದುರಿಸುತ್ತಿದೆ ಎಂದು ಗುರವಾರವಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ, ಅದೇ ದಿನ ರಾತ್ರೋರಾತ್ರಿ ಸಚಿವರ ಗಮನಕ್ಕೂ ಬಾರದಂತೆ 200ಕ್ಕೂ ಹೆಚ್ಚು ಸಿಬ್ಬಂದಿಯನ್ನು ಜಲಮಂಡಳಿ ವರ್ಗಾವಣೆ ಮಾಡಿದೆ.ಒಬ್ಬೊಬ್ಬರಿಗೆ ಡಬಲ್ ಪೋಸ್ಟಿಂಗ್ ನೀಡಿದ್ದು, ಸಾಲದ ಸುಳಿಯಲ್ಲಿರುವ ಜಲಮಂಡಳಿಗೆ ಹೊರೆಯಾಗಲಿದೆ.

ಬೆಂಗಳೂರು ಜಲಮಂಡಳಿಯಲ್ಲಿ ರಾತ್ರೋರಾತ್ರಿ 200ಕ್ಕೂ ಹೆಚ್ಚು ಮಂದಿಯ ವರ್ಗಾವಣೆ, ಒಬ್ಬೊಬ್ಬರಿಗೆ ಎರಡೆರಡು ಪೋಸ್ಟಿಂಗ್!
ಬೆಂಗಳೂರು ಜಲಮಂಡಳಿ
Follow us
| Updated By: ಗಣಪತಿ ಶರ್ಮ

Updated on: Aug 23, 2024 | 10:38 AM

ಬೆಂಗಳೂರು, ಆಗಸ್ಟ್​ 23: ಬೆಂಗಳೂರು ಜಲಮಂಡಳಿಯಲ್ಲಿ ಒಂದೇ ದಿನ 200 ಕ್ಕೂ ಹೆಚ್ಚು ಮಂದಿಯನ್ನು ವರ್ಗಾವಣೆ ಮಾಡಲಾಗಿದ್ದು, ಹಲವರಿಗೆ ಮುಂಬಡ್ತಿ ನೀಡಲಾಗಿದೆ. ಕೆಲವರಿಗೆ ಡಬಲ್ ಪೋಸ್ಟಿಂಗ್ ಕೊಟ್ಟು ಯಡವಟ್ಟು ಮಾಡಲಾಗಿದೆ. ಬೆಂಗಳೂರು ಉಸ್ತುವಾರಿ ಸಚಿವರ ಗಮನಕ್ಕೂ ತರದೇ ಈ ವರ್ಗಾವಣೆ ನಡೆದಿದೆ. ಹೀಗಾಗಿ, ಇದರ ಹಿಂದೆ ಲಕ್ಷ ಲಕ್ಷ ಡೀಲಿಂಗ್ ನಡೆದಿದೆಯಾ ಎಂಬ ಅನುಮಾನವೂ ವ್ಯಕ್ತವಾಗಿದೆ.

ಒಂದೇ ದಿನ 200ಕ್ಕೂ ಹೆಚ್ಚು ನೌಕರರ ಟ್ರಾನ್ಸ್​​​ಫರ್, ಪೋಸ್ಟಿಂಗ್ ಮಾಡಲಾಗಿದೆ. ನೂರಕ್ಕೂ ಹೆಚ್ಚು ನೌಕರರಿಗೆ ಮುಂಬಡ್ತಿ ನೀಡಿ ಸ್ಥಳ ನಿಯೋಜನೆ ಮಾಡಲಾಗಿದೆ. ಹಲವು ನೌಕರರಿಗೆ ಮಾಪನ ಹುದ್ದೆಯಿಂದ ಜಲಪರೀಕ್ಷಕ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ. ಜಲಮಂಡಳಿ ಇತಿಹಾಸದಲ್ಲೇ ಈ ರೀತಿ ರಾತ್ರೋರಾತ್ರಿ ವರ್ಗಾವಣೆ ಮಾಡಿರುವುದು ಮೊದಲು ಎನ್ನಲಾಗುತ್ತಿದೆ.

ವಾಟರ್ ಇನ್ಸ್​ಪೆಕ್ಟರ್, ಕ್ಲರ್ಕ್, ಹೆಲ್ಪರ್​ಗಳಿಗೆ ವರ್ಗಾವಣೆ ಭಾಗ್ಯ ದೊರೆತಿದೆ. ಪೋಸ್ಟಿಂಗ್, ಟ್ರಾನ್ಸ್​ಫರ್​ನಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ದುಡ್ಡು ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಆಡಳಿತಾಧಿಕಾರಿ ಹಾಗೂ ನೌಕರರ ಸಂಘದ ಅಧ್ಯಕ್ಷರಿಂದ ವರ್ಗಾವಣೆ ದಂಧೆ ನಡೆಯುತ್ತಿದೆ. ಮುಂಬಡ್ತಿಯಿಂದ ಜಲಮಂಡಳಿಗೆ ಹೆಚ್ಚು ಸಂಬಳ ಪಾವತಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸಾಲದ ಸುಳಿಯಲ್ಲಿರುವ ಜಲಮಂಡಳಿಗೆ ಮುಂಬಡ್ತಿಯ ಹೊರೆ ಉಂಟಾಗಲಿದೆ. ಒಬ್ಬೊಬ್ಬರಿಗೆ ಎರಡೆರಡು ಪೋಸ್ಟಿಂಗ್ ನೀಡಿ ಯಡವಟ್ಟು ಮಾಡಿರುವುದು ಇನ್ನಷ್ಟು ಹೊರೆಯಾಗಲಿದೆ.

ಸಂಕಷ್ಟದಲ್ಲಿ ಜಲ ಮಂಡಳಿ

ಮಂಡಳಿ ನಷ್ಟದಲ್ಲಿದ್ದು, ಸಂಬಳ ಕೊಡುವುದಕ್ಕೂ ಆಗದ ಪರಿಸ್ಥಿತಿ ಇದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದರು. ಅಲ್ಲದೆ, ನೀರಿನ ದರ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಇದೆ. ಕಳೆದ 8-9 ವರ್ಷದಿಂದ ದರ ಏರಿಕೆ ಮಾಡಿಲ್ಲ. ಹೀಗಾಗಿ ಈ ಬಾರಿ ಮಾಡಿಯೇ ಮಾಡುತ್ತೇವೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿರುವಾಗ ಸಚಿವರ ಗಮನಕ್ಕೂ ತಾರದೇ ರಾತ್ರೋರಾತ್ರಿ ವರ್ಗಾವಣೆ, ಮುಂಬಡ್ತಿ ನೀಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಒಬ್ಬೊಬ್ಬರಿಗೆ ಎರಡೆರಡು ಪೋಸ್ಟಿಂಗ್ ನೀಡಿರುವುದು ಮತ್ತಷ್ಟು ಸಮಸ್ಯೆಗೆ ಕಾರಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ದಸರಾ ಹಬ್ಬದ ವಿಶೇಷ ಬಸ್​ಗಳು ​ಫುಲ್: ಬಿಬಿಎಂಟಿಸಿ ಬಸ್ ವ್ಯವಸ್ಥೆ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಇಷ್ಟು ದಿನ ಸ್ವರ್ಗದಲ್ಲಿದ್ದು ಈಗ ನರಕದ ಪಾಲಾದ ಐಶ್ವರ್ಯಾ; ಜಗದೀಶ್​ಗೆ ಖುಷಿ
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಹಬ್ಬಕ್ಕಾಗಿ ದೂರದ ಊರುಗಳಿಗೆ ಪ್ರಯಾಣಿಸುತ್ತಿರೋರಿಗೆ ಮಳೆ ಕಾಟ!
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಆ ಸಮಯದ ಬಳಿಕ ರಜನೀಕಾಂತ್ ನಾಯಕನಾಗಿ ನಟಿಸಲ್ಲ: ಗೆಳೆಯ ಬಹದ್ದೂರ್
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆ ಮುನ್ಸೂಚನೆ: ಎಲ್ಲೆಲ್ಲಿ?
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ಸಿದ್ದರಾಮಯ್ಯ ಮೇಲಿದ್ದ ವಿಶ್ವಾಸ ಹುಸಿಹೋಗಿದೆ, ರಾಜೀನಾಮೆ ನೀಡಲಿ: ರವಿಕುಮಾರ್
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ದಸರಾ ರಜೆ: ತುಂಬಿ ತುಳುಕುತ್ತಿರೋ ಬೆಂಗಳೂರಿನ KSRTC ಬಸ್​ ನಿಲ್ದಾಣ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಚನ್ನಪಟ್ಟಣ: ಬೇರೆ ಅಭ್ಯರ್ಥಿ ಒಪ್ಪಿಕೊಳ್ಳುವುದು ಕುಮಾರಸ್ವಾಮಿಗೆ ಸಾಧ್ಯವಿಲ್ಲ
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಸುಲಭ ಕ್ಯಾಚ್ ಕೈಚೆಲ್ಲಿದ ಬಾಬರ್; 262 ರನ್ ಚಚ್ಚಿದ ರೂಟ್
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು
ಅದೃಷ್ಟ ಅಂದ್ರೆ ಇದಪ್ಪಾ..! 25 ಕೋಟಿ ರೂ. ಲಾಟರಿ ಗೆದ್ದ ಕನ್ನಡಿಗನ ಮನದ ಮಾತು