Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಿಇಎಲ್​ನಿಂದ​​​ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬಂಧನ

ಕರ್ನಾಟಕ ರಾಜ್ಯ ಗುಪ್ತಚರ ಇಲಾಖೆ, ಕೇಂದ್ರ ಗುಪ್ತಚರ ದಳ ಹಾಗೂ ಸೇನಾ ಗುಪ್ತಚರ ವಿಭಾಗ ನಡೆಸಿದ ಬೆಂಗಳೂರಿನಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಉತ್ತರ ಪ್ರದೇಶ ಮೂಲದ ಗೂಢಚಾರನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯು, ಬಿಇಎಲ್​ನಿಂದ ರಕ್ಷಣಾ ಮಾಹಿತಿಯನ್ನು ನೆರೆ ರಾಷ್ಟ್ರಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.

ಬೆಂಗಳೂರು: ಬಿಇಎಲ್​ನಿಂದ​​​ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರ ಬಂಧನ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: Ganapathi Sharma

Updated on:Mar 20, 2025 | 12:44 PM

ಬೆಂಗಳೂರು, ಮಾರ್ಚ್ 20: ಗುಪ್ತಚರ ಇಲಾಖೆ (Intelligence Department) ಹಾಗೂ ಸೇನಾ ಇಂಟಲಿಜೆನ್ಸ್ (Military Intelligence) ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು (Pakistan Spy) ಬೆಂಗಳೂರಿನಲ್ಲಿ (Bengaluru) ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್​​​ ಮೂಲದ ನಿವಾಸಿ, ಬಿಇಎಲ್​​​ನಲ್ಲಿ ಕೆಲಸ ಮಾಡುತ್ತಿದ್ದ ದೀಪ್​ ರಾಜ್​ ಚಂದ್ರ ಎಂಬಾತನೇ ಬಂಧನಕ್ಕೊಳಗಾದ ವ್ಯಕ್ತಿ. ಈತ ಬಿಇಎಲ್​ನ ಪ್ರಾಡಕ್ಟ್​​​ ಡೆವಲಪ್ಮೆಂಟ್ ಆ್ಯಂಡ್ ಇನ್ನೋವೇಶನ್​​ ಸೆಂಟರ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಮತ್ತಿಕೆರೆ ಬಳಿ ನೆಲೆಸಿದ್ದ. ಈತ ಬಿಇಎಲ್​​​ನಿಂದ ರಕ್ಷಣಾ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂಬ ಆರೋಪವಿದೆ.

ಕೇಂದ್ರ ಮತ್ತು ರಾಜ್ಯ ಗುಪ್ತಚರ ಅಧಿಕಾರಿಗಳು, ಮಿಲಿಟರಿ ಇಂಟಲಿಜೆನ್ಸ್ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿವೆ.

ದೀಪ್​ ರಾಜ್​ ಚಂದ್ರ ಪಾಕಿಸ್ತಾನದಲ್ಲಿರುವ ಏಜೆಂಟ್‌ಗಳೊಂದಿಗೆ ಸಂಪರ್ಕ ಸಾಧಿಸಲು ವಾಟ್ಸ್​ಆ್ಯಪ್ ಮತ್ತು ಟೆಲಿಗ್ರಾಂ ಸೇರಿದಂತೆ ಎಂಡ್ ಟು ಎಂಡ್ ಎನ್​ಕ್ರಿಪ್ಟೆಡ್ ಸಂವಹನ ಮಾರ್ಗಗಳನ್ನು ಬಳಸಿರಬಹುದು ಎಂದು ಗುಪ್ತಚರ ಸಂಸ್ಥೆಗಳು ಶಂಕಿಸಿವೆ. ಆರೋಪಿಯು ರಹಸ್ಯ ಇ-ಮೇಲ್ ಖಾತೆ ತೆರೆದು ಮಾಹಿತಿ ವಿನಿಮಯ ಮಾಡಿದ ಬಗ್ಗೆಯೂ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಆಘಾತಕಾರಿ ವಿವರಗಳನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ಬೆಳಗಾವಿ: ಯುವಕನಿಂದ ದೇವಾಲಯದ ಮೇಲೆ ಕಲ್ಲು ತೂರಾಟ, ಪಾಂಗುಳ ಗಲ್ಲಿ ಉದ್ವಿಗ್ನ
Image
ಕರ್ನಾಟಕದಲ್ಲೊಂದು ಹಿರೋಶಿಮಾ-ನಾಗಸಾಕಿ ಪ್ರದೇಶ:ಹುಟ್ಟುವ ಮಕ್ಕಳು ಅಂಗವಿಕಲರು
Image
ಇಬ್ಬರು ಹೆಂಡರ ನೀಚ ಗಂಡ: ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು!
Image
ವಾಟ್ಸಪ್ ಗ್ರೂಪಿನಲ್ಲಿ ಹಾಸ್ಯಾಸ್ಪದ ಎಮೋಜಿ ಹಾಕಿದ್ದಕ್ಕೆ ಕಿರಿಕ್: ದಾಂಧಲೆ

ಆರೋಪಿಯು ದೀರ್ಘಕಾಲದವರೆಗೆ ರಕ್ಷಣಾ ಸಂಬಂಧಿತ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಿರಬಹುದು ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಇದು ರಾಷ್ಟ್ರೀಯ ಭದ್ರತೆಯ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ.

ಗುಪ್ತಚರ ಸಂಸ್ಥೆಗಳು ಪ್ರಸ್ತುತ ಡಿಜಿಟಲ್ ವಹಿವಾಟುಗಳು ಮತ್ತು ಸಂವಹನ ದಾಖಲೆಗಳನ್ನು ವಿಶ್ಲೇಷಿಸುತ್ತಿದ್ದಾರೆ. ಆರೋಪಿಯು ಬಿಇಎಲ್ ಹಿರಿಯ ಎಂಜಿನಿಯರ್‌ ಆಗಿದ್ದು, ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಸ್ಮಗ್ಲಿಂಗ್ ಅಡ್ಡೆಯಾದ ಕೆಂಪೇಗೌಡ ವಿಮಾನ ನಿಲ್ದಾಣ: 3 ಪ್ರಕರಣಗಳಲ್ಲಿ 130 ಕೋಟಿ ರೂ. ಮೌಲ್ಯದ ಕಳ್ಳಸಾಗಾಣಿಕೆ

ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಕುಮಾರ್ ವಿಕಾಸ್ ಎಂಬ ವ್ಯಕ್ತಿಯನ್ನು ಉತ್ತರ ಪ್ರದೇಶದ ಕಾನ್ಪುರದಲ್ಲಿ ಬುಧವಾರ ಬಂಧಿಸಲಾಗಿತ್ತು. ಕುಮಾರ್ ವಿಕಾಸ್ ಕಾನ್ಪುರ್ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಜೂನಿಯರ್ ವರ್ಕ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ. ಆತನ ವಿಚಾರಣೆ ವೇಳೆ ಬೆಂಗಳೂರಿನಿಂದಲೂ ರಕ್ಷಣಾ ಮಾಹಿತಿ ಸೋರಿಕೆಯಾಗುತ್ತಿರುವ ಬಗ್ಗೆ ಸುಳಿವು ದೊರೆತಿತ್ತು. ಈ ಮಾಹಿತಿಯ ಆಧಾರದಲ್ಲಿ ಗುಪ್ತಚರ ಸಂಸ್ಥೆಗಳು ಬೆಂಗಳೂರಿನಲ್ಲಿ ದಾಳಿ ನಡೆಸಿದಾಗ ದೀಪ್​ ರಾಜ್​ ಚಂದ್ರ ಬಲೆಗೆ ಬಿದ್ದಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 am, Thu, 20 March 25

VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
VIDEO: ಹಾರುವ ಹಾರಿಸ್... ಅದ್ಭುತ ಕ್ಯಾಚ್ ಹಿಡಿದ ರೌಫ್
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಪ್ರತಿಭಟನೆಗೆ ಬಂದ್ ಬಿಟ್ಟು ಪರ್ಯಾಯ ದಾರಿ ಹುಡುಕಬೇಕು: ಆಟೋರಿಕ್ಷಾ ಚಾಲಕರು
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಕಮೆಂಟೇಟರ್ ಜಾನಿ ನಿಜವಾದ ಹೆಸರೇನು? ಈ ಹೆಸರು ಬಂದಿದ್ದು ಹೇಗೆ?
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ