AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚನೆ ಪ್ರಕರಣ: ಚೈತ್ರಾ ಆ್ಯಂಡ್ ಗ್ಯಾಂಗ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ

ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಎಂಎಲ್​ಟಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿದ್ದ ಚೈತ್ರಾ ಮತ್ತು ಆಕೆಯ ಗ್ಯಾಂಗ್​ ಇದೀಗ ಪರಪ್ಪಮ ಅಗ್ರಹಾರ ಪಾಲಾಗಿದ್ದು, ಇದೀಗ ಆರೋಪಿಗಳಿಗೆ ಕೈದಿ ನಂಬರ್​ಗಳನ್ನು ನೀಡಲಾಗಿದೆ. ಹಾಗಾದ್ರೆ, ಚೈತ್ರಾಗೆ ಯಾವ ನಂಬರ್? ಇನ್ನುಳಿದ ಆರೋಪಿಗಳಿಗೆ ಯಾವೆಲ್ಲ ನಂಬರ್ ನಿಡಲಾಗಿದೆ ಎನ್ನುವ ವಿವರ ಇಲ್ಲಿದೆ.

ವಂಚನೆ ಪ್ರಕರಣ: ಚೈತ್ರಾ ಆ್ಯಂಡ್ ಗ್ಯಾಂಗ್​ಗೆ ವಿಚಾರಣಾಧೀನ ಕೈದಿ ನಂಬರ್ ನೀಡಿದ ಜೈಲಾಧಿಕಾರಿ
ಆರೋಪಿಗಳು
TV9 Web
| Edited By: |

Updated on:Sep 24, 2023 | 12:15 PM

Share

ಬೆಂಗಳೂರು, (ಸೆಪ್ಟೆಂಬರ್ 24): ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ (Chaitra) ಆ್ಯಂಡ್​ ಇದೀಗ ಪರಪ್ಪನ ಅಗ್ರಹಾರದಲ್ಲಿದ್ದು, ಇದೀಗ ಜೈಲಾಧಿಕಾರಿಗಳು ಆರೋಪಿಗಳಿಗೆ ಕೈದಿ ನಂಬರ್ ನೀಡಿದ್ದಾರೆ. ಪ್ರಕರಣದ ಎ1 ಆರೋಪಿ ಚೈತ್ರಾಗೆ 9737 ನೇ ನಂಬರ್ ನೀಡಿದ್ದರೆ, ಇನ್ನುಳಿದ ಆರೋಪಿಗಳಾದ ಮೋಹನ್ ಕುಮಾರ್ ಕೈದಿ ನಂಬರ್ 9738, ರಮೇಶ್-9739 ಚೆನ್ನಾನಾಯ್ಕ-9740, ಧನರಾಜ್-9741 ಎಂದು ವಿಚಾರಣಾಧೀನ ನಂಬರ್ ನೀಡಲಾಗಿದೆ.

ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ ಕೇಸ್​ನಲ್ಲಿ ಸಿಲುಕಿದ್ದ ಚೈತ್ರಾ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು 10 ದಿನಗಳಿಂದ ತಮ್ಮ ಕಸ್ಟಡಿಯಲ್ಲಿ ಇಟ್ಟುಕೊಂಡಿದ್ದರು. ಆದ್ರೆ ನಿನ್ನೆ(ಸೆಪ್ಟೆಂಬರ್ 23) ಕಸ್ಟಡಿ ಅಂತ್ಯವಾಗಿದ್ದರಿಂದ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್​ಗೆ ವಂಚಕರ ಗ್ಯಾಂಗ್​ನ್ನ ಸಿಸಿಬಿ ಪೊಲೀಸರು ಹಾಜರು ಪಡಿಸಿದ್ದರು. ನ್ಯಾಯಾಲಯವೂ ಚೈತ್ರಾ ಹಾಗೂ ಆಕೆಯ ಗ್ಯಾಂಗ್​​ನ ಗಗನ್ ಕಡೂರ್, ಧನರಾಜ್, ರಮೇಶ್, ಶ್ರೀಕಾಂತ್ ಮತ್ತು ಚೆನ್ನನಾಯ್​​​​ಗೆ 14 ದಿನಗಳು ಅಂದ್ರೆ ಅಕ್ಟೋಬರ್​ 6 ರ ತನಕ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ. ಆ ವೇಳೆ ಚೈತ್ರಾ ನ್ಯಾಯಾಧೀಶರ ಎದುರು ಗಳಗಳನೆ ಕಣ್ಣೀರು ಹಾಕಿದ್ದಳು. ನಂತರ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇನ್ನು ವಂಚನೆ ಕೇಸ್​​ನಲ್ಲಿ ಮೂರನೇ ಆರೋಪಿ ಹಾಲಶ್ರೀಗೆ ಸಂಕಷ್ಟ ಶುರುವಾಗಿದೆ. ಏಕೆಂದ್ರೆ, ವಂಚನೆ ಗ್ಯಾಂಗ್​​​​​ ಪರಪ್ಪನ ಅಗ್ರಹಾರ ಸೇರಿದ್ರೆ, ಹಾಲಶ್ರೀಯನ್ನ ಮಾತ್ರ ಸೆಪ್ಟೆಂಬರ್29 ರವರೆಗೆ CCB ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ

ಕಣ್ಣೀರಿನಲ್ಲಿ ರಾತ್ರಿ ಕಳೆದ ಚೈತ್ರಾ

ಪರಪ್ಪನ ಅಗ್ರಾಹರ ಜೈಲಿನಲ್ಲಿ ಚೈತ್ರಾ, ನಿದ್ದೆ ಇಲ್ಲದೇ ಚಿಂತೆಯಲ್ಲೇ ಕಣ್ಣೀರಿನಲ್ಲಿ ರಾತ್ರಿ ಕಳೆದಿದ್ದಾಳೆ. ನಿನ್ನೆ(ಸೆ.23) ಸಂಜೆ 6 ಗಂಟೆ ಸುಮಾರಿಗೆ ಜೈಲು ಪ್ರವೇಶಿಸಿದ್ದ ಚೈತ್ರಾ ಅಂಡ್ ಗ್ಯಾಂಗ್, ಪರಪ್ಪನ ಅಗ್ರಹಾರ ಜೈಲಿನ ಹೊಸ ಬಂದಿಖಾನೆಯಲ್ಲಿದೆ. ಆದ್ರೆ, ಚೈತ್ರಾಳನ್ನು ಪ್ರತ್ಯೇಕ ಕ್ವಾರಂಟೈನ್ ಸೆಲ್​ನಲ್ಲಿ ಇರಿಸಲಾಗಿದ್ದು, ನಿನ್ನೆ ರಾತ್ರಿ ಸಿಬ್ಬಂದಿಗಳು ನೀಡಿದ ಚಪಾತಿ, ಅನ್ನ-ಸಾಂಬರ್ ಸೇವಿಸಿದ ಚೈತ್ರಾ, ಬಳಿಕ ಇಂದು(ಸೆ.24) ಬೆಳಿಗ್ಗೆ ಜೈಲು ಸಿಬ್ಬಂದಿಗಳು ನೀಡಿ ಪಲಾವ್ ಸೇವಿಸಿದ್ದಾಳೆ. ಸದ್ಯ ಇನ್ನು 9 ದಿನ ಹೊಸ ಬಂಧಿಖಾನೆಯಲ್ಲೇ ಉಳಿಯಲಿರುವ ಚೈತ್ರಾಳನ್ನು ಬಳಿಕ ಹಳೆ ಬಂಧಿಖಾನೆಗೆ ಶಿಫ್ಟ್ ಮಾಡಲಾಗುತ್ತದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:54 am, Sun, 24 September 23

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ