ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ?: ಬಸವನಗುಡಿ ಪುತ್ತಿಗೆ ಮಠಕ್ಕೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಯುವಕ

ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದ ನಾಗರಿಕ ಪ್ರಜ್ಞೆಯ ಕುಸಿತಕ್ಕೆ ಸಾಕ್ಷಿಯಾಗಿದೆ. ವಿದ್ಯಾರ್ಥಿಯೊಬ್ಬ ಭಕ್ತನ ಮೇಲೆ, ಮಹಿಳೆಯ ಮೇಲೆ ಹಲ್ಲೆ ನಡೆಸಿದ ಗಂಭೀರ ಆರೋಪಗಳ ಹೊರತಾಗಿಯೂ, ಪೊಲೀಸರು ಎಫ್‌ಐಆರ್ ದಾಖಲಿಸದೆ ಕೇವಲ ‘ರಾಜಿ’ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿದ್ದಾರೆ. ಕಾನೂನು ಪಾಲನೆ ಕೇವಲ ಆಯ್ಕೆಯಾಗಿದೆಯೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ.

ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ?: ಬಸವನಗುಡಿ ಪುತ್ತಿಗೆ ಮಠಕ್ಕೆ ಬಂದಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಯುವಕ
ಬೆಂಗಳೂರು ಪಾರ್ಕಿಂಗ್ ಜಗಳ
Image Credit source: Twitter

Updated on: Apr 01, 2026 | 9:40 AM

ಬೆಂಗಳೂರು, ಏ.1: ಸಿಲಿಕಾನ್ ಸಿಟಿಯ ರಸ್ತೆಗಳಲ್ಲಿ ನಾಗರಿಕ ಪ್ರಜ್ಞೆ ಹೇಗೆ ಕಳೆದುಕೊಳ್ಳುತ್ತಿದೆ ಎಂಬುದಕ್ಕೆ ಬಸವನಗುಡಿಯಲ್ಲಿ ನಡೆದ ಪಾರ್ಕಿಂಗ್ ವಿವಾದವೊಂದು ಸಾಕ್ಷಿಯಾಗಿದೆ. ಪುತ್ತಿಗೆ ಮಠದ ಮುಂಭಾಗ ವಾಹನ ನಿಲುಗಡೆ ಮಾಡುವ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿ ಮತ್ತು ಮಹಿಳಾ  ನಡುವೆ ನಡೆದ ಜಗಳ, ಕೊನೆಗೆ ಪೊಲೀಸರ ಸಮ್ಮುಖದಲ್ಲಿ ‘ರಾಜಿ’ಯೊಂದಿಗೆ ಅಂತ್ಯಗೊಂಡಿದೆ.

ವರದಿಗಳ ಪ್ರಕಾರ, ಕಾಲೇಜು ವಿದ್ಯಾರ್ಥಿಯೊಬ್ಬ ಮಠದ ಮುಂಭಾಗ ನಿರ್ಬಂಧವಿದ್ದರೂ ಆತುರದಲ್ಲಿ ವಾಹನ ಪಾರ್ಕ್ ಮಾಡಿದ್ದ ಎನ್ನಲಾಗಿದೆ. ಇದನ್ನು ಪ್ರಶ್ನಿಸಿದ ಮಠದ ಭಕ್ತನೊಂದಿಗೆ ವಿದ್ಯಾರ್ಥಿ ವಾಗ್ವಾದಕ್ಕಿಳಿದಿದ್ದು, ಇದು ದೈಹಿಕ ಹಲ್ಲೆಯ ಹಂತಕ್ಕೆ ತಲುಪಿದೆ. ಗಲಾಟೆಯ ನಡುವೆ ವಿದ್ಯಾರ್ಥಿಯು ಮಹಿಳೆಯೊಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಇಲ್ಲಿದೆ ನೋಡಿ ವಿಡಿಯೋ:


ಈ ಘಟನೆಯ ನಂತರ ಎರಡೂ ಕಡೆಯವರು ಬಸವನಗುಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಆದರೆ, ಪೊಲೀಸರು ಕಠಿಣ ಕ್ರಮ ಕೈಗೊಳ್ಳುವ ಬದಲು, ವಿದ್ಯಾರ್ಥಿಯ ಭವಿಷ್ಯದ ದೃಷ್ಟಿಯಿಂದ ಆತನ ಪೋಷಕರನ್ನು ಕರೆಸಿ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಯಾವುದೇ ಎಫ್‌ಐಆರ್ (FIR) ದಾಖಲಿಸದೆ ಪ್ರಕರಣವನ್ನು ಪರಸ್ಪರ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ಇದನ್ನೂ ಓದಿ: ಅಕ್ರಮ ಆಸ್ತಿ ಗಳಿಸಿದ ಮಾಜಿ ಎಂ.ಡಿಗೆ ಶಾಕ್: ವಿ. ಮುನಿಯಪ್ಪಗೆ 3 ವರ್ಷ ಜೈಲು, 4.5 ಕೋಟಿ ರೂ. ದಂಡ ವಿಧಿಸಿದ ಲೋಕಾಯುಕ್ತ ಕೋರ್ಟ್!

ಬೆಂಗಳೂರಿನಲ್ಲಿ ಕಾನೂನು ಪಾಲನೆ ಕೇವಲ ಆಯ್ಕೆಯ ವಿಷಯವೇ? ದೈಹಿಕ ಹಲ್ಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ಕೇವಲ ‘ರಾಜಿ’ಯ ಮೂಲಕ ಮುಚ್ಚಿ ಹಾಕುವುದು ಎಷ್ಟರ ಮಟ್ಟಿಗೆ ಸರಿ? ಎಂಬ ಪ್ರಶ್ನೆಗಳು ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿವೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:39 am, Wed, 1 April 26

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us