ಬೆಂಗಳೂರಿಗರಿಗೆ ಪಾರ್ಕಿಂಗ್ ಶಾಕ್: ಈ ಪ್ರದೇಶದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೆ ಸಿದ್ಧತೆ, ವಾಹನ ಸವಾರರ ಆಕ್ರೋಶ!

ಬೆಂಗಳೂರಿನ ಜಯನಗರದ 42 ಪ್ರಮುಖ ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ವ್ಯವಸ್ಥೆ ಜಾರಿಗೊಳಿಸಲು ಪಾಲಿಕೆ ಮುಂದಾಗಿದೆ. ಅನಧಿಕೃತ ಪಾರ್ಕಿಂಗ್ ತಡೆಯುವ ಮತ್ತು ಆದಾಯ ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ತೆರಿಗೆ ಹೊರೆಯಿಂದ ಕಂಗಾಲಾಗಿರುವ ವಾಹನ ಸವಾರರು ಈ ಹೊಸ ಶುಲ್ಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿಗರಿಗೆ ಪಾರ್ಕಿಂಗ್ ಶಾಕ್: ಈ ಪ್ರದೇಶದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್ ಜಾರಿಗೆ ಸಿದ್ಧತೆ, ವಾಹನ ಸವಾರರ ಆಕ್ರೋಶ!
ಸಾಂದರ್ಭಿಕ ಚಿತ್ರ
Image Credit source: tv9

Updated on: Apr 14, 2026 | 7:45 AM

ಬೆಂಗಳೂರು, ಏಪ್ರಿಲ್ 14: ಬೆಂಗಳೂರಿನಲ್ಲಿ ಟ್ರಾಫಿಕ್ (Bangalore Traffic) ಕಿರಿಕಿರಿ ನಡುವೆ ವಾಹನ ಸವಾರರಿಗೆ ಈಗ ಪಾರ್ಕಿಂಗ್ ಬಿಸಿ ತಟ್ಟಲಿದೆ. ನಗರದಲ್ಲಿ ವಾಹನ ನಿಲುಗಡೆ ಸಮಸ್ಯೆಗೆ ಮುಕ್ತಿ ನೀಡಲು ಮತ್ತು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲು ಮುಂದಾಗಿರುವ ಜಿಬಿಎ (GBA) ಅಧಿಕಾರಿಗಳು, ‘ಪೇ ಆ್ಯಂಡ್ ಪಾರ್ಕಿಂಗ್ (Pay and Parking)’ ವ್ಯವಸ್ಥೆಗೆ ಮತ್ತಷ್ಟು ರಸ್ತೆಗಳನ್ನು ಸೇರ್ಪಡೆ ಮಾಡುತ್ತಿದ್ದಾರೆ. ಈಗಾಗಲೇ ನಗರದ ಅನೇಕ ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ಜಾರಿಯಲ್ಲಿದೆ. ಇದಕ್ಕೆ ಇನ್ನಷ್ಟು ರಸ್ತೆಗಳನ್ನು ಸೇರಿಸಲು ಸಿದ್ಧತೆ ಮಾಡಲಾಗುತ್ತಿದೆ.

ಜಯನಗರದ 42 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕ್

ಹೊಸ ಪಾರ್ಕಿಂಗ್ ನೀತಿಯ ಭಾಗವಾಗಿ ಬೆಂಗಳೂರು ದಕ್ಷಿಣ ವಲಯದ ಜಯನಗರದ ಬರೋಬ್ಬರಿ 42 ರಸ್ತೆಗಳನ್ನು ಪೇ ಆ್ಯಂಡ್ ಪಾರ್ಕಿಂಗ್ ವಲಯಗಳನ್ನಾಗಿ ಗುರುತಿಸಲಾಗಿದೆ. ಈ ರಸ್ತೆಗಳಲ್ಲಿ ಇನ್ನು ಮುಂದೆ ವಾಹನ ನಿಲ್ಲಿಸಬೇಕಾದರೆ ನಿಗದಿತ ಶುಲ್ಕ ಪಾವತಿಸುವುದು ಅನಿವಾರ್ಯವಾಗಲಿದೆ. ಈ ಮೂಲಕ ಪಾಲಿಕೆಯು ತನ್ನ ಆದಾಯದ ಮೂಲವನ್ನು ಹೆಚ್ಚಿಸಿಕೊಳ್ಳಲು ಮುಂದಾಗಿದೆ.

ವಾಹನ ಸವಾರರ ಅಸಮಾಧಾನ

ಪಾಲಿಕೆಯ ಈ ನಿರ್ಧಾರದ ವಿರುದ್ಧ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಹನ ಖರೀದಿಸುವಾಗಲೇ ರಸ್ತೆ ತೆರಿಗೆ ಸೇರಿದಂತೆ ಲಕ್ಷಾಂತರ ರೂಪಾಯಿ ಪಾವತಿಸಿರುತ್ತೇವೆ. ಈಗ ರಸ್ತೆ ಪಕ್ಕದಲ್ಲಿ ಗಾಡಿ ನಿಲ್ಲಿಸುವುದಕ್ಕೂ ಹಣ ವಸೂಲಿ ಮಾಡುವುದು ಜನಸಾಮಾನ್ಯರ ಮೇಲೆ ಹೊರೆ ಹೇರಿದಂತೆ ಎಂದು ವಾಹನ ಸವಾರರು ಕಿಡಿಕಾರಿದ್ದಾರೆ.

ನಗರದಲ್ಲಿ ಸಂಚರಿಸುವ ಲಕ್ಷಾಂತರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಶುಲ್ಕದ ಹೆಸರಿನಲ್ಲಿ ಜನರನ್ನು ಪೀಡಿಸುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಮೇಲೆ ಸ್ಪೀಡ್ ಬ್ರೇಕ್, ಅತಿ ವೇಗವಾಗಿ ವಾಹನ ಸಂಚರಿಸಿದರೆ ದಂಡ

ಎಲ್ಲೆಂದರಲ್ಲಿ ವಾಹನ ಪಾರ್ಕ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ತಡೆಯಲು ಮತ್ತು ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಏಪ್ರಿಲ್ 5ರಿಂದ ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಶುರು ಮಾಡಲಾಗಿದೆ. ಸಾರ್ವಜನಿಕರ ಆಕ್ರೋಶ ಮತ್ತು ಕಿರುಕುಳದ ದೂರುಗಳಿಂದಾಗಿ 2022ರಲ್ಲಿ ಟೋಯಿಂಗ್ ಅನ್ನು ನಿಲ್ಲಿಸಲಾಗಿತ್ತು. ಆದರೆ ಈಗ ಜಿಬಿಎ ಮತ್ತು ಸಂಚಾರ ಪೊಲೀಸರು ಜಂಟಿಯಾಗಿ ಟೋಯಿಂಗ್ ಪುನರಾರಂಭಿಸಿದ್ದಾರೆ. ಇದಕ್ಕೂ ಸಾವರ್ಜನಿಕ ವಲುಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ವರದಿ: ಲಕ್ಷ್ಮೀ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us