AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ, ಗಂಭೀರ ಗಾಯ

ಡಿ ಗ್ರೂಪ್ ನೌಕರ ನಮ್ಮ ಮೆಟ್ರೋ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಬೆಂಗಳೂರು ಮೆಜೆಸ್ಟಿಕ್​ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ನಡೆದಿದೆ. ಸದ್ಯ ಮೆಟ್ರೋ ಅಧಿಕಾರಿಗಳು ವ್ಯಕ್ತಿಯನ್ನು ರಕ್ಷಿಸಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಚಿಕಿತ್ಸೆ ನಡೆದಿದೆ.

ಬೆಂಗಳೂರು: ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ, ಗಂಭೀರ ಗಾಯ
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Oct 04, 2025 | 5:33 PM

Share

ಬೆಂಗಳೂರು, ಅಕ್ಟೋಬರ್​ 04: ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35)​​ ಎಂಬಾತ ನಮ್ಮ ಮೆಟ್ರೋ (Namma Metro) ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೆಜೆಸ್ಟಿಕ್​ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ (Green Line) ಹಳಿಗೆ ಮಧ್ಯಾಹ್ನ 3.19ರ ಸುಮಾರಿಗೆ ವೀರೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪ್ಲಾಟ್​ಫಾರಂ 3ರಲ್ಲಿ ನಮ್ಮ ಮೆಟ್ರೋ ರೈಲಿನಡಿ ಸಿಲುಕಿದ್ದ ವೀರೇಶ್​​ ನನ್ನು ಮೆಟ್ರೋ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವೀರೇಶ್​ನನ್ನು ಆ್ಯಂಬುಲೆನ್ಸ್​ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Namma Metro: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಂತೆಯೇ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಸದ್ಯ ವೀರೇಶ್​ಗೆ ತಲೆಗೆ ತೀವ್ರವಾದ ಗಾಯ ಹಿನ್ನಲೆ ಎಮರ್ಜೆನ್ಸಿ ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇನ್ನು ಘಟನೆ ತಿಳಿಯುತ್ತಿದ್ದಂತೆ ವೀರೇಶ್ ಕುಟುಂಬಸ್ಥರು ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ವೀರೇಶ್​​ ರಕ್ಷಣೆ ಬೆನ್ನಲ್ಲೆ ಅತ್ತ ಹಸಿರು ಮಾರ್ಗದಲ್ಲಿ ಸಂಚಾರ ಪುನಾರಂಭಗೊಳಿಸಲಾಗಿದೆ.

ಬಿಎಂಆರ್​ಸಿಎಲ್​​​ ಮಾಧ್ಯಮ ಪ್ರಕಟಣೆ

ಇಂದು ಮಧ್ಯಾಹ್ನ 3.17ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣದಲ್ಲಿ ಮೆಜೆಸ್ಟಿಕ್ ಟು ಮಾದವಾರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ 35 ವರ್ಷದ ಪ್ರಯಾಣಿಕನು ರೈಲಿನ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮವಾಗಿ ಈ ಭಾಗದ ರೈಲು ಸೇವೆಯಲ್ಲಿ ವ್ಯತ್ಯಯವಾಯಿತು.

ಇದನ್ನೂ ಓದಿ: ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ

ಸದರಿ ಪ್ರಯಾಣಿಕನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಮಯದಲ್ಲಿ ರೇಷ್ಮೆ ಸಂಸ್ಥೆ, ನ್ಯಾಷನಲ್ ಕಾಲೇಜು, ರಾಜಾಜಿನಗರ ಮತ್ತು ಮಾದಾವರ ನಡುವೆ ಶಾರ್ಟ್ ಲೂಪ್ ಸೇವೆಯನ್ನು ನಡೆಸಲಾಯಿತು. ನಂತರ ಸುಮಾರು 3 ಗಂಟೆ 47 ನಿಮಿಷಕ್ಕೆ ಸೇವೆಯನ್ನು ಪುನಃ ಆರಂಭಿಸಲಾಯಿತು ಎಂದು ಬಿಎಂಆರ್​ಸಿಎಲ್​​ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:02 pm, Sat, 4 October 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!