
ಬೆಂಗಳೂರು, ಅಕ್ಟೋಬರ್ 04: ವಿಧಾನಸೌಧದಲ್ಲಿ ಡಿ ಗ್ರೂಪ್ ನೌಕರನಾಗಿದ್ದ ವೀರೇಶ್ (35) ಎಂಬಾತ ನಮ್ಮ ಮೆಟ್ರೋ (Namma Metro) ರೈಲು ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಮೆಜೆಸ್ಟಿಕ್ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಮಾದವಾರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ (Green Line) ಹಳಿಗೆ ಮಧ್ಯಾಹ್ನ 3.19ರ ಸುಮಾರಿಗೆ ವೀರೇಶ್ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪ್ಲಾಟ್ಫಾರಂ 3ರಲ್ಲಿ ನಮ್ಮ ಮೆಟ್ರೋ ರೈಲಿನಡಿ ಸಿಲುಕಿದ್ದ ವೀರೇಶ್ ನನ್ನು ಮೆಟ್ರೋ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ವೀರೇಶ್ನನ್ನು ಆ್ಯಂಬುಲೆನ್ಸ್ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Namma Metro: ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಂತೆಯೇ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವಕ
ಸದ್ಯ ವೀರೇಶ್ಗೆ ತಲೆಗೆ ತೀವ್ರವಾದ ಗಾಯ ಹಿನ್ನಲೆ ಎಮರ್ಜೆನ್ಸಿ ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇನ್ನು ಘಟನೆ ತಿಳಿಯುತ್ತಿದ್ದಂತೆ ವೀರೇಶ್ ಕುಟುಂಬಸ್ಥರು ಆಸ್ಪತ್ರೆಗೆ ಓಡೋಡಿ ಬಂದಿದ್ದಾರೆ. ವೀರೇಶ್ ರಕ್ಷಣೆ ಬೆನ್ನಲ್ಲೆ ಅತ್ತ ಹಸಿರು ಮಾರ್ಗದಲ್ಲಿ ಸಂಚಾರ ಪುನಾರಂಭಗೊಳಿಸಲಾಗಿದೆ.
ಇಂದು ಮಧ್ಯಾಹ್ನ 3.17ಕ್ಕೆ ನಾಡಪ್ರಭು ಕೆಂಪೇಗೌಡ ನಿಲ್ದಾಣದಲ್ಲಿ ಮೆಜೆಸ್ಟಿಕ್ ಟು ಮಾದವಾರ ಕಡೆಗೆ ಹೋಗುವ ಹಸಿರು ಮಾರ್ಗದಲ್ಲಿ 35 ವರ್ಷದ ಪ್ರಯಾಣಿಕನು ರೈಲಿನ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮವಾಗಿ ಈ ಭಾಗದ ರೈಲು ಸೇವೆಯಲ್ಲಿ ವ್ಯತ್ಯಯವಾಯಿತು.
ಇದನ್ನೂ ಓದಿ: ಬೆಂಗಳೂರು: ಉತ್ತರ ಪ್ರದೇಶದ ವ್ಯಕ್ತಿ ನಮ್ಮ ಮೆಟ್ರೋದ ಹಳಿಗೆ ಹಾರಿ ಆತ್ಮಹತ್ಯೆಗೆ ಕಾರಣ ಬಹಿರಂಗ
ಸದರಿ ಪ್ರಯಾಣಿಕನನ್ನು ರಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಸಮಯದಲ್ಲಿ ರೇಷ್ಮೆ ಸಂಸ್ಥೆ, ನ್ಯಾಷನಲ್ ಕಾಲೇಜು, ರಾಜಾಜಿನಗರ ಮತ್ತು ಮಾದಾವರ ನಡುವೆ ಶಾರ್ಟ್ ಲೂಪ್ ಸೇವೆಯನ್ನು ನಡೆಸಲಾಯಿತು. ನಂತರ ಸುಮಾರು 3 ಗಂಟೆ 47 ನಿಮಿಷಕ್ಕೆ ಸೇವೆಯನ್ನು ಪುನಃ ಆರಂಭಿಸಲಾಯಿತು ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:02 pm, Sat, 4 October 25