AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ವಾಹನ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್! 

ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರಿನಾದ್ಯಂತ ಪೇ-ಅಂಡ್-ಪಾರ್ಕ್ ಯೋಜನೆಯನ್ನು ವಿಸ್ತರಿಸುತ್ತಿದೆ. ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ಸುಗಮಗೊಳಿಸುವುದು ಇದರ ಮುಖ್ಯ ಉದ್ದೇಶ. 23 CBD ರಸ್ತೆಗಳಲ್ಲಿ ಖಾಸಗಿ ನಿರ್ವಾಹಕರ ಮೂಲಕ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲಿದ್ದು, ನಿಗಮಗಳಿಗೆ ಆದಾಯ ಹೆಚ್ಚಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್ ಪಾರ್ಕಿಂಗ್ ಬುಕಿಂಗ್ ಸೌಲಭ್ಯವೂ ಲಭ್ಯವಾಗಲಿದೆ.

Bengaluru Pay and Park: ಬೆಂಗಳೂರಿನಲ್ಲಿ ಅಲ್ಲಲ್ಲಿ ವಾಹನ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್! 
ಬೆಂಗಳೂರಿನಲ್ಲಿ ಅಲ್ಲಲ್ಲಿ ಗಾಡಿ ಪಾರ್ಕ್​ ಮಾಡುವವರಿಗೆ ಜಿಬಿಎ ಶಾಕ್!
ಭಾವನಾ ಹೆಗಡೆ
|

Updated on:Jan 10, 2026 | 10:16 AM

Share

ಬೆಂಗಳೂರು, ಜನವರಿ 10: ನಗರದ ಕೇಂದ್ರ ಭಾಗದಲ್ಲಿ ರಸ್ತೆಬದಿ ಪಾರ್ಕಿಂಗ್ ವ್ಯವಸ್ಥೆಯನ್ನು ಸುಗಮಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಪೇ-ಅಂಡ್-ಪಾರ್ಕ್ ಯೋಜನೆಯನ್ನು ನಗರದಾದ್ಯಂತ ವಿಸ್ತರಿಸಲು ಮುಂದಾಗಿದೆ. ಈಗಾಗಲೇ ಸಿಬಿಡಿ ವ್ಯಾಪ್ತಿಯ 23 ರಸ್ತೆಗಳನ್ನು ಈ ಯೋಜನೆಯಡಿ ತಂದಿರುವ ಬೆಂಗಳೂರು ಕೇಂದ್ರ ನಗರ ನಿಗಮವು, ಈ ರಸ್ತೆಗಳಲ್ಲಿ ಮುಂದಿನ ಮೂರು ವರ್ಷಗಳ ಕಾಲ ಪಾರ್ಕಿಂಗ್ ಶುಲ್ಕ ಸಂಗ್ರಹಿಸಲು ಖಾಸಗಿ ನಿರ್ವಾಹಕರನ್ನು ನೇಮಿಸುವ ಸಲುವಾಗಿ ಟೆಂಡರ್ ಆಹ್ವಾನಿಸಿದೆ.

ಯಾವ ಯಾವ ರಸ್ತೆಗಳಲ್ಲಿರಲಿದೆ ಈ ಯೋಜನೆ?

ಪೇ-ಅಂಡ್-ಪಾರ್ಕ್ ಯೋಜನೆಗೆ ಆಯ್ಕೆಗೊಂಡಿರುವ ರಸ್ತೆಗಳಲ್ಲಿ ಕಮರ್ಷಿಯಲ್ ಸ್ಟ್ರೀಟ್, ಕೇಂಬ್ರಿಡ್ಜ್ ರಸ್ತೆ, ವುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಮಗ್ರತ್ ರಸ್ತೆ, ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರಸ್ತೆ, ಕ್ರೆಸೆಂಟ್ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಸಂಪಿಗೆ ರಸ್ತೆ ಸೇರಿದಂತೆ ಒಟ್ಟು 23 ರಸ್ತೆಗಳು ಸೇರಿವೆ.

ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅವರು, ಕೇಂದ್ರ ನಗರ ನಿಗಮ ಆರಂಭಿಸಿರುವ ಈ ವ್ಯವಸ್ಥೆಯನ್ನು ಮುಂದಿನ ದಿನಗಳಲ್ಲಿ ಇತರ ನಿಗಮಗಳೂ ಅನುಸರಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕೇಂದ್ರ ನಗರ ನಿಗಮ ಆಹ್ವಾನಿಸಿದ ಟೆಂಡರ್‌ಗಳ ಬಿಡ್‌ಗಳು ಶೀಘ್ರದಲ್ಲೇ ತೆರೆಯಲಿದ್ದು, ಪ್ರತಿಕ್ರಿಯೆಯ ಆಧಾರದಲ್ಲಿ ಇತರ ನಿಗಮಗಳಲ್ಲೂ ಇದೇ ಮಾದರಿಯ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಎಂದರು.

ಆನ್‌ಲೈನ್‌ನಲ್ಲಿ ಪಾರ್ಕಿಂಗ್ ಸ್ಲಾಟ್‌ ಬುಕಿಂಗ್

ಈ ಯೋಜನೆಯಿಂದ ರಸ್ತೆಬದಿ ಪಾರ್ಕಿಂಗ್ ಅಸ್ತವ್ಯಸ್ತತೆ ಕಡಿಮೆಯಾಗುವ ಜೊತೆಗೆ ನಗರ ನಿಗಮಗಳಿಗೆ ಹೆಚ್ಚುವರಿ ಆದಾಯವೂ ಲಭ್ಯವಾಗಲಿದೆ. ಅಲ್ಲದೆ, ಪಾರ್ಕಿಂಗ್ ಸ್ಥಳಗಳನ್ನು ವರ್ಚುವಲ್ ರೀತಿಯಲ್ಲಿ ಗುರುತಿಸುವ ಯೋಜನೆಯಿದ್ದು, ನಾಗರಿಕರು ವೆಬ್ ಅಥವಾ ಮೊಬೈಲ್ ಅಪ್ಲಿಕೇಶನ್ ಮೂಲಕ ಆನ್‌ಲೈನ್‌ನಲ್ಲಿ ಪಾರ್ಕಿಂಗ್ ಸ್ಲಾಟ್‌ಗಳನ್ನು ಕಾಯ್ದಿರಿಸಬಹುದಾಗಿದೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಜಿಬಿಎ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:05 am, Sat, 10 January 26

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?