ಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ವರೆಗೆ ಸಂಚಾರ ನಿರ್ಬಂಧ

Bengaluru Traffic Advisory: ಬೆಂಗಳೂರಿನ ಪೀಣ್ಯ 100 ಅಡಿ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯಿಂದಾಗಿ ಶನಿವಾರದಿಂದ ಸಂಚಾರ ನಿರ್ಬಂಧಿಸಲಾಗಿದೆ. ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್ ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್ ವರೆಗೆ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ ಮತ್ತು ವಾಹನ ನಿಲುಗಡೆಗೂ ನಿರ್ಬಂಧ ವಿಧಿಸಲಾಗಿದೆ. ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

ಬೆಂಗಳೂರು: ಪೀಣ್ಯಯಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​​​ವರೆಗೆ ಸಂಚಾರ ನಿರ್ಬಂಧ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Feb 01, 2025 | 7:34 AM

ಬೆಂಗಳೂರು, ಫೆಬ್ರವರಿ 1: ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ 200 ಮೀಟರ್ ರಸ್ತೆಯಲ್ಲಿ, ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶನಿವಾರ (ಫೆ.1) ರಿಂದ ಕಾಮಗಾರಿ ಪೂರ್ಣಗೊಳ್ಳುವವರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು (Bengaluru Traffic Police) ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ವಾಹನ ಸಂಚಾರ ನಿರ್ಬಂಧ

ಪೀಣ್ಯ 100 ಅಡಿ ರಸ್ತೆಯಲ್ಲಿ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗ

ಪೀಣ್ಯ 100 ಅಡಿ ರಸ್ತೆಯ ಮೂಲಕ ಜಾಲಹಳ್ಳಿ ಕ್ರಾಸ್ ಜಂಕ್ಷನ್​ಕಡೆಗೆ ಹೋಗುವ ವಾಹನಗಳು: ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಲ್ಲಿ ಬಲಕ್ಕೆ ಚಲಿಸಿ ರಸ್ತೆಯ ಮತ್ತೊಂದು ಬದಿಯ ಮೂಲಕ ದ್ವಿಮುಖ ಸಂಚಾರ ರಸ್ತೆಯ ಮೂಲಕ ಸಾಗಬಹುದು.

ಇದನ್ನೂ ಓದಿ: ಬೆಂಗಳೂರು ಟ್ರಾಫಿಕ್​ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಅಸ್ತ್ರಂ ಆ್ಯಪ್ ಬಿಡುಗಡೆ, ಇಲ್ಲಿದೆ ವಿವರ

ಎಲ್ಲಾ ಮಾದರಿಯ ಸರಕು ಸಾಗಣೆ ವಾಹನಗಳು ಟಿವಿಎಸ್ ಕ್ರಾಸ್ ಜಂಕ್ಷನ್​ನಿಂದ ಪೀಣ್ಯ ಪೊಲೀಸ್ ಠಾಣೆ ರಸ್ತೆಯ ಮೂಲಕ ಸಾಗಿ, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್​ನಲ್ಲಿ ತುಮಕೂರು ರಸ್ತೆಯ ಮೂಲಕ ಸಾಗಬಹುದು.

ವಾಹನ ನಿಲುಗಡೆ ನಿಷೇಧಿಸಿರುವ ರಸ್ತೆ:

ಪೀಣ್ಯ ಪೊಲೀಸ್ ಠಾಣೆ ರಸ್ತೆ, ಪೀಣ್ಯ 100 ಅಡಿ ರಸ್ತೆ (ಜಾಲಹಳ್ಳಿ ಕ್ರಾಸ್ ನಿಂದ ಟಿವಿಎಸ್ ಕ್ರಾಸ್ ವರೆಗೆ) ಹಾಗೂ ಪೀಣ್ಯ 1ನೇ ಕ್ರಾಸ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಕಾಮಗಾರಿ ಪೂರ್ಣಗೊಳ್ಳುವವರೆಗೆ, ತಾತ್ಕಾಲಿಕವಾಗಿ ನಿರ್ಬಂಧಿಸಿಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ