ಇಂದಿನಿಂದ ಪೀಣ್ಯ ಫ್ಲೈಓವರ್​ ಮತ್ತೆ ಬಂದ್: ಇಲ್ಲಿದೆ ಪರ್ಯಾಯ ಮಾರ್ಗ ವಿವರ

Peenya Flyover Close: ಜನವರಿ 16 ರ ರಾತ್ರಿ 11 ಗಂಟೆಯಿಂದ ಜನವರಿ 21 ರ ಬೆಳಗ್ಗೆ 11 ಗಂಟೆ ತನಕ ಫ್ಲೈಓವರ್ ಬಂದ್ ಆಗಿರಲಿದ್ದು, ಪರ್ಯಾಯ ಮಾರ್ಗಗಳು ಹಾಗೂ ಸರ್ವೀಸ್ ರಸ್ತೆ ಬಳಸುವಂತೆ ಸಂಚಾರ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

ಇಂದಿನಿಂದ ಪೀಣ್ಯ ಫ್ಲೈಓವರ್​ ಮತ್ತೆ ಬಂದ್: ಇಲ್ಲಿದೆ ಪರ್ಯಾಯ ಮಾರ್ಗ ವಿವರ
ಪೀಣ್ಯ ಫ್ಲೈಓವರ್
Follow us
TV9 Web
| Updated By: Ganapathi Sharma

Updated on:Jan 16, 2024 | 8:47 AM

ಬೆಂಗಳೂರು, ಜನವರಿ 16: ಬೆಂಗಳೂರು ನಗರದಿಂದ ವಿವಿಧೆಡೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಪೀಣ್ಯ ಫ್ಲೈಓವರ್ (Peenya Flyover) ಇಂದು ರಾತ್ರಿಯಿಂದ (ಜನವರಿ 16) ನಾಲ್ಕು ದಿನಗಳ ಕಾಲ ಬಂದ್ ಆಗಿರಲಿದೆ. ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇಗೆ (Dr. Shivakumara Swamiji Flyover) ಅಳವಡಿಸಿದ್ದ ವಯಾಡಕ್ಟ್ ದುರಸ್ಥಿ ಹಿನ್ನೆಲೆ ಲೋಡ್ ಟೆಸ್ಟಿಂಗ್ ನಡೆಸಲಿರುವ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಜನವರಿ 16 ರ ರಾತ್ರಿ 11 ಗಂಟೆಯಿಂದ ಜನವರಿ 21 ರ ಬೆಳಗ್ಗೆ 11 ಗಂಟೆ ತನಕ ಫ್ಲೈಓವರ್ ಬಂದ್ ಆಗಿರಲಿದ್ದು, ಪರ್ಯಾಯ ಮಾರ್ಗಗಳು ಹಾಗೂ ಸರ್ವೀಸ್ ರಸ್ತೆ ಬಳಸುವಂತೆ ಸಂಚಾರ ಪೊಲೀಸರು ವಾಹನ ಸವಾರರಿಗೆ ಮನವಿ ಮಾಡಿದ್ದಾರೆ.

ಪರ್ಯಾಯ ಮಾರ್ಗಗಳು ಯಾವುವೆಲ್ಲ?

ನೆಲಮಂಗಲ ಕಡೆಯಿಂದ ಬೆಂಗಳೂರು ನಗರಕ್ಕೆ ಫ್ಲೈ ಓವರ್ ರಸ್ತೆಯ ಮೂಲಕ ಸಾಗುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಪಕ್ಕದ ಎನ್​​ಹೆಚ್-4 ಮತ್ತು ಸರ್ವೀಸ್ ರಸ್ತೆಯ ಮೂಲಕ 8ನೇ ಮೈಲಿ-ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಎಸ್ ಆರ್ ಎಸ್ ಜಂಕ್ಷನ್ ಮೂಲಕ ಗೊರಗುಂಟೆಪಾಳ್ಯ ತಲುಪಬಹುದಾಗಿದೆ.

ಸಿಎಂಟಿಐ ಜಂಕ್ಷನ್​ನಿಂದ ನೆಲಮಂಗಲ ಕಡೆಗೆ ಫ್ಲೈ ಓವರ್ ರಸ್ತೆಯಲ್ಲಿ ಸಾಗುವ ವಾಹನಗಳು ಪಾರ್ಲೆ-ಜಿ ಟೋಲ್ ತಲುಪಲು ಫ್ಲೈ ಓವರ್ ಪಕ್ಕದ ಎನ್ ಹೆಚ್-4 ಮತ್ತು ಸರ್ವೀಸ್ ರಸ್ತೆಯಲ್ಲಿ ಎಸ್​ಆರ್​ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್-ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ- 8ನೇ ಮೈಲಿ ಮುಖಾಂತರ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಯಾಕಾಗಿ ಫ್ಲೈಓವರ್ ಬಂದ್?

ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ನಾಗಸಂದ್ರದ ಪಾರ್ಲೆ ಜಿ ಫ್ಯಾಕ್ಟರಿವರೆಗೂ 5 ಕಿಮೀ ಉದ್ದವಿರು ಪೀಣ್ಯ ಮೇಲ್ಸೇತುವೆಯ ವಯಾಡಕ್ಟ್​​ನ ಸಮಗ್ರತೆ ಹಾಗೂ ಲೋಡ್ ಟೆಸ್ಟಿಂಗ್ ಪರಿಶೀಲನೆ ಸಂಚಾರಕ್ಕೆ ನಿರ್ಬಂಧ ಹೇರಲು ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ವಾಹನ ಸವಾರರೇ ಗಮನಿಸಿ; ಜನವರಿ 16 ರಿಂದ 4 ದಿನ ಪೀಣ್ಯ ಫ್ಲೈಓವರ್ ಬಂದ್

ಲಾರಿ, ಬಸ್ ಸಂಚಾರ ನಿರ್ಬಂಧಿಸಿ ವರ್ಷಗಳೇ ಆಗಿವೆ

ಲಾರಿ, ಬಸ್ ಸೇರಿದಂತೆ ಭಾರಿ ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್​​ನಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಿ ಸುಮಾರು ಒಂದೂವರೆ ವರ್ಷವಾಗಿದೆ. ಮೇಲ್ಸೇತುವೆಯಲ್ಲಿ ತಾಂತ್ರಿಕ ದೋಷ ಇದ್ದು ಘನ ವಾಹನಗಳ ಸಂಚಾರಕ್ಕೆ ಯೋಗ್ಯವಲ್ಲ ಎಂದು ಐಐಎಸ್​ಸಿ ಎರಡು ವರ್ಷಗಳ ಹಿಂದೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ನಂತರ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:41 am, Tue, 16 January 24

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ