ಪೀಣ್ಯ ಫ್ಲೈಓವರ್ ರಿ ಓಪನ್; ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ

ಮೂರು ದಿನಗಳ ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಫ್ಲೈಓವರ್ ರಿ ಓಪನ್ ಆಗಿದೆ. ಇಂದು (ಜ.19) ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಫ್ಲೈ ಓವರ್ ಮೇಲೆ ವಾಹನಗಳು ಸಂಚರಿಸಲು ಆರಂಭಿಸಿದವು. ಈ ಮೇಲ್ಸೇತುವೆ ಮೇಲೆ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ.

ಪೀಣ್ಯ ಫ್ಲೈಓವರ್ ರಿ ಓಪನ್; ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ
ಪೀಣ್ಯ ಫ್ಲೈಓವರ್
Follow us
ರಾಚಪ್ಪಾಜಿ ನಾಯ್ಕ್
| Updated By: ವಿವೇಕ ಬಿರಾದಾರ

Updated on: Jan 19, 2024 | 11:41 AM

ಬೆಂಗಳೂರು, ಜನವರಿ 19: ಮೂರು ದಿನಗಳ ಲೋಡ್ ಟೆಸ್ಟಿಂಗ್ ನಂತರ ಡಾ. ಶಿವಕುಮಾರ ಸ್ವಾಮೀಜಿ (ಪೀಣ್ಯ) ಫ್ಲೈಓವರ್ (Dr. Shivakumara Swamiji Flyover) ರಿ ಓಪನ್ ಆಗಿದೆ. ಇಂದು (ಜ.19) ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಫ್ಲೈ ಓವರ್ ಮೇಲೆ ವಾಹನಗಳು ಸಂಚರಿಸಲು ಆರಂಭಿಸಿದವು. ಇನ್ನು ಈ ಮೇಲ್ಸೇತುವೆ (Flyover) ಮೇಲೆ ಲಘು ಗೂಡ್ಸ್ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಈ ಮೂಲಕ ಲಘು ಗಾತ್ರದ ವಾಹನಗಳ ಚಾಲಕರು ಮತ್ತು ಮಾಲಿಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಲೋಡ್​​ ಟೆಸ್ಟಿಂಗ್​ನಲ್ಲಿ​ ಪಾಸಿಟಿವ್ ರಿಪೋರ್ಟ್ ಬಂದಿರುವ ಹಿನ್ನೆಲೆಯಲ್ಲಿ ಮುಂದಿನ 20-30 ದಿನಗಳ ಅಂತರದಲ್ಲಿ ಮೇಲ್ಸೇತುವೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೂ ಅವಕಾಶ ನೀಡುವ ಸಾಧ್ಯತೆ ಇದೆ.

ಯಾಕಾಗಿ ಫ್ಲೈಓವರ್ ಬಂದ್?

ಪೀಣ್ಯ ಎಲಿವೇಟೆಡ್ ಹೈವೆಯಲ್ಲಿ ಅಳವಡಿಸಲಾಗಿದ್ದ ವಯಾಡಕ್ಟ್​ನಲ್ಲಿ ದೋಷ ಕಂಡು ಬಂದಿದ್ದರಿಂದ ಪೀಣ್ಯ ಮೇಲ್ಸೇತುವೆಯಲ್ಲಿ ಲಘು ಗಾತ್ರದ ವಾಹನ ಹೊರತುಪಡಿಸಿ, ಭಾರಿ ಗಾತ್ರದ ವಾಹನಗಳನ್ನ ನಿಷೇಧಿಸಲಾಗಿತ್ತು. 2021 ರಿಂದ ಇಲ್ಲಿ ದುರಸ್ತಿ ಕಾರ್ಯ ನಡೆಯುತಿತ್ತು. ಭಾರತೀಯ ವಿಜ್ಞಾನ ಸಂಸ್ಥೆ (ಐಎಎಸ್ಸಿ) ನೀಡಿದ ಸಲಹೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕಾಮಗಾರಿ ನಡೆಸುತ್ತಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದೆ.

ಇದನ್ನೂ ಓದಿ: ಪೀಣ್ಯ ಫ್ಲೈಓವರ್ ಬಂದ್: ಪೀಣ್ಯ ರಸ್ತೆಯಲ್ಲಿ ಟ್ರಾಫಿಕ್​ನಲ್ಲಿ ಸಿಲುಕಿರುವ ಆ್ಯಂಬುಲೆನ್ಸ್​

ಈ ಹಿನ್ನೆಲೆಯಲ್ಲಿ ಲೋಡ್ ಟೆಸ್ಟಿಂಗ್ ಮಾಡಬೇಕಾಗಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಜನವರಿ 16 ರ ರಾತ್ರಿ 11 ಗಂಟೆಯಿಂದ ಮೂರು ದಿನ ಸ್ಟ್ರಕ್ಚರಲ್ ಇಂಟಿಗ್ರಿಟಿ ಟೆಸ್ಟ್ ನಡೆಸಿದರು. ಇದೀಗ ಲೋಡ್​ ಟೆಸ್ಟಿಂಗ್​ ಮುಗಿದಿದ್ದು, ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ