ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತು, ರಸ್ತೆ ಹದಗೆಟ್ಟು ಟ್ರಾಫಿಕ್ ಸಮಸ್ಯೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನು ಸಮರ್ಥವಾಗಿ ನಿಭಾಯಿಸಿದ ಬೆಂಗಳೂರು ಮಹಾನಗರ ಟ್ರಾಫಿಕ್ ಪೊಲೀಸರಿಗೆ ಜನರು ಸಾಮಾಜಿಕ ಜಾಲತಾಣಗಳ ಮೂಲಕ ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಳೆಯಿಂದಾಗಿ ಅಸ್ತವ್ಯಸ್ತಗೊಂಡಿರುವ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಟ್ರಾಫಿಕ್ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸಂಚಾರಿ ಪೊಲೀಸರು ಮಳೆ ನಡುವೆಯೂ ರೈನ್ ಕೋರ್ಟ್ ಧರಿಸಿ ಕಾರ್ಯಾ ನಿರ್ವಹಿಸಿದ್ದಾರೆ.
ಎಲ್ಲಿಲ್ಲಿ ಮಳೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದಿಯೋ ಆ ಸ್ಥಳಗಳಲ್ಲಿ ಪೊಲೀಸರು ಸುಗಮ ಸಂಚಾರಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದೆಡೆ ಜಲಾವೃತ್ತಗೊಂಡಿರುವ ರಸ್ತೆ ಮಾರ್ಗಗಳಲ್ಲಿ ಸಂಚಾರ ದಟ್ಟಣೆಯಾಗದಂತೆ ಬದಲಿ ಮಾರ್ಗ ಸೂಚಿಸಿದ್ದಾರೆ.
ಸಂಚಾರ ಪೊಲೀಸರು -ಸದಾ ನಿಮ್ಮ ಸೇವೆಯಲ್ಲಿ..
ಚಿಕ್ಕಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆ ಬಿ.ಜಿ.ಎಸ್ ಫ್ಲೇ ಓವರ್ ಮುಂಭಾಗದಲ್ಲಿ ಬಿದ್ದಿದ್ದ ಗುಂಡಿಗಳನ್ನು ಠಾಣೆಯ ಅಧಿಕಾರಿ ಶ್ರೀ ಚಂದ್ರಶೇಖರಯ್ಯ ಎ.ಎಸ್.ಐ ರವರು ತಾತ್ಕಾಲಿಕವಾಗಿ ಮುಚ್ಚಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುತ್ತಾರೆ. pic.twitter.com/V7wIX0Fhdi
— ChickpeteTrafficPs (@chickpetetrfps) September 7, 2022
ಬೆಳ್ಳಂದೂರು ಇಕೋ ಸ್ಪೆಸ್ ಬಳಿ ರಸ್ತೆ ತುಂಬಾ ನೀರು ತುಂಬಿದ್ದ ಪರಿಣಾಮ ಮಡಿವಾಳ ಸಂಚಾರ ಪೊಲೀಸರು ಮೈಕ್ ಹಿಡಿದು ಮಾಹಿತಿ ನೀಡುತ್ತಿದ್ದಾರೆ. ಬಾಣಸವಾಡಿ, ಚಿಕ್ಕಪೇಟೆ ವಿವಿಧ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಚಾರಿ ಪೊಲೀಸರು ಮಳೆ ನಡುವೆಯೂ ರಸ್ತೆಯಲ್ಲಿ ತುಂಬಿದ್ದ ನೀರನ್ನು ಚರಂಡಿಗೆ ಹರಿಯುವಂತೆ ಮಾಡಿ ಯೋಗ್ಯ ಸಂಚಾರಕ್ಕೆ ಅನುವು ಮಾಡುತ್ತಿದ್ದಾರೆ.
ನೀರಿನಲ್ಲಿ ಕೆಟ್ಟು ನಿಂತಿರುವ ವಾಹನಗಳಿಗೂ ಪೊಲೀಸರು ಸಾಥ್ ನೀಡಿ ಮುಂದೆ ಹೋಗಲು ನೆರವು ನೀಡುತ್ತಿದ್ದಾರೆ. ಇವರ ಕಾರ್ಯಕ್ಕೆ ರಾಜಧಾನಿ ಜನರು ಟ್ವಿಟರ್, ಫೇಸ್ಬುಕ್, ವಾಟ್ಸಾಪ್ ಮೂಲಕ ಶ್ಲಾಘನೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಮೂಲಸೌರ್ಕಯ ಕಲ್ಪಿಸದ ಸ್ಥಳೀಯ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಗರಂ ಆಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:48 pm, Wed, 7 September 22