ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು

ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಐವರು ಗಾಯಗೊಂಡಿದ್ದಾರೆ. ಗಾಯಗೊಂಡ ಇರ್ಫಾನ್, ಅಪ್ರೋಜ್ ಪಾಷಾ ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ ಅಂತ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇನ್ನು ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಕೆಲಸಕ್ಕೆ ಸೇರಿದ್ದರು.

ಹೆಚ್ಚಿನ ಸಂಬಳ ಆಸೆಗೆ ಚಾಲಕ ವೃತ್ತಿ ಬಿಟ್ಟು ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿ ಜೀವಕ್ಕೆ ತಂದುಕೊಂಡರು ಕುತ್ತು
ಮೃತ ಮೆಹಬೂಬ್​
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ವಿವೇಕ ಬಿರಾದಾರ

Updated on:Feb 19, 2024 | 9:10 AM

ಬೆಂಗಳೂರು, ಫೆಬ್ರವರಿ 19: ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿರುವ ಪರ್ಫ್ಯೂಮ್ ಕಾರ್ಖಾನೆಯಲ್ಲಿ (Perfume Factory) ಅಗ್ನಿ ಅವಘಡ (Fire accident) ಸಂಭವಿಸಿದ್ದು, ಮೃತಪಟ್ಟ ಮೂವರು ಕಾರ್ಮಿಕರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಗೊಡೌನ್ ಮಾಲಿಕ ಸಲೀಂ (50), ನಾಯಂಡಹಳ್ಳಿ ನಿವಾಸಿ ಚಾಲಕ ಮೆಹಬೂಬ್ (35) ಮೃತರು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಆರ್​ಆರ್​ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಾಯಗೊಂಡವರಲ್ಲಿ 10 ವರ್ಷದ ಬಾಲಕನಿದ್ದು, ಈತನಿಗೆ ಶೇ60 ರಷ್ಟು ಸುಟ್ಟ ಗಾಯಗಳಾಗಿವೆ. ಬಾಲಕ ರಿಹಾನ್ ಸ್ಥಿತಿ ಗಂಭೀರವಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಉಳಿದ ಐವರಿಗೆ ಶೇ25 ರಷ್ಟು ಸುಟ್ಟ ಗಾಯಗಳಾಗಿವೆ.

ಪ್ರಕರಣ ಸಂಬಂಧ ಗೊಡೌನ್ ಮಾಲಿಕ ಸಲೀಂ ಮತ್ತು ಜಾಗದ ಮಾಲೀಕ ವಿಠ್ಠಲ್ ವಿರುದ್ಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಎಫ್​ಐಆರ್​ ದಾಖಲಾಗಿದೆ. ಇನ್ನು ಪ್ರಕರಣ ದಾಖಲಾಗುತ್ತಿದ್ದಂತೆ ವಿಠ್ಠಲ್ ಪರಾರಿಯಾಗಿದ್ದಾನೆ.  ಐಪಿಸಿ ಸೆಕ್ಷನ್ 420, 304, 467, 64, 67 ಅಡಿ ದೂರು ದಾಖಲಾಗಿದೆ.

600 ರೂ. ಕೂಲಿ ಕೆಲಸಕ್ಕೆ ಹೋಗಿ ಜೀವಕ್ಕೆ ಕುತ್ತು

ಹೊಸ ಫ್ಯಾಕ್ಟರಿಯಾಗಿದೆ ಸಂಬಳ ಜಾಸ್ತಿ ಸಿಗುತ್ತೆ, ಅಲ್ಲದೆ ಮನೆ ಪಕ್ಕದಲ್ಲೇ ಫ್ಯಾಕ್ಟರಿ ಇದೆ ಅಂತ ಅಂತ ಗಾಯಾಳುಗಳು ಇರ್ಫಾನ್, ಅಪ್ರೋಜ್ ಪಾಷಾ ಒಂದು ವಾರದ ಹಿಂದಷ್ಟೆ ಕೆಲಸಕ್ಕೆ ಸೇರಿದ್ದರು. ಇರ್ಫಾನ್ ಪಾಷಾ ಸುಗಂಧ ದ್ರವ್ಯ ಫ್ಯಾಕ್ಟರಿಯಲ್ಲಿ ಕ್ಯಾಂಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಆದರೆ ಹೆಚ್ಚಿನ ಸಂಬಳ ನೀಡುತ್ತಾರೆ ಎಂಬ ಆಸೆಯಿಂದ ಡ್ರೈವರ್ ಕೆಲಸ ಬಿಟ್ಟು ಫ್ಯಾಕ್ಟರಿಗೆ ಸೇರಿದ್ದನು.

ಇದನ್ನೂ ಓದಿ: ಹಾಸನದ ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ರೋಗಿಗಳು ಬಚಾವ್​

ಇನ್ನು ರವಿವಾರ (ಫೆ.18) ರಂದು ರಜೆ ಇದ್ದ ಕಾರಣ, ಇರ್ಫಾನ್ ಪಾಷಾಗೆ ಊಟ ಕೊಡಲು ಅಪ್ರೋಜ್ ಪಾಷಾ, ಅಪ್ರೋಜ್ ಪಾಷಾರ ಮಗ ಮತ್ತು ಅಪ್ರೋಜ್ ಪಾಷಾರ ಅಕ್ಕನ ಮಗ ಕಾರ್ಖಾನೆಗೆ ಹೋಗಿದ್ದರು. ಈ ವೇಳೆ ಕಾರ್ಖಾನೆಯಲ್ಲಿ ಧಿಡೀರನೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಐವರು ಹೊರಗೆ ಓಡಿ ಬಂದರೂ, ಬೆಂಕಿ ತಗುಲಿತ್ತು. ಗಾಯಾಳುಗಳು ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ: ಎಸ್‌ಪಿ ಕಾರ್ತಿಕ್‌ ರೆಡ್ಡಿ

ಘಟನಾ ಸ್ಥಳದಲ್ಲಿ ರಾಮನಗರ ಎಸ್‌ಪಿ ಕಾರ್ತಿಕ್‌ ರೆಡ್ಡಿ ಪ್ರತಿಕ್ರಿಯಿಸಿದ್ದು, ರಾಮಸಂದ್ರದಲ್ಲಿ ಸಂಜೆ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಸಲೀಂ ಸೇರಿ ಮೂವರು ಮೃತಪಟ್ಟಿದ್ದಾರೆ. ಗಾಯಾಳು ಐವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

FSL ತಜ್ಞರ ವರದಿ ಬಳಿಕ ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಲಿದೆ. ಗ್ರಾಮ ಪಂಚಾಯಿತಿನಿಂದ ಅನುಮತಿ ಪಡೆದಿದ್ದ ಬಗ್ಗೆ ಪರಿಶೀಲಿಸ್ತಿದ್ದೇವೆ. ವಿಠಲ್ ಎಂಬುವವರ ಜಾಗದಲ್ಲಿ ಸಲೀಂ ಗೋಡೌನ್ ನಡೆಸುತ್ತಿದ್ದ. ಕಳೆದ ಒಂದು ತಿಂಗಳ ಹಿಂದಷ್ಟೆ ಗೋದಾಮು ಆರಂಭಿಸಿದ್ದರು ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:46 am, Mon, 19 February 24

ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ನೀರು ಸೇದುವಾಗ ಏಕಾಏಕಿ ಬಾವಿಗೆ ಬಿದ್ದ 94ರ ವೃದ್ಧೆ: ಮುಂದೇನಾಯ್ತು?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ಒಂದು ವಾರದೊಳಗೆ ಎಲ್ಲವೂ ಸುಖಾಂತ್ಯವಾಗುತ್ತದೆ ಅಂತ ಅಶೋಕ ಹೇಳಿದ್ಯಾಕೆ?
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ವಾರ್ನರ್​ ಬಿಡುಗಡೆ ಬೆನ್ನಲ್ಲೇ ‘ಯುಐ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ನೋಡಿ..
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಬ್ರೇಕಿಂಗ್ ನ್ಯೂಸ್​ ಮೂಲಕವೂ ಕಳಚಿತು ಗೌತಮಿ ಜಾದವ್ ಪಾಸಿಟಿವ್ ಮುಖವಾಡ
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಟೀಂ ಇಂಡಿಯಾವನ್ನು ಅವರ ನೆಲದಲ್ಲೇ ಸೋಲಿಸಬೇಕು; ಶೋಯೆಬ್ ಅಖ್ತರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸ್ವಾಮೀಜಿ ಮಾತಾಡಿದ್ದು ತಪ್ಪು ಎಂದು ಹೇಳಿರುವ ಡಿಕೆ ಶಿವಕುಮಾರ್
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ಸಿದ್ದರಾಮಯ್ಯ, ಮೋದಿ ಹಣ ಹಾಕ್ತಾರೆಂದು ಅಂಚೆ ಕಚೇರಿಯಲ್ಲಿ ಜನವೋ ಜನ..!
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ರಸ್ತೆಯಲ್ಲೇ ಲೇಡಿ ಕಾನ್​ಸ್ಟೆಬಲ್​ ಕೆನ್ನೆಗೆ ಹೊಡೆದು, ಚುಂಬಿಸಿದ ಬೈಕ್ ಸವಾರ
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ಮುಡಾ ಹಗರಣದ ತನಿಖೆ ಚುರುಕು: ವಿಧಾನಸೌಧ ತಲುಪಿದ ಇಡಿ ತನಿಖೆ!
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು
ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು