ಬೆಂಗಳೂರು: ವಿದೇಶಿಗರಿಗೆ ನಕಲಿ ದಾಖಲಾತಿಗಳನ್ನು ತಯಾರಿಸಿಕೊಡುತ್ತಿದ್ದ ವ್ಯಕ್ತಿ ಅರೆಸ್ಟ್
ಕೃಷ್ಣಮೂರ್ತಿ ಎಂಬಾತ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು. ಈತ ವಿದೇಶಿಗರಿಗೆ ಅನಧಿಕೃತವಾಗಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್ ತಯಾರುಮಾಡಿ ಕೊಡುತ್ತಿದ್ದನು. ಈ ಮೂಲಕ ಹೆಚ್ಚಿನ ಹಣ ಸಂಪಾದನೆ ಮಾಡುತ್ತಿದ್ದನು.
ಬೆಂಗಳೂರು ನ.06: ವಿದೇಶಿಗರಿಗೆ ನಕಲಿ ದಾಖಲಾತಿಗಳನ್ನು (Documents) ತಯಾರಿಸಿಕೊಡುತ್ತಿದ್ದ ಓರ್ವ ವ್ಯಕ್ತಿಯನ್ನು ಗಂಗಮ್ಮಗುಡಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಕಮ್ಮಗೊಂಡನಹಳ್ಳಿ ಕೃಷ್ಣಮೂರ್ತಿ ಬಂಧಿತ ಆರೋಪಿ. ಕೃಷ್ಣಮೂರ್ತಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು. ಈತ ವಿದೇಶಿಗರಿಗೆ ಅನಧಿಕೃತವಾಗಿ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಭಾರತೀಯ ಪಾಸ್ ಪೋರ್ಟ್ ತಯಾರುಮಾಡಿ ಕೊಡುತ್ತಿದ್ದನು. ಈ ಮೂಲಕ ಹೆಚ್ಚಿನ ಹಣ ಸಂಪಾದನೆ ಮಾಡುತ್ತಿದ್ದನು. ಈ ವಿಚಾರ ತಿಳಿದು ಪೊಲೀಸರು ಅಂಗಡಿ ಮೇಲೆ ದಾಳಿ ಮಾಡಿದ ವೇಳೆ ಈತನ ಕಾನೂನು ಬಾಹಿರ ಚಟುವಟಿಕೆಗಳು ಬೆಳಕಿಗೆ ಬಂದಿವೆ. ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ಬಾಳ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪ್ರಕರಣ
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕನಕನಗರದಲ್ಲಿರುವ ಎಂಎಸ್‍ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಪತ್ತೆಯಾಗಿದ್ದವು. ಆರೋಪಿಗಳು ನಕಲಿ ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು ಎಂಬ ಅಂಶ ಬಯಲಾಗಿತ್ತು.
ಇದನ್ನೂ ಓದಿ: ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ! ನಕಲಿ ದಾಖಲೆ ತಯಾರಿಸ್ತಿದ್ದವನ ಬಂಧನ
ಮೂವರು ಆರೋಪಿ ಬೆಂಗಳೂರು ನಗರದ ಯಾವುದೇ ಕ್ಷೇತ್ರದ ವೋಟರ್ ಐಡಿ ಹಾಗೂ ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಿದ್ದರು. ಅಲ್ಲದೆ ಒರಿಜಿನಲ್ ಐಡಿ ಕಾರ್ಡ್ ಎಂದು ಹಣ ಪಡೆದು ಸರ್ಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತಿದ್ದ ಆರೋಪದ ಮೇಲೆ ಈ ಮೂವರ ವಿರುದ್ಧ ದೂರು ದಾಖಲಾಗಿತ್ತು.
ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಸಿಸಿಬಿ ಪೊಲೀಸರು ಮೌನೇಶ್, ರಾಘವೇಂದ್ರ, ಭಗತ್ ಎಂಬುವರನ್ನು ಬಂಧಿಸಿದ್ದರು. ದಾಳಿ ವೇಳೆ ಕಂಪ್ಯೂಟರ್ ಸೇರಿ ಹಲವು ವಸ್ತು ಜಪ್ತಿ ಮಾಡಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:46 am, Mon, 6 November 23