ಬೆಂಗಳೂರು: ಪ್ರತಿಷ್ಠಿತ ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ

ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ಪಿಜಿ ಒಂದರ ಮಾಲೀಕನಿಂದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ. ವಿದ್ಯಾರ್ಥಿನಿ ಪಿಜಿಗೆ ಸೇರಿದ ಕೇವಲ 10 ದಿನಗಳಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸದ್ಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಬೆಂಗಳೂರು: ಪ್ರತಿಷ್ಠಿತ ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ
ಪಿಜಿ ಮಾಲೀಕ ಅಶ್ರಫ್

Updated on: Aug 03, 2025 | 10:43 AM

ಬೆಂಗಳೂರು, ಆಗಸ್ಟ್​ 03: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (Student) ಮೇಲೆ ಪಿಜಿ ಮಾಲೀಕನಿಂದ (PG Owner) ಅತ್ಯಾಚಾರವೆಸಗಿರುವಂತಹ ಘಟನೆ ನಡೆದಿದೆ. ಪಿಜಿ ಮಾಲೀಕ ಅಶ್ರಫ್​ನಿಂದ ಕೃತ್ಯವೆಸಗಲಾಗಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಅಶ್ರಫ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಸೋಲದೇವನಹಳ್ಳಿಯಲ್ಲಿರುವ ಪಿಜಿ ಒಂದಕ್ಕೆ ವಿದ್ಯಾರ್ಥಿನಿ ಸೇರಿ ಕೇವಲ 10 ದಿನ ಆಗಿತ್ತು. ಶನಿವಾರ  ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಪಿಜಿ ಮಾಲೀಕ ಅಶ್ರಫ್​​ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ.

ಉಪನ್ಯಾಸಕರಿಂದಲೇ ವಿದ್ಯಾರ್ಥಿ ಮೇಲೆ ಅತ್ಯಾಚಾರ

ಇತ್ತೀಚೆಗೆ ಬೆಂಗಳೂರು ಮೂಲದ ವಿದ್ಯಾರ್ಥಿನಿಗೆ ಬ್ಲ್ಯಾಕ್​ಮೇಲ್ ಮಾಡಿ ಬೆದರಿಕೆ ಹಾಕಿ ಒಬ್ಬರಾದ್ಮೇಲೆ ಒಬ್ಬರು ಉಪನ್ಯಾಸಕರಿಂದಲೇ ಅತ್ಯಾಚಾರವೆಸಗಿದ್ದ ಘಟನೆ ನಡೆದಿತ್ತು. ಮೂಡಬಿದಿರೆಯ ಕಾಲೇಜು ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರು ಅತ್ಯಾಚಾರ ಎಸಗಿದ್ದರು. ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಲೆಕ್ಚರರ್ ಸಂದೀಪ್, ಸಂದೀಪನ ಗೆಳೆಯ ಅನೂಪ್ ಎಂಬಾತ ಸೇರಿ ವಿದ್ಯಾರ್ಥಿನಿ ಮೇಲೆ ಹೇಯ ಕೃತ್ಯವೆಸಗಿದ್ದರು.

ಇದನ್ನೂ ಓದಿ
ಬದಲಾಗಲಿದೆ ಪ್ರಜ್ವಲ್ ಜೀವನ ಶೈಲಿ:ಜೈಲಿನೊಳಗೆ 8 ಗಂಟೆ ಕೆಲಸ, ಕೂಲಿ ಫಿಕ್ಸ್​!
ಪ್ರಜ್ವಲ್​​ಗೆ ಜೀವಿತಾವಧಿ: ಯಾವ ಸೆಕ್ಷನ್ ಅಡಿ ಎಷ್ಟೆಷ್ಟು ಶಿಕ್ಷೆ, ದಂಡ?
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಆರೋಪಿಗಳು ಅರೆಸ್ಟ್

ಇದನ್ನೂ ಓದಿ: ಗಾಂಜಾ ನಶೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ಬೆಂಗಳೂರು ಹೊರವಲಯದಲ್ಲಿ ಭೀಕರ ಕೃತ್ಯ

ಮೂಡಬಿದಿರೆ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ಹತ್ತಿರವಾಗಿದ್ದ. ಮೊಬೈಲ್​ನಲ್ಲಿ ಚಾಟಿಂಗ್ ಮಾಡಿ ವಿದ್ಯಾರ್ಥಿನಿ ಜೊತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ಇದೇ ನರೇಂದ್ರ ವಿದ್ಯಾರ್ಥಿನಿಯನ್ನ ಬೆಂಗಳೂರಿಗೆ ಕರೆದುಕೊಂಡು ಬಂದು ಮಾರತ್ತಹಳ್ಳಿಯಲ್ಲಿರುವ ಗೆಳೆಯನ ರೂಮ್​ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ.

ಉಪನ್ಯಾಸಕ ನರೇಂದ್ರನ ಬಳಿಕ ಬಯಾಲಜಿ ಉಪನ್ಯಾಸಕ ಸಂದೀಪ್ ಸಹ ವಿದ್ಯಾರ್ಥಿನಿ ಮೇಲೆ ಅಟ್ಟಹಾಸ ಮೆರೆದಿದ್ದಾನೆ. ಅದ್ಯಾವಾಗ ವಿದ್ಯಾರ್ಥಿನಿ ವಿರೋಧ ವ್ಯಕ್ತಪಡಿಸಿದಳೋ, ಬ್ಲ್ಯಾಕ್​ಮೇಲ್ ಮಾಡಿದ್ದಾನೆ. ನೀನು ನರೇಂದ್ರ ಜತೆಗಿರುವ ಫೋಟೊ, ವಿಡಿಯೋ ನನ್ನ ಬಳಿ ಇದೆ ರಿಲೀಸ್ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ. ಬಳಿಕ ಗೆಳೆಯ ಅನೂಪ್​ ನಿವಾಸಕ್ಕೆ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು.

ಇದನ್ನೂ ಓದಿ: ಬೆಳಗಾವಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ್ದ ಆರೋಪಿಗಳು ಅರೆಸ್ಟ್​

ಹೀಗೆ, ಉಪನ್ಯಾಸಕರಿಂದಲೇ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ, ಪೋಷಕರಿಗೆ ತಿಳಿಸಿದ್ದಳು. ಅಲ್ಲದೇ, ಬೆಂಗಳೂರಲ್ಲಿ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಳು. ಸಂತ್ರಸ್ತೆಯ ದೂರಿನ ಮೇರೆಗೆ ಮಾರತ್ತಹಳ್ಳಿ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಬಳಿಕ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.