ಬೆಂಗಳೂರಿನ ಅಕ್ರಮ ಪಿಜಿಗಳ ವಿರುದ್ಧ ಜಿಬಿಎ ಸಮರ: ನಿಯಮ ಉಲ್ಲಂಘಿಸಿದ ಪಿಜಿಗಳಿಗೆ ಮೂಲಸೌಕರ್ಯಗಳು ಕಟ್!

ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ಧ ಜಿಬಿಎ ಕ್ರಮಕ್ಕೆ ಮುಂದಾಗಿದೆ. ಕೋರ್ಟ್ ಸೂಚನೆಯಂತೆ ನಡೆಸಿದ ಸಮೀಕ್ಷೆಯಲ್ಲಿ 10 ಸಾವಿರಕ್ಕೂ ಹೆಚ್ಚು ಪಿಜಿಗಳು ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ ಎಂದು ಜಿಬಿಎ ತಿಳಿಸಿದೆ. ನಿಯಮ ಉಲ್ಲಂಘಿಸುವವರಿಗೆ 15 ದಿನಗಳ ನೋಟಿಸ್ ನೀಡಲು ಸೂಚಿಸಲಾಗಿದೆ.

ಬೆಂಗಳೂರಿನ ಅಕ್ರಮ ಪಿಜಿಗಳ ವಿರುದ್ಧ ಜಿಬಿಎ ಸಮರ: ನಿಯಮ ಉಲ್ಲಂಘಿಸಿದ ಪಿಜಿಗಳಿಗೆ ಮೂಲಸೌಕರ್ಯಗಳು ಕಟ್!
ಸಾಂದರ್ಭಿಕ ಚಿತ್ರ
Image Credit source: tv9
Edited By:

Updated on: Oct 03, 2026 | 8:52 AM

ಬೆಂಗಳೂರು, ಅಕ್ಟೋಬರ್ 3: ಬೆಂಗಳೂರು ನಗರದಲ್ಲಿ ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಪಿಜಿಗಳ ವಿರುದ್ಧ ಜಿಬಿಎ ಕ್ರಮಕ್ಕೆ ಮುಂದಾಗಿದೆ. ಕೋರ್ಟ್ ಸೂಚನೆಯಂತೆ ಬೆಂಗಳೂರಿನ ಪಿಜಿಗಳ ಕುರಿತು ಸಮೀಕ್ಷೆ ನಡೆಸಲಾಗಿದ್ದು, ನಗರದಲ್ಲಿರುವ ಪಿಜಿಗಳ ಪೈಕಿ ಶೇ 40ರಷ್ಟು ನಿಯಮ ಉಲ್ಲಂಘನೆ ಮಾಡಿರುವುದು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ ಎಂದು ಜಿಬಿಎ ತಿಳಿಸಿದೆ. ಅಕ್ರಮ ಪಿಜಿಗಳ ಕುರಿತ ಮಾಹಿತಿಯನ್ನು ಕೋರ್ಟ್ ಮುಂದೆ ಮಂಡಿಸಲು ಜಿಬಿಎ ಮುಂದಾಗಿದೆ.

10 ಸಾವಿರಕ್ಕೂ ಹೆಚ್ಚು ಪಿಜಿಗಳಿಂದ ನಿಯಮ ಉಲ್ಲಂಘನೆ

ಜಿಬಿಎ ನಡೆಸಿದ ಸಮೀಕ್ಷೆಯ ಪ್ರಕಾರ, ಬೆಂಗಳೂರಿನಲ್ಲಿ ಒಟ್ಟು 25 ಸಾವಿರ ಪಿಜಿಗಳಿದ್ದು, 10 ಸಾವಿರಕ್ಕೂ ಹೆಚ್ಚು ಪಿಜಿಗಳು ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿವೆ. ಕೆಲವು ಪಿಜಿಗಳಿಗೆ ಅಗತ್ಯ ಲೈಸೆನ್ಸ್, ಕಟ್ಟಡದ ಅನುಮೋದಿತ ನಕ್ಷೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಇಲ್ಲದಿರುವುದು ಗಮನಕ್ಕೆ ಬಂದಿದೆ ಎಂದು ತಿಳಿಸಲಾಗಿದೆ.

ಕೋರ್ಟ್ ಸೂಚನೆ ಮೇರೆಗೆ ಜಿಬಿಎ ಕ್ರಮ

ನಿಯಮ ಉಲ್ಲಂಘಿಸುವ ಪಿಜಿಗಳಿಗೆ 15 ದಿನಗಳ ನೋಟಿಸ್ ಜಾರಿಗೊಳಿಸಿ, ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಜಿಬಿಎ ಅಧಿಕಾರಿಗಳು, ಬೆಸ್ಕಾಂ ಹಾಗೂ ಜಲಮಂಡಳಿ ಅಧಿಕಾರಿಗಳು ಮೊದಲ ಸುತ್ತಿನ ಸಭೆ ನಡೆಸಿ ಅಕ್ರಮ ಪಿಜಿಗಳ ವಿರುದ್ಧ ಕ್ರಮಕ್ಕೆ ಸಿದ್ಧತೆ ನಡೆಸಿದ್ದಾರೆ.

ಪಿಜಿ ಮಾಲೀಕರು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಮಾರ್ಗಸೂಚಿಗಳು

  • ಪ್ರವೇಶ ಮತ್ತು ನಿರ್ಗಮನದಲ್ಲಿ ಸಿಸಿಟಿವಿ ಕಡ್ಡಾಯ. 30 ದಿನಗಳ ವಿಡಿಯೋ ಬ್ಯಾಕಪ್ ಇರಬೇಕು.
  • ಪ್ರತಿಯೊಬ್ಬ ನಿವಾಸಿಗೆ ಕನಿಷ್ಠ 70 ಚದರ ಅಡಿ ವಿಸ್ತೀರ್ಣದ ಜಾಗ ಕಡ್ಡಾಯ.
  • ನೈರ್ಮಲ್ಯ ಹೊಂದಿರುವ ಸ್ನಾನಗೃಹ ಮತ್ತು ಶೌಚಾಲಯದ ವ್ಯವಸ್ಥೆ ಕಡ್ಡಾಯ.
  • ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.
  • ಸ್ವಂತ ಅಡುಗೆಮನೆ ಇದ್ದರೆ 3 ತಿಂಗಳೊಳಗೆ FSSAI ಲೈಸೆನ್ಸ್ ಪಡೆಯಬೇಕು.
  • ನಿವಾಸಿಗಳ ಸುರಕ್ಷತೆಗೆ 24 ಗಂಟೆಯೂ ಒಬ್ಬ ಸೆಕ್ಯುರಿಟಿ ಸಿಬ್ಬಂದಿ ಕಡ್ಡಾಯ.
  • ವಾಣಿಜ್ಯ ಪರವಾನಗಿ ಪಡೆಯುವ ಮುನ್ನ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಕಡ್ಡಾಯ.
  • ಪ್ರಥಮ ಚಿಕಿತ್ಸಾ ವ್ಯವಸ್ಥೆಯನ್ನು ಕಡ್ಡಾಯವಾಗಿ ಇರಿಸಬೇಕು.

ನಗರದಲ್ಲಿ 25 ಸಾವಿರಕ್ಕೂ ಹೆಚ್ಚು ಪಿಜಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಪಿಜಿ ಅಸೋಸಿಯೇಷನ್ ತಿಳಿಸಿದೆ. ಜಿಬಿಎ ಪ್ರಕಾರ, 10 ಸಾವಿರಕ್ಕೂ ಹೆಚ್ಚು ಪಿಜಿಗಳು ಕಾನೂನು ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಕಾನೂನು ಉಲ್ಲಂಘಿಸುವ ಪಿಜಿಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ತಮ್ಮ ಆಕ್ಷೇಪವಿಲ್ಲ ಎಂದು ಪಿಜಿ ಅಸೋಸಿಯೇಷನ್ ತಿಳಿಸಿದೆ.

ಇದನ್ನೂ ಓದಿ: ಕಡತ ವಿಲೇವಾರಿ ತ್ವರಿತಗೊಳಿಸಲು ಸರ್ಕಾರ ದಿಟ್ಟ ಹೆಜ್ಜೆ: ಡಿಪಿಎಆರ್ ಸುತ್ತೋಲೆಯ ವಿವರ ಹೀಗಿದೆ 

ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿರುವ ಪಿಜಿಗಳ ವಿರುದ್ಧ ಜಿಬಿಎ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:50 am, Sat, 3 October 26

ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
Loading...
Unable to load recommendations.
Follow Us