ಶಾಲಾ-ಕಾಲೇಜು ಸುತ್ತಮುತ್ತಲಿನ ಅಂಗಡಿಗಳ ಮೇಲೆ ಪೊಲೀಸ್​ ದಾಳಿ; ಸಿಗರೇಟ್ ಸೇಲ್ ಮಾಡ್ತಿದ್ದ 19 ಮಾಲೀಕರ ವಿರುದ್ಧ ಕೇಸ್

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 28, 2024 | 9:35 PM

ಇತ್ತೀಚೆಗೆ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ಅಂತಹವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿತ್ತು. ಅದರ ಬೆನ್ನಲ್ಲೆ ಇಂದು(ಮಾ.28) ದಕ್ಷಿಣ ವಿಭಾಗದ ಪೊಲೀಸರು, ಶಾಲಾ-ಕಾಲೇಜುಗಳ ಅಕ್ಕಪಕ್ಕದ ಕಾಂಡಿಮೆಂಟ್ಸ್ ಹಾಗೂ ಬೀಡಾ ಸ್ಟಾಲ್‌ಗಳ ಮೇಲೆ ದಾಳಿ ನಡೆಸಿದ್ದಾರೆ.

ಶಾಲಾ-ಕಾಲೇಜು ಸುತ್ತಮುತ್ತಲಿನ ಅಂಗಡಿಗಳ ಮೇಲೆ ಪೊಲೀಸ್​ ದಾಳಿ; ಸಿಗರೇಟ್ ಸೇಲ್ ಮಾಡ್ತಿದ್ದ 19 ಮಾಲೀಕರ ವಿರುದ್ಧ ಕೇಸ್
ಶಾಲಾ-ಕಾಲೇಜು ಸುತ್ತಮುತ್ತಲಿನ ಅಂಗಡಿಗಳ ಮೇಲೆ ಪೊಲೀಸ್​ ದಾಳಿ
Follow us on

ಬೆಂಗಳೂರು, ಮಾ.28: ಇತ್ತೀಚೆಗೆ ಸಿಗರೇಟ್​​ (cigarette)ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ ಕುರಿತ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ, ಅಂತಹವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಾಲಾ-ಕಾಲೇಜುಗಳ ಅಕ್ಕಪಕ್ಕದ ಕಾಂಡಿಮೆಂಟ್ಸ್ ಹಾಗೂ ಬೀಡಾ ಸ್ಟಾಲ್‌ಗಳ ಮೇಲೆ ದಕ್ಷಿಣ ವಿಭಾಗದ ಪೊಲೀಸರ ದಾಳಿ ನಡೆಸಿದ್ದಾರೆ.

ನಿಯಮ ಬಾಹಿರವಾಗಿ ಸಿಗರೇಟ್ ಮಾರಾಟ ಮಾಡ್ತಿದ್ದವರ ವಿರುದ್ದ ಕೇಸ್​ ದಾಖಲು

ಈ ವೇಳೆ ದಕ್ಷಿಣ ವಿಭಾಗದ 243 ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟದ ಕುರಿತು ಪರಿಶೀಲನೆ ನಡೆಸಿದ್ದು, ನಿಯಮ ಬಾಹಿರವಾಗಿ ಸಿಗರೇಟ್ ಮಾರಾಟ ಮಾಡುತ್ತಿದ್ದ 19 ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಜೊತೆಗೆ 78 ಅಂಗಡಿ ಮಾಲೀಕರಿಗೆ ದಕ್ಷಿಣ ವಿಭಾಗದ ಪೊಲೀಸರು ದಂಡ ಹಾಕಿದ್ದಾರೆ.

ಇದನ್ನೂ ಓದಿ:ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಪೊಲೀಸ್​ ದಾಳಿ: 7.50 ಲಕ್ಷ ರೂ ಮೌಲ್ಯದ ಮರಳು ಜಪ್ತಿ

ವಿಧೇಯಕ ಮಂಡಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಸಚಿವ ದಿನೇಶ್​ ಗುಂಡೂರಾವ್​ ಮಂಡನೆ ಮಾಡಿದ್ದರು. ಬಳಿಕ ಮಾತನಾಡಿದ್ದ ಅವರು ,‘ಹುಕ್ಕಾಬಾರ್‌ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಬಾರ್‌ಗಳನ್ನು ಆರಂಭಿಸಿದ್ದಾರೆ. ಸಿಗರೇಟ್ ಸೇದೋದೇ ತಪ್ಪು ಅಂತ ಹೇಳಿದರೆ, ಮತ್ತೊಂದು ರೂಪದಲ್ಲಿ ತಂದಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ಹೇಳಿದ್ದರು. ಜೊತೆಗೆ ಕಾನೂನಿನಲ್ಲಿ 18 ವರ್ಷದೊಳಗಿನವರಿಗೆ ಮಾರಬಾರದು ಎಂದು ಇತ್ತು. ಅದನ್ನು 21 ವರ್ಷಕ್ಕೆ  ಏರಿಸಲಾಗಿದೆ. ಶಾಲಾ – ಕಾಲೇಜುಗಳ ಮೂರು ಮೀಟರ್ ಒಳಗೆ ಮಾರಾಟ ಮಾಡಬಾರದು ಅಂತ ನಿಯಮ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರಿಗೆ ಇನ್ನೂರು ದಂಡ ಇತ್ತು. ಈಗ ಸಿಗರೇಟ್ ಸೇದುವವರಿಗೆ 1000 ರೂ. ದಂಡ ಹಾಕಲಾಗುವುದು ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ