AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಸ್ತೆಗಳಿಗೆ ಬ್ಯಾರಿಕೇಡ್; ನಗರದಾದ್ಯಂತ ಪೊಲೀಸರ ಹದ್ದಿನಕಣ್ಣು

ಬೆಂಗಳೂರಿನ ಪ್ರಮುಖ ಫ್ಲೈ ಓವರ್ ಗಳು, ಮುಖ್ಯ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿರುವ ಪೊಲೀಸರು, ನಗರದಾದ್ಯಂತ ಚೆಕ್ ಪಾಯಿಂಟ್​ಗಳಲ್ಲಿ ಹದ್ದಿನ ಕಣ್ಣು ಇಟ್ಟಿದ್ದಾರೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. 

ಬೆಂಗಳೂರಿನ ರಸ್ತೆಗಳಿಗೆ ಬ್ಯಾರಿಕೇಡ್; ನಗರದಾದ್ಯಂತ ಪೊಲೀಸರ ಹದ್ದಿನಕಣ್ಣು
ಪೊಲೀಸ್
guruganesh bhat
|

Updated on: Apr 27, 2021 | 10:37 PM

Share

ಬೆಂಗಳೂರು: ಇಂದು ರಾತ್ರಿಯಿಂದ ಆರಂಭವಾದ ಕೊರೊನಾ ಕರ್ಫ್ಯೂ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಸಂಪೂರ್ಣ ಸ್ತಬ್ಧವಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಕೆಲ‌ ಆಟೋಗಳು ಸಂಚರಿಸುತ್ತಿವೆ. ಬೆಂಗಳೂರಿನ ಪ್ರಮುಖ ರಸ್ತೆಗಳು, ಫ್ಲೈಓವರ್​ಗಳು ಬಂದ್ ಆಗಿವೆ. ಅನಗತ್ಯವಾಗಿ ವಾಹನ ರಸ್ತೆಗಿಳಿದರೆ ಪೊಲೀಸರು ವಾಹನ ವಶಪಡಿಸಿಕೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ನಾಕಾಬಂದಿ ಹಾಕಲಾಗಿದೆ. 

ಬೆಂಗಳೂರು ಆಗ್ನೇಯ ವಿಭಾಗದಲ್ಲಿ ವೀರಸಂದ್ರ ಚೆಕ್ ಪೋಸ್ಟ್ , ಬೊಮ್ಮನಹಳ್ಳಿ, ಸಿಲ್ಕ್‌ಬೋರ್ಡ್, ಮಡಿವಾಳ, ಸೇಂಟ್ಸ್ ಜಾನ್ಸ್, ಆಡುಗೋಡಿ ಜಂಕ್ಷನ್, ಕೋರಮಂಗಲ ಎನ್​ಜಿವಿ ಕಾಂಪ್ಲೆಕ್ಸ್, ಬೆಂಗಳೂರು ಪಶ್ಚಿಮ ವಿಭಾಗದಲ್ಲಿ ಮಾರುಕಟ್ಟೆ ಮೇಲ್ಸೇತುವೆ, ಕೆ.ಆರ್. ಮಾರುಕಟ್ಟೆ ಸರ್ಕಲ್, ಮೈಸೂರು ರಸ್ತೆ‌, ಕೆ.ಪಿ.ಅಗ್ರಹಾರ, ಕೆಂಗೇರಿ ಮುಖ್ಯರಸ್ತೆ, ಮಾಗಡಿ ರೋಡ್‌ನಲ್ಲಿ ಚೆಕ್‌ಪೋಸ್ಟ್ ಹಾಕಲಾಗಿದೆ.

ಬೆಂಗಳೂರು ಈಶಾನ್ಯ ವಿಭಾಗದಲ್ಲಿ ಏರ್‌ಪೋರ್ಟ್ ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಸಂಪಿಗೆಹಳ್ಳಿ, ವಿದ್ಯಾರಣ್ಯಪುರ ಸರ್ಕಲ್, ಬಿಇಎಲ್ ಸರ್ಕಲ್, ಯಲಹಂಕ ಮುಖ್ಯರಸ್ತೆ ಬಳಿ ತಪಾಸಣೆ ನಡೆಸಲಾಗುತ್ತಿದೆ.  ಬೆಂಗಳೂರು ಪೂರ್ವ ವಿಭಾಗದಲ್ಲಿ ಟ್ರಿನಿಟಿ ಸರ್ಕಲ್, ಬಿಆರ್‌ವಿ ಜಂಕ್ಷನ್, ನಾಗವಾರ ಜಂಕ್ಷನ್, ಬಾಣಸವಾಡಿ , ಕಮ್ಮನಹಳ್ಳಿ ರಸ್ತೆ, ಮಣಿಪಾಲ್ ಹಾಸ್ಪಿಟಲ್ ಜಂಕ್ಷನ್, ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿ ಚೆಕ್‌ಪೋಸ್ಟ್ ಹಾಕಲಾಗಿದೆ.

ಬೆಂಗಳೂರು ಕೇಂದ್ರ ವಿಭಾಗದಲ್ಲಿ ಕೆ.ಆರ್.ಸರ್ಕಲ್, ಟೌನ್ ಹಾಲ್, ಚಿನ್ನಸ್ವಾಮಿ ಸ್ಟೇಡಿಯಂ, ಕಾರ್ಪೊರೇಷನ್​ ಬಳಿ, ಬೆಂಬೆಂಗಳೂರು ಉತ್ತರ ವಿಭಾಗದಲ್ಲಿ ಯಶವಂತಪುರ ಸರ್ಕಲ್, ತುಮಕೂರು ರಸ್ತೆ, ಗಂಗಮ್ಮನಗುಡಿ ಸರ್ಕಲ್, ಪೀಣ್ಯ, ಗೊರಗುಂಟೆ ಪಾಳ್ಯ ಬಳಿ ಪೊಲೀಸರು ನಾಕಾಬಂದಿ ಹಾಕಿದ್ದಾರೆ.

ಬೆಂಗಳೂರಿನ ಪ್ರಮುಖ ಫ್ಲೈ ಓವರ್ ಗಳು, ಮುಖ್ಯ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿರುವ ಪೊಲೀಸರು, ನಗರದಾದ್ಯಂತ ಚೆಕ್ ಪಾಯಿಂಟ್​ಗಳಲ್ಲಿ ಹದ್ದಿನ ಕಣ್ಣು ಇಟ್ಟಿದ್ದಾರೆ. ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

(Bengaluru Police arrange barricades in roads flyovers are closed)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ