ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶಿ ಪ್ರಜೆ ಮೊಹಮ್ಮದ್ ಸಿದ್ದಿಕ್ ನಕಲಿ ಭಾರತೀಯ ಪಾಸ್ಪೋರ್ಟ್, ವೋಟರ್ ಐಡಿ ಮತ್ತು ಪ್ಯಾನ್ ಕಾರ್ಡ್ ಪಡೆದಿದ್ದಾನೆ.ಇಷ್ಟೇ ಅಲ್ಲದೇ ಇತರೆ ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ಇದೇ ರೀತಿಯ ಸಹಾಯ ಮಾಡುತ್ತಿದ್ದ ಎಂದು ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ.ಈತನ ವಿರುದ್ಧ ಫಾರಿನರ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲಸಿದ್ದ ಬಾಂಗ್ಲಾದೇಶ ಪ್ರಜೆಯ ಬಂಧನ
ಕಾಡುಗೋಡಿ ಪೊಲೀಸ್​ ಠಾಣೆ
Edited By: ವಿವೇಕ ಬಿರಾದಾರ

Updated on: Mar 12, 2025 | 11:15 AM

ಬೆಂಗಳೂರು, ಮಾರ್ಚ್​ 12: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಪ್ರಜೆಯನ್ನು ಕಾಡುಗೋಡಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಮೊಹಮ್ಮದ್ ಸಿದ್ಧಿಕ್ (55) ಬಂಧಿತ ಬಾಂಗ್ಲಾದೇಶ ಪ್ರಜೆ. ಮೊಹಮ್ಮದ್ ಸಿದ್ಧಿಕ್ 2006ರಲ್ಲಿ ಅಕ್ರಮವಾಗಿ ಭಾರತಕ್ಕೆ ಬಂದಿದ್ದನು. ಪಶ್ಚಿಮ ಬಂಗಾಳದ ಮೆಲ್ಪಾ ಜಿಲ್ಲೆಯ ಶಾಲೆಯೊಂದರಲ್ಲಿ ನಕಲಿ ವರ್ಗಾವಣೆ ಪ್ರಮಾಣ ಪತ್ರ ಪಡೆದಿದ್ದನು.

ಬಳಿಕ, ಮೊಹಮ್ಮದ್ ಸಿದ್ಧಿಕ್ ಬೆಂಗಳೂರಿನ ಕಾಡುಗೋಡಿಯ ದೊಡ್ಡಬನಹಳ್ಳಿ ಬಳಿ ವಾಸವಿದ್ದನು. ಇಲ್ಲಿ, ನಕಲಿ ವರ್ಗಾವಣೆ ಪತ್ರದ ಮೂಲಕ ಭಾರತದ ಪಾಸ್​ಪೋರ್ಟ್, ವೋಟರ್​ಐಡಿ, ಪಾನ್ ಕಾರ್ಡ್ ಪಡೆದಿದ್ದಾಗಿ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ. ಮೊಹಮ್ಮದ್ ಸಿದ್ಧಿಕ್ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಫಾರಿನರ್ಸ್ ಆಕ್ಟ್, BNS 336(3), 340(2), 339ರಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮೊಹಮ್ಮದ್ ಸಿದ್ದಿಕ್ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಿರುವ ಬಾಂಗ್ಲಾ ವಲಸಿಗರಿಂದ ಹಣ ಪಡೆದುಕೊಂಡು, ಭಾರತೀಯ ದಾಖಲಾತಿಗಳಾದ ಪಾಸ್​ಪೋರ್ಟ್​, ಪ್ಯಾನ್​ಕಾರ್ಡ್​ಗಳನ್ನು ಮಾಡಿಸಿಕೊಂಡಿದ್ದಾನೆ. ಈತನ ಜೊತೆಗೆ ಇನ್ನೂ 15-20 ಬಾಂಗ್ಲಾ ವಲಸಿಗರು ಜನ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಫ್​ಐಆರ್​ನಲ್ಲಿ ದಾಖಲಾಗಿದೆ.

ಇದನ್ನೂ ಓದಿ
ಹುಬ್ಬಳ್ಳಿಯಲ್ಲಿ ನಕಲಿ ಆಹಾರ ಇಲಾಖೆ ಅಧಿಕಾರಿಗಳ ಹಾವಳಿ: ಇಬ್ಬರ ಬಂಧನ
ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಹಿಂದೆ ಖಾವಿ ಕೃಪೆ: ಸ್ವಾಮೀಜಿ ಶಾಮೀಲು
ಸೈಫ್ ಮೇಲೆ ದಾಳಿ ಮಾಡಿದ ಆರೋಪಿಗೆ 5 ದಿನ ಪೊಲೀಸ್ ಕಸ್ಟಡಿ ವಿಧಿಸಿದ ಕೋರ್ಟ್
ಬೆಂಗಳೂರು: ಆನೇಕಲ್​​ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

ಇದನ್ನೂ ಓದಿ: ಬಾಂಗ್ಲಾದೇಶದ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರು ಎನ್​ಐ ವಿಶೇಷ ನ್ಯಾಯಾಲಯ

ಮೊಹಮ್ಮದ್ ಸಿದ್ದಿಕ್​ನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಬೆಂಗಳೂರು ನಗರದ ಥಣಿಸಂದ್ರದ ವ್ಯಕ್ತಿಯೊಬ್ಬರು ಪ್ಯಾನ್ ​ಕಾರ್ಡ್​, ವೋಟರ್​ ಐಡಿ ಗುರುತಿನ ಚೀಟಿಗಳನ್ನು ಮಾಡಿಸಿಕೊಟ್ಟಿದ್ದಾರೆ. ಮತ್ತು ಶಾಲೆಯ ವರ್ಗಾವಣೆ ಪತ್ರದ ಆಧಾರದ ಮೇಲೆ ಭಾರತದ ಪಾಸ್​ಪೋರ್ಟ್​ ಅನ್ನು ಏಜೆಂಟ್​ ಮಾಡಿಸಿಕೊಟ್ಟಿದ್ದಾರೆ ಎಂದು ಬಾಯಿಬಿಟ್ಟಿದ್ದಾನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:32 am, Wed, 12 March 25

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us