ಬೆಂಗಳೂರು: ಬಸ್​ನಲ್ಲಿ ಪ್ರಯಾಣಿಕರ ಲ್ಯಾಪ್​ಟಾಪ್​ ಕದಿಯುತ್ತಿದ್ದ ಆರೋಪಿಗಳ ಬಂಧನ, 39 ಲ್ಯಾಪ್‌ಟಾಪ್​ ವಶಕ್ಕೆ

ರಿಸರ್ವ್ ಬಸ್ ಗಳನ್ನೇ ಟಾರ್ಗೆಟ್ ಮಾಡಿ ಪ್ರಯಾಣಿಕರ ವಸ್ತುಗಳನ್ನು ಕದಿಯುತ್ತಿದ್ದ ಇಬ್ಬರು ಖದೀಮರನ್ನು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 39 ಲ್ಯಾಪ್‌ಟಾಪ್​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಬಸ್​ನಲ್ಲಿ ಪ್ರಯಾಣಿಕರ ಲ್ಯಾಪ್​ಟಾಪ್​ ಕದಿಯುತ್ತಿದ್ದ ಆರೋಪಿಗಳ ಬಂಧನ, 39 ಲ್ಯಾಪ್‌ಟಾಪ್​ ವಶಕ್ಕೆ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Aug 21, 2023 | 10:07 AM

ಬೆಂಗಳೂರು, (ಆಗಸ್ಟ್​ 21): ಬಸ್​ನಲ್ಲಿ(Bus) ಪ್ರಯಾಣಿಕರ ಲ್ಯಾಪ್​ಟಾಪ್​ ಕದಿಯುತ್ತಿದ್ದ ಆಂಧ್ರ ಮೂಲದ ಇಬ್ಬರು ಕಳ್ಳರನ್ನು(thieves) ಬೆಂಗಳೂರಿನ(Bengaluru) ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 39 ಲ್ಯಾಪ್‌ಟಾಪ್(laptop)​ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರ ಟು ಬೆಂಗಳೂರು, ಬೆಂಗಳೂರು ಟು ಆಂಧ್ರ ರಿಸರ್ವ್ ಬಸ್ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಸಾಮಿಗಳು, ಪ್ರಯಾಣಿಕರ ಸೋಗಿನಲ್ಲಿ ಬಸ್ ಏರುತ್ತಿದ್ದರು. ಬಳಿಕ ಪ್ರಯಾಣಿಕರು ನಿದ್ರೆಗೆ ಜಾರಿದಾಗ ದುಬಾರಿ ಬೆಲೆಯ ಮೊಬೈಲ್, ಲ್ಯಾಪ್ ಟಾಪ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದರು.

ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ವಿಚಾರಣೆಗೊಳಪಡಿಸಿದ್ದಾರೆ. ಬಸ್ ನಲ್ಲಿ ಬೆಲೆಬಾಳುವ ವಸ್ತುಗಳನ್ನ ಕೊಂಡೊಯ್ಯುವ ಪ್ರಯಾಣಿಕರು ಎಚ್ಚರದಿಂದ ಇರಬೇಕು. ಅಲ್ಲದೇ ತಣ್ಣನೆ ಗಾಳಿ ಬರುತ್ತಿದೆ ಎಂದು ಮೈ ಮರೆತು ನಿದ್ದೆಗೆ ಜಾರಿದ್ರೆ ನಿಮ್ಮ ವಸ್ತುಗಳು ಕ್ಷಣದಲ್ಲೇ ಮಾಯವಾಗುತ್ತವೆ. ಈ ಬಗ್ಗೆ ಬಸ್​ನಲ್ಲಿ ಪ್ರಯಾಣಿಸುವವರು ಖದೀಮರಿಂದ ಎಚ್ಚರದಿಂದ ಇರಬೇಕು.

ಇದನ್ನೂ ಓದಿ: ಮಂಗಳೂರು: ಪೊಲೀಸ್ ಹಾಗೂ RAW ಅಧಿಕಾರಿ ಎಂದು ಕಾಲೇಜಿನಲ್ಲಿ ಬಿಲ್ಡಪ್ ಕೊಡ್ತಿದ್ದ ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್

ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮನೆಗಳ್ಳತನ

ಬೆಂಗಳೂರು: ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮನೆಗಳ್ಳತನ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ಹನುಮಂತರಾಜು ಎಂಬುವರ ಮನೆ ಬೀಗ ಮುರಿದು 100ಗ್ರಾಂ ಚಿನ್ನ,50ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಹನುಮಂತರಾಜು ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಮನೆ ಪಕ್ಕದವರು ಕರೆ ಮಾಡಿ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ.

ಇನ್ನಷ್ಟು ಬೆಂಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:30 am, Mon, 21 August 23

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು